ಚಳಿಗಾಲದಲ್ಲಿ ಒಣ ಚರ್ಮದ ಕಾಳಜಿ ಹೀಗಿರಲಿ: ಮೊಡವೆ, ಕಲೆಗಳನ್ನು ನಿವಾರಿಸಲು ಸಹಕಾರಿ ಕಿತ್ತಳೆ ಸಿಪ್ಪೆಯ ಫೇಸ್ ಮಾಸ್ಕ್
ಕಿತ್ತಳೆ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮವೋ ಅದೇ ರೀತಿ ಅದರ ಸಿಪ್ಪೆ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಚಳಿಗಾಲದಲ್ಲಿ ಚರ್ಮವು ಬೇಗ ಒಣಗುತ್ತದೆ. ತಂಪಾದ ಗಾಳಿಯಿಂದಾಗಿ ಚರ್ಮದಲ್ಲಿನ ತೇವಾಂಶವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಹೀಗಾಗಿ ಕಿತ್ತಳೆ ಸಿಪ್ಪೆಯ ಫೇಸ್ ಮಾಸ್ಕ್ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಫೇಸ್ ಮಾಸ್ಕ್ ಮಾಡುವ ವಿಧಾನ ಇಲ್ಲಿದೆ.
ಚಳಿಗಾಲದಲ್ಲಿ ಚರ್ಮವು ಬೇಗನೆ ಒಣಗುತ್ತದೆ. ತಂಪಾದ ಗಾಳಿಯಿಂದಾಗಿ ಚರ್ಮದಲ್ಲಿನ ತೇವಾಂಶವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದು ಚರ್ಮವನ್ನು ನಿರ್ಜೀವ ಮತ್ತು ಒರಟಾಗಿ ಕಾಣುವಂತೆ ಮಾಡುತ್ತದೆ. ಚಳಿಗಾಲದಲ್ಲಿ ಒಣ ಚರ್ಮದೊಂದಿಗೆ ಹೋರಾಡುತ್ತಿದ್ದರೆ, ಇಲ್ಲಿ ನೀಡಿರುವ ಸಲಹೆಯನ್ನು ಅನುಸರಿಸಬಹುದು. ಸಾಮಾನ್ಯವಾಗಿ ಕಿತ್ತಳೆ ತಿಂದು ಅದರ ಸಿಪ್ಪೆಯನ್ನು ಎಸೆಯುವವರೇ ಹೆಚ್ಚು. ಆದರೆ, ಇದು ಚರ್ಮಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಕಿತ್ತಳೆ ಸಿಪ್ಪೆಯ ಫೇಸ್ ಪ್ಯಾಕ್ ಅನ್ನು ಮುಖಕ್ಕೆ ಹಚ್ಚುವುದರಿಂದ ಚರ್ಮವು ಹೊಳೆಯುತ್ತದೆ.
ಬಾಲಿವುಡ್ ನಟಿ ದಿಯಾ ಮಿರ್ಜಾ ಕೂಡ ಈ ಫೇಸ್ ಪ್ಯಾಕ್ ಅನ್ನು ಅನ್ವಯಿಸುತ್ತಾರಂತೆ. ಚರ್ಮ ಹೊಳೆಯುವಂತಾಗಲು ಈ ಫೇಸ್ ಮಾಸ್ಕ್ ಅನ್ನು ಮನೆಯಲ್ಲಿಯೇ ಸರಳವಾಗಿ ಮಾಡಬಹುದು. ಕಿತ್ತಳೆ ಸಿಪ್ಪೆಯ ಫೇಸ್ ಪ್ಯಾಕ್ ಅನ್ನು ಮುಖಕ್ಕೆ ಹಚ್ಚುವುದರಿಂದ ಚರ್ಮದ ಮೇಲಿನ ಮೊಡವೆ, ಕಲೆಗಳನ್ನು ತೆಗೆದುಹಾಕುತ್ತದೆ ಮತ್ತು ಚರ್ಮವನ್ನು ಪ್ರಕಾಶಮಾನವಾಗಿಸುತ್ತದೆ. ಕಿತ್ತಳೆ ಸಿಪ್ಪೆಯ ಫೇಸ್ ಪ್ಯಾಕ್ ತಯಾರಿಸುವುದು ಹೇಗೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಕಿತ್ತಳೆ ಸಿಪ್ಪೆಯ ಫೇಸ್ ಪ್ಯಾಕ್ ತಯಾರಿಸುವ ವಿಧಾನ
