ನಿದ್ದೆಯಿಲ್ಲದೆ ಒದ್ದಾಡುತ್ತಿದ್ದೀರಾ: ಪ್ರತಿದಿನ ಸೇವಿಸಿ ಅರಶಿನ ಹಾಲು, ಇದರಲ್ಲಡಗಿದೆ ಅನೇಕ ಆರೋಗ್ಯ ಪ್ರಯೋಜನ-health tips health benefits of turmeric milk golden milk promotes better sleep prk ,ಜೀವನಶೈಲಿ ಸುದ್ದಿ
ಕನ್ನಡ ಸುದ್ದಿ  /  ಜೀವನಶೈಲಿ  /  ನಿದ್ದೆಯಿಲ್ಲದೆ ಒದ್ದಾಡುತ್ತಿದ್ದೀರಾ: ಪ್ರತಿದಿನ ಸೇವಿಸಿ ಅರಶಿನ ಹಾಲು, ಇದರಲ್ಲಡಗಿದೆ ಅನೇಕ ಆರೋಗ್ಯ ಪ್ರಯೋಜನ

ನಿದ್ದೆಯಿಲ್ಲದೆ ಒದ್ದಾಡುತ್ತಿದ್ದೀರಾ: ಪ್ರತಿದಿನ ಸೇವಿಸಿ ಅರಶಿನ ಹಾಲು, ಇದರಲ್ಲಡಗಿದೆ ಅನೇಕ ಆರೋಗ್ಯ ಪ್ರಯೋಜನ

ಅರಿಶಿನ ಹಾಲನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಲಿಗೆ ಅರಶಿನದ ಮಿಶ್ರಣ ಮಾತ್ರವಲ್ಲದೆ ಕರಿಮೆಣಸು,ಶುಂಠಿ ಮತ್ತು ದಾಲ್ಚಿನ್ನಿ ಮುಂತಾದ ಇತರ ಮಸಾಲೆಗಳನ್ನು ಸಹ ಸೇರಿಸಲಾಗುತ್ತದೆ. ಶತಮಾನಗಳಿಂದ ಚಾಲ್ತಿಯಲ್ಲಿರುವ ಅರಶಿನ ಹಾಲು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಅರಶಿನ ಹಾಲಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.
ಅರಶಿನ ಹಾಲಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ. (Shutterstock)

ಅರಿಶಿನ ಹಾಲು, ಇದೊಂದು ಸಾಂಪ್ರದಾಯಿಕ ಆಯುರ್ವೇದ ಪಾನೀಯವಾಗಿದೆ. ಇದನ್ನು ಶತಮಾನಗಳಿಂದ ವಿವಿಧ ಸಂಸ್ಕೃತಿಗಳಲ್ಲಿ ವಿಶೇಷವಾಗಿ ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತಿದೆ. ಹಾಲಿಗೆ ಅರಿಶಿನ, ಕರಿಮೆಣಸು, ಶುಂಠಿ ಮತ್ತು ದಾಲ್ಚಿನ್ನಿಗಳಂತಹ ಮಸಾಲೆಗಳನ್ನು ಬೆರೆಸಿ ತಯಾರಿಸಲಾಗುತ್ತದೆ. ಇದನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಮಕ್ಕಳಿಗೆ ಶೀತ, ಕೆಮ್ಮು ಇತ್ಯಾದಿಗಳಿಂದ ಬಳಲಿದ್ರೆ ಅರಶಿನ ಹಾಲನ್ನು ಕೊಡುತ್ತಾರೆ. ಇದರಿಂದ ಮಕ್ಕಳಿಗೆ ನೆಗಡಿ ಕಡಿಮೆಯಾಗುತ್ತದೆ. ಹಾಗಿದ್ದರೆ ಅರಶಿನ ಹಾಲಿನ ಇತರೆ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ:

