ಓಟ್ಸ್‌ನಿಂದ ಡಾರ್ಕ್ ಚಾಕೊಲೇಟ್‍ವರೆಗೆ: ಹೃದಯ ಆರೋಗ್ಯಕ್ಕಾಗಿ ಸೇವಿಸಬಹುದಾದ ಆಹಾರಗಳಿವು
ಆರೋಗ್ಯಕರ,ಹೃದಯ ಸ್ನೇಹಿ ಆಹಾರಗಳನ್ನು ಸೇವಿಸುವುದರಿಂದ ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಅಷ್ಟೇ ಅಲ್ಲ ಈ ಆಹಾರಗಳು ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ತಡೆಯಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕಾಗಿ ಯಾವ ಆಹಾರಗಳನ್ನು ಸೇವಿಸಬಹುದು, ಇಲ್ಲಿದೆ ಮಾಹಿತಿ.
ಇಂದಿನ ದಿನಗಳಲ್ಲಿ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ತುಂಬಾನೇ ಮುಖ್ಯ. ಹೃದಯವು ದೇಹದ ಒಂದು ಪ್ರಮುಖ ಅಂಗವಾಗಿದ್ದು, ಅದು ನಮ್ಮ ದೈನಂದಿನ ಚಟುವಟಿಕೆಗಳನ್ನು ಬೆಂಬಲಿಸಲು ದಣಿವರಿಯಿಲ್ಲದೆ ಕೆಲಸ ಮಾಡುತ್ತದೆ. ಅದರ ಯೋಗಕ್ಷೇಮವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರರ ಆದ್ಯತೆಯಾಗಿರಬೇಕು. ನಾವು ಆಯ್ಕೆಮಾಡುವ ಆಹಾರಗಳು ಕೊಲೆಸ್ಟ್ರಾಲ್ ಮಟ್ಟಗಳು, ರಕ್ತದೊತ್ತಡ ಇತ್ಯಾದಿ ಹೃದಯದ ಕಾರ್ಯಚಟುವಟಿಕೆ ಮೇಲೆ ಪರಿಣಾಮ ಬೀರುತ್ತದೆ. ನಾವು ಸೇವಿಸುವ ಆಹಾರವು ಹೃದಯದ ಆರೋಗ್ಯದ ಮೇಲೆ ಪ್ರಮುಖ ಪಾತ್ರ ವಹಿಸುತ್ತದೆ. ಇಂದು ಬಹುತೇಕ ಮಂದಿ ತೂಕ ಇಳಿಕೆಗೆ ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಡಯೆಟ್‍ನಲ್ಲಿ ಹೃದಯ ಸ್ನೇಹಿ ಆಹಾರಗಳನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ ಹೃದಯದ ಆರೋಗ್ಯವನ್ನು ಬೆಂಬಲಿಸಬಹುದು. ಹಾಗಿದ್ದರೆ ಯಾವೆಲ್ಲಾ ಆಹಾರ ತಿನ್ನಬಹುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ:
ಹೃದಯದ ಆರೋಗ್ಯವನ್ನು ಉತ್ತೇಜಿಸುವ ಆಹಾರಗಳು
ಬೀಜಗಳು ಮತ್ತು ಒಣಹಣ್ಣುಗಳು: ಬಾದಾಮಿ, ವಾಲ್ನಟ್ಸ್ ಮತ್ತು ಚಿಯಾ ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿವೆ. ಇವುಗಳು ಹೃದಯದ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ. ಹಾಗೆಯೇ ಬೀಜಗಳನ್ನೂ ಕೂಡ ಆಹಾರದಲ್ಲಿ ಸೇರಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಪೋಷಕಾಂಶಗಳು, ಆರೋಗ್ಯಕರ ಕೊಬ್ಬುಗಳು, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಒಣ ಹಣ್ಣುಗಳು ಮತ್ತು ಬೀಜಗಳು, ಹೃದಯರಕ್ತನಾಳದ ಆರೋಗ್ಯವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಇವುಗಳ ನಿಯಮಿತ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಹೃದಯದ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ತಾಜಾ ಹಣ್ಣುಗಳು: ನೇರಳೆ ಹಣ್ಣುಗಳು ಮತ್ತು ಸ್ಟ್ರಾಬೆರಿಗಳಂತಹ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಫೈಬರ್ ಅಂಶ ಸಮೃದ್ಧವಾಗಿದೆ. ಇವು ಉರಿಯೂತವನ್ನು ಕಡಿಮೆ ಮಾಡಲು, ಹೃದ್ರೋಗದಿಂದ ರಕ್ಷಿಸಲು ಸಹಕಾರಿಯಾಗಿದೆ. ಆಹಾರದಲ್ಲಿ ಅವುಗಳನ್ನು ಲಘು ಅಥವಾ ದ್ರವವಾಗಿ ಸೇವಿಸುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಓಟ್ಸ್ ಮತ್ತು ಧಾನ್ಯಗಳು: ಓಟ್ಸ್ ಮತ್ತು ಧಾನ್ಯಗಳು ಹೃದಯದ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ ಎಂದು ಗುರುತಿಸಲ್ಪಟ್ಟಿವೆ. ಇದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದನ್ನು ಬೆಳಗ್ಗಿನ ತಿಂಡಿಯಾಗಿ ಸೇವಿಸಬಹುದು. ಇದನ್ನು ಸೇವಿಸುವುದರಿಂದ ಹಸಿವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಓಟ್ಸ್ ಮತ್ತು ಧಾನ್ಯಗಳು ಹೃದಯರಕ್ತನಾಳದ ಆರೋಗ್ಯಕ್ಕೆ ಉತ್ತಮವಾಗಿದೆ. ಫೈಬರ್, ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಓಟ್ಸ್ ಮತ್ತು ಧಾನ್ಯಗಳು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುವಲ್ಲಿ, ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಮತ್ತು ಉರಿಯೂತವನ್ನು ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಹೃದಯದ ಆರೋಗ್ಯಕ್ಕೆ ಓಟ್ಸ್ ಮತ್ತು ಧಾನ್ಯಗಳನ್ನು ಸೇವಿಸುವುದರಿಂದ ಪ್ರಯೋಜನವನ್ನು ಪಡೆಯಬಹುದು.
ತರಕಾರಿಗಳು: ಕ್ಯಾರೆಟ್, ಸೌತೆಕಾಯಿ ಮತ್ತು ದೊಣ್ಣೆ ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಇವುಗಳಲ್ಲಿ ಆರೋಗ್ಯಕರ ಕೊಬ್ಬಿನ ಜೊತೆಗೆ ನಾರಿನಾಂಶ ಹೇರಳವಾಗಿದೆ. ಇದರಲ್ಲಿರುವ ಪ್ರೋಟೀನ್‍ಗಳು ಹೃದಯ ಸ್ನೇಹಿ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.
ಡಾರ್ಕ್ ಚಾಕೊಲೇಟ್: ಡಾರ್ಕ್ ಚಾಕೊಲೇಟ್ ಫ್ಲೇವನಾಯ್ಡ್‌ಗಳನ್ನು ಹೊಂದಿರುತ್ತದೆ. ಇದು ರಕ್ತದ ಹರಿವನ್ನು ಹೆಚ್ಚಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಡಾರ್ಕ್ ಚಾಕೊಲೇಟ್‍ನಲ್ಲಿ ಶೇ.70ಕ್ಕಿಂತ ಹೆಚ್ಚಿನ ಕೋಕೋವನ್ನು ಬಳಸಲಾಗುತ್ತದೆ. ಕಡುಬಯಕೆಗಳನ್ನು ಪೂರೈಸಲು ಸಹಕಾರಿಯಾಗಿರುವ ಡಾರ್ಕ್ ಚಾಕೋಲೇಟ್ ಆರೋಗ್ಯದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮಗಳಿಲ್ಲದೆ ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ.