Brain Teaser: 13=10, 26=40 ಆದ್ರೆ 52= ಎಷ್ಟು, ಗಣಿತ ನಿಮ್ಮಿಷ್ಟದ ವಿಷಯವಾದ್ರೆ 15 ಸೆಕೆಂಡ್‌ನಲ್ಲಿ ಸರಿ ಉತ್ತರ ಹೇಳಿ
ಕನ್ನಡ ಸುದ್ದಿ  /  ಜೀವನಶೈಲಿ  /  Brain Teaser: 13=10, 26=40 ಆದ್ರೆ 52= ಎಷ್ಟು, ಗಣಿತ ನಿಮ್ಮಿಷ್ಟದ ವಿಷಯವಾದ್ರೆ 15 ಸೆಕೆಂಡ್‌ನಲ್ಲಿ ಸರಿ ಉತ್ತರ ಹೇಳಿ

Brain Teaser: 13=10, 26=40 ಆದ್ರೆ 52= ಎಷ್ಟು, ಗಣಿತ ನಿಮ್ಮಿಷ್ಟದ ವಿಷಯವಾದ್ರೆ 15 ಸೆಕೆಂಡ್‌ನಲ್ಲಿ ಸರಿ ಉತ್ತರ ಹೇಳಿ

ಗಣಿತದ ಪಜಲ್‌ಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಮೆದುಳಿಗೆ ಹುಳ ಬಿಡುವ ಈ ಪಜಲ್‌ಗಳಿಗೆ ಉತ್ತರ ಹುಡುಕಲು ನೆಟ್ಟಿಗರು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಇಂದಿನ ಬ್ರೈನ್ ಟೀಸರ್‌ನಲ್ಲಿ 52= ಎಷ್ಟು ಎಂದು ನೀವು ಕಂಡುಹಿಡಿಯಬೇಕು. ನಿಮಗಿರೋದು 15 ಸೆಕೆಂಡ್ ಸಮಯ.

ಬ್ರೈನ್ ಟೀಸರ್
ಬ್ರೈನ್ ಟೀಸರ್

ಗಣಿತದ ಪಜಲ್‌ಗಳು ನೋಡಲು ಸುಲಭವಾಗಿದ್ದರೂ ಸರಿ ಉತ್ತರ ಕಂಡುಹಿಡಿಯಲು ಸಾಕಷ್ಟು ಬುದ್ಧಿ ಉಪಯೋಗಿಸಬೇಕಾಗುತ್ತದೆ. ಇಂದಿನ ಬ್ರೈನ್ ಟೀಸರ್‌ನಲ್ಲಿರುವ ಗಣಿತದ ಪ್ರಶ್ನೆ ನಿಮ್ಮ ಮೆದುಳಿಗೆ ಹುಳ ಬಿಡೋದು ಖಂಡಿತ. ಎಕ್ಸ್‌ನಲ್ಲಿ ವೈರಲ್ ಆದ ಈ ಬ್ರೈನ್ ಟೀಸರ್‌ಗೆ ಉತ್ತರ ಕಂಡುಹಿಡಿಯಲು ಸಾಕಷ್ಟು ಜನ ತಲೆ ಕೆಡಿಸಿಕೊಂಡಿದ್ದಾರೆ. ಹಾಗಾದರೆ ನಿಮ್ಮಿಂದ ಇದಕ್ಕೆ ಉತ್ತರ ಕಂಡುಕೊಳ್ಳಲು ಸಾಧ್ಯವೇ ನೋಡಿ.

ಇಂತಹ ಬ್ರೈನ್ ಟೀಸರ್‌ಗಳಿಗೆ ಉತ್ತರ ಹುಡುಕುವ ಪ್ರಯತ್ನ ಮಾಡುವುದರಿಂದ ನಮ್ಮ ಮೆದುಳು ಚುರುಕಾಗುತ್ತದೆ. ನಮ್ಮಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಇದು ಉತ್ತಮ ಟೈಮ್‌ಪಾಸ್‌ ಕೂಡ ಹೌದು. ಇದರಿಂದ ನಮ್ಮ ಗಮನಶಕ್ತಿ ಹೆಚ್ಚುವುದಲ್ಲದೇ, ಸಮಸ್ಯೆ ಪರಿಹರಿಸುವ ಗುಣವೂ ವೃದ್ಧಿಯಾಗುತ್ತದೆ. ಹಾಗಾದರೆ ಇಂದಿನ ಬ್ರೈನ್ ಟೀಸರ್‌ನಲ್ಲಿರುವ ಪ್ರಶ್ನೆ ಯಾವುದು ನೋಡಿ.

Brainy Quiz ಎನ್ನುವ ಎಕ್ಸ್‌ ಪುಟದಲ್ಲಿ ಪೋಸ್ಟ್ ಮಾಡಲಾದ ಬ್ರೈನ್ ಟೀಸರ್ ಇದಾಗಿದೆ. ಪ್ರಶ್ನೆ ಸುಲಭವಾಗಿ ಕಂಡರೂ, ಉತ್ತರ ಕಂಡುಹಿಡಿಯುವುದ ಸರಳವಾಗಿಲ್ಲದ ಕಾರಣ ಹಲವರು ಇದಕ್ಕಾಗಿ ತಲೆ ಕೆಡಿಸಿಕೊಂಡಿದ್ದಾರೆ. 13 → 10, 26 → 40, 39 → 90, 52 → ಎಷ್ಟು ಎಂಬುದು ಈ ಬ್ರೈನ್ ಟೀಸರ್‌ನಲ್ಲಿರುವ ಪ್ರಶ್ನೆಯಾಗಿದೆ. ಇದಕ್ಕೆ ನೀವು 15 ಸೆಕೆಂಡ್‌ನಲ್ಲಿ ಉತ್ತರ ಕಂಡುಹಿಡಿಯಬೇಕು. ಗಣಿತದಲ್ಲಿ ನೀವು ಎಕ್ಸ್‌ಪರ್ಟ್ ಅಂತಾದ್ರೆ ಈ ಬ್ರೈನ್ ಟೀಸರ್‌ಗೆ ಉತ್ತರ ಕಂಡುಹಿಡಿಯುವುದು ಖಂಡಿತ ಸವಾಲು ಎನ್ನಿಸುವುದಿಲ್ಲ.

ಈ ಬ್ರೈನ್ ಟೀಸರ್‌ಗೆ ಸರಿ ಉತ್ತರ ಕಂಡುಹಿಡಿಯಲು ನಿಮ್ಮಿಂದ ಸಾಧ್ಯವಾದರೆ ಇದನ್ನು ನಿಮ್ಮ ಸ್ನೇಹಿತರು, ಆತ್ಮೀಯರಿಗೂ ಕಳುಹಿಸಿ. ಅವರಿಂದ ಯಾವ ಉತ್ತರ ಬರಬಹುದು ನಿರೀಕ್ಷಿಸಿ. ಅವರು ಬುದ್ಧಿವಂತಿಕೆಯನ್ನೂ ಪರೀಕ್ಷಿಸಿ.

ಈ ಬ್ರೈನ್ ಟೀಸರ್‌ಗಳನ್ನೂ ಓದಿ

Brain Teaser: 2*3=9, 3*4=16 ಆದ್ರೆ 5*7= ಎಷ್ಟು? ಗಣಿತದಲ್ಲಿ ನೀವು ಎಕ್ಸ್‌ಪರ್ಟ್‌ ಆದ್ರೆ ಈ ಪ್ರಶ್ನೆಗೆ 15 ಸೆಕೆಂಡ್‌ನಲ್ಲಿ ಉತ್ತರ ಹೇಳಿ

ಎಕ್ಸ್‌ನಲ್ಲಿ ವೈರಲ್ ಆದ ಬ್ರೈನ್ ಟೀಸರ್ ಒಂದು ಹಲವರ ಮೆದುಳಿಗೆ ಹುಳ ಬಿಟ್ಟಿದೆ. ಶೇ 99 ರಷ್ಟು ಮಂದಿಗೆ ಉತ್ತರಿಸಲು ಸಾಧ್ಯವಾಗದ ಈ ಬ್ರೈನ್ ಟೀಸರ್‌ಗೆ ಉತ್ತರ ಹೇಳಲು ನಿಮ್ಮಿಂದ ಸಾಧ್ಯವೇ ಪ್ರಯತ್ನಿಸಿ. 5*7 = ಎಷ್ಟು ನೀವು ಹೇಳಬೇಕು, ನಿಮಗಿರೋದು 15 ಸೆಕೆಂಡ್ ಸಮಯ.

Brain Teaser: 2=8, 4=24 ಆದ್ರೆ 6= ಎಷ್ಟು? ಭಾನುವಾರದ ಹೊತ್ತು ಮೆದುಳಿಗೆ ಚೂರು ಕೆಲಸ ಕೊಡಿ, ಸರಿ ಉತ್ತರ ಹೇಳಿ

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆದ ಬ್ರೈನ್ ಟೀಸರ್‌ವೊಂದು ನೆಟ್ಟಿಗರ ಮೆದುಳಿಗೆ ಹುಳ ಬಿಟ್ಟಿದೆ. ಇದಕ್ಕೆ ಉತ್ತರ ಎಷ್ಟಿರಬಹುದು ಎಂದು ಹಲವರು ತಲೆ ಕೆಡಿಸಿಕೊಂಡಿದ್ದಾರೆ. ಹಾಗಾದರೆ ಇಲ್ಲಿರುವ ಗಣಿತದ ಪಜಲ್‌ಗೆ ಉತ್ತರ ಹೇಳಲು ನಿಮ್ಮಿಂದ ಸಾಧ್ಯವೇ ಪ್ರಯತ್ನ ಮಾಡಿ, ಭಾನುವಾರದ ಹೊತ್ತು ಮೆದುಳಿಗೆ ಸ್ವಲ್ಪ ಕೆಲಸ ಕೊಡಿ.

Whats_app_banner