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧ: ಅರಶಿನವು ಕರ್ಕ್ಯುಮಿನ್ ಅನ್ನು ಹೊಂದಿರುತ್ತದೆ. ಇದು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಉತ್ಕರ್ಷಣ ನಿರೋಧಕಗಳು ದೇಹವು ಸ್ವತಂತ್ರ ರಾಡಿಕಲ್‍ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಅರಶಿನ ಹಾಲನ್ನು ನಿಯಮಿತವಾಗಿ ಸೇವಿಸುವ ಮೂಲಕ ದೇಹಕ್ಕೆ ಉತ್ಕರ್ಷಣ ನಿರೋಧಕಗಳು ದೊರಕುತ್ತವೆ. ಇದು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ದೇಹದಿಂದ ಟಾಕ್ಸಿನ್ ಅನ್ನು ಹೊರಹಾಕುವಲ್ಲಿಯೂ ಇದು ಪ್ರಯೋಜನಕಾರಿಯಾಗಿದೆ.

ಉರಿಯೂತದಿಂದ ರಕ್ಷಣೆ: ದೀರ್ಘಕಾಲದ ಉರಿಯೂತವು ಸಂಧಿವಾತ, ಹೃದ್ರೋಗ ಮತ್ತು ಮಧುಮೇಹದಂತಹ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅರಿಶಿನದ ಕರ್ಕ್ಯುಮಿನ್ ಪ್ರಬಲವಾದ ಉರಿಯೂತದ ಪರಿಣಾಮಗಳನ್ನು ಹೊಂದಿದೆ ಎಂದು ಹೇಳಲಾಗಿದೆ. ಇದು ಉರಿಯೂತಕ್ಕೆ ಸಂಬಂಧಿಸಿದ ರೋಗಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅರಶಿನ ಹಾಲಿನ ನಿಯಮಿತ ಸೇವನೆಯು ವಿಶೇಷವಾಗಿ ಸಂಧಿವಾತದಿಂದ ಬಳಲುತ್ತಿರುವವರಿಗೆ ಕೀಲು ನೋವು ಮತ್ತು ಬಿಗಿತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಾತ್ರಿ ವೇಳೆ ಅರಶಿನ ಹಾಲನ್ನು ಸೇವಿಸುವುದರಿಂದ ಆರೋಗ್ಯ ಸುಧಾರಿಸುವಲ್ಲಿ ಸಹಾಯಕವಾಗಿದೆ.

ಜೀರ್ಣಕ್ರಿಯೆಗೆ ಸಹಕಾರಿ: ಅರಶಿನ ಹಾಲನ್ನು ಸೇವಿಸುವುದರಿಂದ ಜೀರ್ಣಕಾರಿ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಅರಿಶಿನವು ಪಿತ್ತರಸದ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಕರ್ಕ್ಯುಮಿನ್‌ನ ಉರಿಯೂತದ ಗುಣಲಕ್ಷಣಗಳು ಜೀರ್ಣಾಂಗವನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ಹೊಟ್ಟೆ ಉಬ್ಬರ, ಅನಿಲ ಮತ್ತು ಅಜೀರ್ಣದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ. ಈ ಮೂಲಕ ಸುಧಾರಿತ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಹೊಟ್ಟೆ ಅಸ್ವಸ್ಥತೆಯಿಂದ ಬಳಲುತ್ತಿರುವವರು ಅರಶಿನ ಹಾಲನ್ನು ಕುಡಿಯುವುದರಿಂದ ಪ್ರಯೋಜನವನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ಹೆಚ್ಚಲು ಸಹಕಾರಿ: ಅರಿಶಿನವು ಅದರ ಆಂಟಿವೈರಲ್, ಆಂಟಿಫಂಗಲ್ ಮತ್ತು ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳಿಂದಾಗಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಪರಿಣಾಮಕಾರಿಯಾಗಿದೆ. ಅರಶಿನ ಹಾಲಿನ ನಿಯಮಿತ ಸೇವನೆಯು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ದೇಹವನ್ನು ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಮಲಗುವ ಮುನ್ನ ಒಂದು ಕಪ್ ಅರಶಿನ ಹಾಲನ್ನು ಕುಡಿಯುವುದರಿಂದ ದೇಹದ ನೈಸರ್ಗಿಕ ರಕ್ಷಣೆಯನ್ನು ಬೆಂಬಲಿಸಲು ಅತ್ಯುತ್ತಮ ಮಾರ್ಗವಾಗಿದೆ.

