ದಿನಕ್ಕೆ ಒಂದು ಕಪ್ ಕಂದು ಅಕ್ಕಿ ತಿನ್ನುವುದರಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ; ಇಲ್ಲಿದೆ ಸಂಪೂರ್ಣ ಮಾಹಿತಿ
ಕನ್ನಡ ಸುದ್ದಿ  /  ಜೀವನಶೈಲಿ  /  ದಿನಕ್ಕೆ ಒಂದು ಕಪ್ ಕಂದು ಅಕ್ಕಿ ತಿನ್ನುವುದರಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ; ಇಲ್ಲಿದೆ ಸಂಪೂರ್ಣ ಮಾಹಿತಿ

ದಿನಕ್ಕೆ ಒಂದು ಕಪ್ ಕಂದು ಅಕ್ಕಿ ತಿನ್ನುವುದರಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಬಿಳಿ ಅಕ್ಕಿಗಿಂತ ಕಂದು ಅಕ್ಕಿ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಕಂದು ಅಕ್ಕಿಯಲ್ಲಿ ನಾರಿನಂಶ ಅಧಿಕವಾಗಿದ್ದು, ಹಲವು ಆರೋಗ್ಯ ಲಾಭಗಳಿವೆ. ಕಂದು ಅಕ್ಕಿಯಲ್ಲಿ ಫೈಟೊಕೆಮಿಕಲ್ಸ್,ಫ್ಲೇವನಾಯ್ಡ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ದಿನಕ್ಕೆ ಒಂದು ಕಪ್ ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ದಿನಕ್ಕೆ ಒಂದು ಕಪ್ ಕಂದು ಅಕ್ಕಿ ತಿನ್ನುವುದರಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ
ದಿನಕ್ಕೆ ಒಂದು ಕಪ್ ಕಂದು ಅಕ್ಕಿ ತಿನ್ನುವುದರಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ (Canva)

ಬಿಳಿ ಅಕ್ಕಿಗಿಂತ ಕಂದು ಅಕ್ಕಿ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಕಂದು ಅಕ್ಕಿಯಲ್ಲಿ ನಾರಿನಂಶ ಅಧಿಕವಾಗಿದ್ದು, ಇದನ್ನು ತಿನ್ನುವುದರಿಂದ ಮಲಬದ್ಧತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಒಂದು ಕಪ್ ಕಂದು ಅಕ್ಕಿಯ ಅನ್ನ (ಬ್ರೌನ್ ರೈಸ್) ತಿನ್ನುವುದರಿಂದ ನಿಮಗೆ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದನ್ನು ತಿನ್ನುವುದರಿಂದ ಮಲಬದ್ಧತೆಯಂತಹ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಈ ಕಂದು ಅಕ್ಕಿಯಲ್ಲಿ ಫೈಟೊಕೆಮಿಕಲ್ಸ್, ಫ್ಲೇವನಾಯ್ಡ್ ಮತ್ತು ಉತ್ಕರ್ಷಣ ನಿರೋಧಕಗಳಿವೆ. ಒಮ್ಮೆಯಾದರೂ ಇದನ್ನು ತಿನ್ನಲು ಪ್ರಯತ್ನಿಸಿ. ಇದನ್ನು ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಕಂದು ಅಕ್ಕಿಯ ಆರೋಗ್ಯ ಪ್ರಯೋಜನಗಳು

ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ: ನಾರಿನಂಶ ಅಧಿಕವಾಗಿರುವುದರಿಂದ ಮಲಬದ್ಧತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಒಂದು ಕಪ್‌ನಷ್ಟು ಕಂದು ಅಕ್ಕಿಯ ಅನ್ನ ತಿನ್ನುವುದರಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ.