ಮನೆಯಲ್ಲಿ, ಸರಳವಾಗಿ ಫೇಸ್ ಪ್ಯಾಕ್ ತಯಾರಿಸಬಹುದು. ಇದಕ್ಕಾಗಿ ಕಿತ್ತಳೆ ಸಿಪ್ಪೆಗಳು, ಟೊಮೆಟೊ ಮತ್ತು ಒಂದು ಚಮಚ ರೋಸ್ ವಾಟರ್ ಇದ್ದರೆ ಸಾಕು. ಕಿತ್ತಳೆ ಸಿಪ್ಪೆಯ ಫೇಸ್ ಪ್ಯಾಕ್ ತಯಾರಿಸಲು, ಮೊದಲನೆಯದಾಗಿ ಕಿತ್ತಳೆ ಸಿಪ್ಪೆಯನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿ. ಅಥವಾ ಹಸಿ ಸಿಪ್ಪೆಯನ್ನು ಪೇಸ್ಟ್ ಆಗಿ ರುಬ್ಬಿಕೊಳ್ಳಬಹುದು. ಈಗ ಅದಕ್ಕೆ ಟೊಮೆಟೊ ರಸ ಮತ್ತು ಸ್ವಲ್ಪ ರೋಸ್ ವಾಟರ್ ಸೇರಿಸಿ ಪೇಸ್ಟ್ ಮಾಡಿ, ಮಿಶ್ರಣ ಮಾಡಿ. ಇದನ್ನು ಸಂಪೂರ್ಣವಾಗಿ ಮುಖದಿಂದ ಕುತ್ತಿಗೆವರೆಗೆ ಹಚ್ಚಿಕೊಳ್ಳಿ. ಇದು ಒಣಗುವವರೆಗೆ ಕಾಲು ಗಂಟೆ ಕಾಲ ಹಾಗೆಯೇ ಬಿಡಿ. ಕಾಲು ಗಂಟೆಯ ನಂತರ ತಣ್ಣೀರಿನಿಂದ ಮುಖ ತೊಳೆಯಿರಿ. ಈ ಫೇಸ್ ಪ್ಯಾಕ್ ಅನ್ನು ವಾರಕ್ಕೆ ಎರಡು ಬಾರಿ ಮುಖಕ್ಕೆ ಹಚ್ಚುವುದರಿಂದ ಚರ್ಮದ ಕಾಂತಿ ಹೆಚ್ಚುವುದು ಮಾತ್ರವಲ್ಲ, ಕಪ್ಪು ಕಲೆ ನಿವಾರಣೆಯಾಗುತ್ತದೆ.
ಕಿತ್ತಳೆ ಸಿಪ್ಪೆ ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಕಲೆಗಳು, ಮೊಡವೆಗಳು, ಸುಕ್ಕುಗಳನ್ನು ತಡೆಯಲು ಸಹಕಾರಿಯಾಗಿದೆ. ಇದೇ ರೀತಿಯ ಚರ್ಮದ ಸಮಸ್ಯೆಗಳನ್ನು ಹೊಂದಿರುವವರಿಗೆ ಈ ಫೇಸ್ ಪ್ಯಾಕ್ ಬಹಳ ಉಪಯುಕ್ತವಾಗಿದೆ. ಇದು ತ್ವಚೆಯನ್ನು ಕಾಂತಿಯುತವಾಗಿ ಹೊಳೆಯುವಂತೆ ಮಾಡುತ್ತದೆ. ಈ ಪ್ಯಾಕ್‍ನಲ್ಲಿ ಬಳಸುವ ಟೊಮೆಟೊ ಮುಖದಲ್ಲಿನ ರಂಧ್ರಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನು ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.)