ಉತ್ತಮ ನಿದ್ದೆಯನ್ನು ಉತ್ತೇಜಿಸಲು ಸಹಕಾರಿ: ಸಂಜೆ ವೇಳೆಗೆ ಅರಶಿನ ಹಾಲನ್ನು ಸೇವಿಸುವುದರಿಂದ ಶಾಂತ ನಿದ್ದೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಬೆಚ್ಚಗಿನ ಹಾಲನ್ನು ಕುಡಿಯುವುದರಿಂದ ಸ್ವತಃ ವಿಶ್ರಾಂತಿಯನ್ನು ಉತ್ತೇಜಿಸುತ್ತದೆ. ಅರಶಿನದಲ್ಲಿರುವ ಕರ್ಕ್ಯುಮಿನ್ ಆತಂಕ ಮತ್ತು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಬಗ್ಗೆ ಸಂಶೋಧಕರು ನಡೆಸಿರುವ ಕೆಲವೊಂದು ಅಧ್ಯಯನಗಳಿಂದ ತಿಳಿದು ಬಂದಿದೆ. ಮಲಗುವ ಮುನ್ನ ಬೆಚ್ಚಗಿನ ಒಂದು ಕಪ್ ಅರಶಿನ ಹಾಲನ್ನು ಕುಡಿಯುವುದರಿಂದ ವಿಶ್ರಾಂತಿ ಪಡೆಯಲು ಮತ್ತು ಮಲಗಿದ ಕೂಡಲೇ ನಿದ್ದೆ ಮಾಡುವಲ್ಲಿ ಸಹಾಯಕವಾಗಿದೆ.

ಚರ್ಮದ ಆರೋಗ್ಯವನ್ನು ಬೆಂಬಲಿಸಲು ಸಹಕಾರಿ: ಅರಿಶಿನದಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಗುಣಲಕ್ಷಣಗಳಿಂದಾಗಿ, ಇದರ ನಿಯಮಿತ ಸೇವನೆಯು ಚರ್ಮಕ್ಕೆ ಪ್ರಯೋಜನವನ್ನು ನೀಡುತ್ತದೆ. ಅರಶಿನ ಹಾಲು ಉರಿಯೂತ ಮತ್ತು ಸ್ವತಂತ್ರ ರಾಡಿಕಲ್ ಹಾನಿಯನ್ನು ಕಡಿಮೆ ಮಾಡುವ ಮೂಲಕ ಸ್ಪಷ್ಟವಾದ ಚರ್ಮವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದು ಸಾಮಾನ್ಯವಾಗಿ ಮೊಡವೆ ಮತ್ತು ಚರ್ಮದ ಸುಕ್ಕುಗಳನ್ನು ಹೋಗಲಾಡಿಸುವಲ್ಲಿ ಸಹಕಾರಿ. ಅರಶಿನ ಹಾಲನ್ನು ಕುಡಿಯುವುದರಿಂದ ಕಾಂತಿಯುತ ಮೈಬಣ್ಣವನ್ನೂ ಪಡೆಯಲು ಸಹಕಾರಿಯಾಗಿದೆ. ಅರಶಿನ ಹಾಲಿನ ನಿಯಮಿತ ಸೇವನೆಯು ಆರೋಗ್ಯಕ್ಕೆ ಮಾತ್ರವಲ್ಲ ತ್ವಚೆಯ ಕಾಂತಿ ಹೆಚ್ಚಿಸಲೂ ಪ್ರಯೋಜನಕಾರಿಯಾಗಿದೆ.

mysore-dasara_Entry_Point