ಮಧುಮೇಹಿಗಳಿಗೆ ಪ್ರಯೋಜನಕಾರಿ: ಪ್ರತಿದಿನ ಕಂದು ಅಕ್ಕಿಯ ಅನ್ನ ತಿನ್ನುವುದು ತುಂಬಾ ಒಳ್ಳೆಯದು. ಇದು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಈ ಅಕ್ಕಿ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವನ್ನು ಹೊಂದಿದೆ. ಹೀಗಾಗಿ ಮಧುಮೇಹಿಗಳಿಗೆ ಇದು ಬಹಳ ಪ್ರಯೋಜನಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಮತ್ತು ಇನ್ಸುಲಿನ್‌ನಿಂದ ಉಂಟಾಗುವ ತೊಡಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಕಾರಿ: ಕಂದು ಅಕ್ಕಿಯ ಅನ್ನ ತಿನ್ನುವುದು ಬಾಡಿ ಮಾಸ್ ಇಂಡೆಕ್ಸ್ (ಬಿಎಂಐ) ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗೆಯೇ ಎಚ್ಡಿಎಲ್ (ಉತ್ತಮ) ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಮತ್ತು ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ನೀವು ತ್ವರಿತವಾಗಿ ತೂಕ ಇಳಿಕೆಗೆ ಬಯಸಿದರೆ ಕಂದು ಅಕ್ಕಿಯ ಅನ್ನ ತಿನ್ನುವುದು ಉತ್ತಮ.

ನರಗಳಿಗೆ ಶಕ್ತಿ ತುಂಬುತ್ತದೆ: ಕಂದು ಅಕ್ಕಿಯು ಮೆದುಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ. ಆ ಮೂಲಕ ಪಾರ್ಕಿನ್ಸನ್‌ನಂತಹ ನರವೈಜ್ಞಾನಿಕ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ನರಗಳಿಗೆ ಬಲ ಮತ್ತು ಶಕ್ತಿಯನ್ನು ನೀಡುತ್ತದೆ.

ಹೃದಯದ ಆರೋಗ್ಯ: ಕಂದು ಅಕ್ಕಿಯಲ್ಲಿ ಮೆಗ್ನೀಸಿಯಮ್ ಮತ್ತು ಪ್ರೊಯಾಂಥೋಸಯಾನಿಡಿನ್ಸ್ ಸಮೃದ್ಧವಾಗಿದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಮತ್ತು ಪರಿಧಮನಿಯ ಹೃದಯ ಕಾಯಿಲೆಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಹಾಲುಣಿಸುವ ತಾಯಂದಿರಿಗೂ ಪ್ರಯೋಜನಕಾರಿ: ಮೊಳಕೆಯೊಡೆದ ಕಂದು ಅಕ್ಕಿಯನ್ನು ತಿನ್ನುವುದರಿಂದ ಹಾಲುಣಿಸುವ ತಾಯಂದಿರ ಮನಸ್ಥಿತಿಯನ್ನು ಸುಧಾರಿಸುತ್ತದೆ. ಇದು ಅವರನ್ನು ಖಿನ್ನತೆಯಿಂದ ರಕ್ಷಿಸಲು, ಆಯಾಸವನ್ನು ನಿವಾರಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಉತ್ತಮ ನಿದ್ರೆ: ಕಂದು ಅಕ್ಕಿ ತಿನ್ನುವುದು ಮೆಲಟೋನಿನ್ ಮತ್ತು ಸಿರೊಟೋನಿನ್ ಹಾರ್ಮೋನುಗಳನ್ನು ಉತ್ಪಾದಿಸುತ್ತದೆ. ಇದು ನಿದ್ರೆಯ ಗುಣಮಟ್ಟವನ್ನು ಸುಧಾರಿಸಲು ಮತ್ತು ನಿದ್ರೆಯ ಅಸ್ವಸ್ಥತೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಮೂಳೆಯ ಆರೋಗ್ಯ: ಈ ಅಕ್ಕಿಯಲ್ಲಿ ಹೆಚ್ಚಿನ ಮೆಗ್ನೀಸಿಯಮ್ ಅಂಶ ಇದ್ದು, ಮೂಳೆ ವ್ಯವಸ್ಥೆಗೆ ಶಕ್ತಿಯನ್ನು ನೀಡಲು ಸಹಾಯ ಮಾಡುತ್ತದೆ. ಸಂಧಿವಾತದಂತಹ ಮೂಳೆ ಕಾಯಿಲೆಯಂತಹ ಕಾಯಿಲೆಗಳನ್ನು ತಡೆಯುತ್ತದೆ.

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.)

Whats_app_banner