10ನೇ ತರಗತಿ ಪಾಸಾಗಿದ್ದರೆ ಸಾಕು ಭಾರತೀಯ ಅಂಚೆ ಇಲಾಖೆಯಲ್ಲಿ ಕಾರು ಚಾಲಕ ಉದ್ಯೋಗ ಸಿಗುತ್ತೆ; ಹೀಗೆ ಅರ್ಜಿ ಸಲ್ಲಿಸಿ
Indian Post Office Recruitment: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಕಾರು ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 8 ರೊಳಗೆ ಆಫ್ ಲೈನ್ ಮೋಡ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

10 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶ ಸಿಕ್ಕಿದೆ. ಭಾರತೀಯ ಅಂಚೆ ಇಲಾಖೆ ಒಟ್ಟು 25 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ನೇಮಕಾತಿಗೆ ಸೇರಲು ಆಫ್ ಲೈನ್ ಮಾದರಿಯಲ್ಲಿ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8ರ ಶನಿವಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕಡಿಮೆ ಶಿಕ್ಷಣ ಪಡೆದು ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ.
ಹುದ್ದೆಗಳ ವಿವರ
ಭಾರತೀಯ ಅಂಚೆ ಇಲಾಖೆ ಹೊರಡಿಸಿದ ನೇಮಕಾತಿಯಲ್ಲಿ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕೇಂದ್ರ ವಲಯದಲ್ಲಿ 1, ಎಂಎಂಎಸ್ ಚೆನ್ನೈನಲ್ಲಿ 15, ದಕ್ಷಿಣ ವಲಯದಲ್ಲಿ 4 ಮತ್ತು ಪಶ್ಚಿಮ ವಲಯದಲ್ಲಿ 5 ಹುದ್ದೆಗಳಿವೆ. ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಅಭ್ಯರ್ಥಿಯು ಲಘು ಮತ್ತು ಭಾರಿ ಮೋಟಾರು ವಾಹನಗಳ ಮಾನ್ಯ ಚಾಲನಾ ಪರವಾನಗಿ ಮತ್ತು ಕನಿಷ್ಠ ಮೂರು ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ಅರ್ಜಿಯ ಕೊನೆಯ ದಿನಾಂಕದಂದು ಅಂದರೆ ಫೆಬ್ರವರಿ 8 ರಂತೆ ವಯಸ್ಸನ್ನು ಲೆಕ್ಕಹಾಕಲಾಗುತ್ತದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ಕೇಂದ್ರ ವೇತನ ಆಯೋಗದ (ಸಿಪಿಸಿ) ಪ್ರಕಾರ ಲೆವೆಲ್ 2 ವೇತನ ಶ್ರೇಣಿಯಲ್ಲಿ ತಿಂಗಳಿಗೆ 19,900 ರೂಪಾಯಿ ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳು
ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಈ ನೇಮಕಾತಿಯಲ್ಲಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಅಭ್ಯರ್ಥಿಯ ಚಾಲನಾ ಅನುಭವ ಮತ್ತು ಅರ್ಹತೆಗಳನ್ನು ಒಳಗೊಂಡಿರುತ್ತದೆ. ಇದರ ನಂತರ, ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸೀನಿಯರ್ ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ನಂ.37, ಗ್ರೀಮ್ಸ್ ರಸ್ತೆ, ಚೆನ್ನೈ - 600006. ಈ ವಿಳಾಸಕ್ಕೆ ಕಳುಹಿಸಿಕೊಡಬೇಕಾಗುತ್ತದೆ. ಅರ್ಜಿ ನಮೂನೆಯನ್ನು ಫೆಬ್ರವರಿ 8 ರೊಳಗೆ ಕಳುಹಿಸಬೇಕು. ಅಭ್ಯರ್ಥಿಯ ಅರ್ಜಿ ಕೊನೆಯ ದಿನಾಂಕದೊಳಗೆ ಸೇರಬೇಕು. ಆನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಮೊದಲಿಗೆ, ಇಂಡಿಯಾ ಪೋಸ್ಟ್ www.indiapost.gov.in ಅಧಿಕೃತ ವೆಬ್ ಸೈಟ್ ಗೆ ಹೋಗಿ ನಂತರ ಆಫ್ ಲೈನ್ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಸರಿಯಾಗಿ ಭರ್ತಿ ಮಾಡಿ ಕಳುಹಿಸಬೇಕು. ನಂತರ ಅರ್ಜಿ ನಮೂನೆಯನ್ನು ಅಗತ್ಯವಿರುವ ಎಲ್ಲಾ ದಾಖಲೆಗಳು, ಪಾಸ್ ಪೋರ್ಟ್ ಗಾತ್ರದ ಫೋಟೊದೊಂದಿಗೆ ಗೊತ್ತುಪಡಿಸಿದ ವಿಳಾಸಕ್ಕೆ ಕಳುಹಿಸಿ.
