ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿಯುವುದರಿಂದ ಬೇಗ ತೂಕ ಇಳಿಯುತ್ತಾ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ
ತೂಕ ಇಳಿಸೋದು ಹೇಗಪ್ಪಾ ಅನ್ನೋದು ಇತ್ತೀಚೆಗೆ ಹಲವರ ಪ್ರಶ್ನೆ. ಇದಕ್ಕಾಗಿ ನೂರಾರು ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ. ತೂಕ ಇಳಿಸುವ ಪ್ರಯತ್ನದಲ್ಲಿ ಕೆಲವು ಪ್ರಮುಖ ದಾರಿಗಳಿವೆ. ಇದರಲ್ಲಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿಯುವುದು ಒಂದು. ಹಾಗಾದ್ರೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿಯುವುದರಿಂದ ವೇಗವಾಗಿ ತೂಕ ಕಡಿಮೆ ಆಗುತ್ತಾ, ಇಲ್ಲಿದೆ ಉತ್ತರ.
ತೂಕ ಇಳಿಸಿಕೊಳ್ಳಲು ಪ್ರಯತ್ನ ಮಾಡುವವರು ಹಲವಾರು ತಂತ್ರಗಳನ್ನು ಅನುಸರಿಸುತ್ತಾರೆ. ಪೌಷ್ಟಿಕ ಆಹಾರ ಸೇವನೆ, ಡಯೆಟ್, ವ್ಯಾಯಾಮ ಈ ಎಲ್ಲವೂ ವೈಟ್‌ಲಾಸ್ ಜರ್ನಿಯ ಭಾಗವಾಗಿರುತ್ತದೆ. ಕೆಲವರು ವೇಗವಾಗಿ ತೂಕ ಕಡಿಮೆ ಮಾಡಿಕೊಳ್ಳಬೇಕು ಎಂದು ಹಲವಾರು ದಾರಿಗಳನ್ನು ಹುಡುಕುತ್ತಾರೆ. ಅಂತಹ ದಾರಿಗಳಲ್ಲಿ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿಯುವುದು ಒಂದು.
ಹಾಗಾದರೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿಯುವುದರಿಂದ ನಿಜಕ್ಕೂ ತೂಕ ಕಡಿಮೆ ಆಗುತ್ತಾ, ಇದರಿಂದ ಬಹಳ ಬೇಗ ತೂಕ ಕಡಿಮೆ ಆಗುತ್ತೆ ಅಂತಾರೆ ಅದು ನಿಜನಾ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರ ಪ್ರಯೋಜನಗಳು ಹೀಗಿವೆ.
ಕ್ಯಾಲೊರಿ ಬರ್ನ್ ಮಾಡುತ್ತದೆ
ಬೆಚ್ಚಗಿನ ನೀರು ಕುಡಿಯುವುದರಿಂದ ದೇಹದ ಉಷ್ಣತೆ ಹೆಚ್ಚುತ್ತದೆ. ಚಯಾಪಚಯ ಸುಧಾರಿಸುತ್ತದೆ. ಇದರಿಂದ ದೇಹದಲ್ಲಿ ಹೆಚ್ಚಿನ ಕ್ಯಾಲೋರಿಗಳು ಕರಗುತ್ತವೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ. ಈ ಎಲ್ಲವೂ ತೂಕ ಇಳಿಕೆಗೆ ನೆರವಾಗುವ ಅಂಶಗಳಾಗಿವೆ.
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ನಿವಾರಣೆ
ಬೆಚ್ಚಗಿನ ನೀರು ಕುಡಿಯುವುದು ಜೀರ್ಣಕ್ರಿಯೆಗೆ ಒಳ್ಳೆಯದು. ಇದು ಆಹಾರ ಚೆನ್ನಾಗಿ ಜೀರ್ಣವಾಗುವಂತೆ ಮಾಡುತ್ತದೆ. ಬೆಚ್ಚಗಿನ ನೀರು ಮಲಬದ್ಧತೆ ಮತ್ತು ವಾಯು ಮುಂತಾದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಕರುಳಿನ ಚಲನೆಯನ್ನು ಸುಧಾರಿಸುತ್ತದೆ. ಇದು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.
ವಿಷಾಂಶ ಹೊರ ಹೋಗುತ್ತದೆ
ಬೆಚ್ಚಗಿನ ನೀರು ದೇಹದಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಬಹಳ ಮುಖ್ಯ. ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿಯುವುದರಿಂದ ದೇಹದಲ್ಲಿ ತ್ಯಾಜ್ಯಗಳು ಹೊರ ಹೋಗಿ, ದೇಹ ಹಗುರವಾಗುತ್ತದೆ. ಇದರಿಂದ ದೇಹ ನಿರ್ವಿಶಗೊಳ್ಳುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ನೀರಿಗೆ ಈ ಪದಾರ್ಥಗಳನ್ನು ಸೇರಿಸಿ
ನಿಮಗೆ ಬೆಚ್ಚಗಿನ ನೀರು ಕುಡಿಯಲು ಇಷ್ಟವಿಲ್ಲದಿದ್ದರೆ, ಕೆಲವು ಪದಾರ್ಥಗಳನ್ನು ಸೇರಿಸಬಹುದು. ನೀರಿಗೆ ಸ್ವಲ್ಪ ಉಪ್ಪು ಸೇರಿಸಿ ಕುಡಿಯಬಹುದು. ಉಪ್ಪು ನೀರು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಬರುತ್ತದೆ. ಮೆಗ್ನೀಸಿಯಮ್, ಸೋಡಿಯಂ ಮತ್ತು ಪೊಟ್ಯಾಸಿಯಮ್ ಕೂಡ ಸಿಗುತ್ತದೆ. ಬೆಚ್ಚಗಿನ ನೀರಿಗೆ ಜೇನುತುಪ್ಪವನ್ನು ಕೂಡ ಸೇರಿಸಬಹುದು. ಜೇನುತುಪ್ಪದಲ್ಲಿ ಔಷಧೀಯ ಗುಣಗಳೂ ಇವೆ. ಇದು ಒಟ್ಟಾರೆ ಆರೋಗ್ಯಕ್ಕೂ ಒಳ್ಳೆಯದು. ಇದು ತೂಕ ಇಳಿಕೆಗೂ ಸಹಕಾರಿ.
ದಿನಪೂರ್ತಿ ಬಿಸಿ ನೀರು ಕುಡಿಯಬಹುದು
ಬೆಚ್ಚಗಿನ ನೀರನ್ನು ಬೆಳಿಗ್ಗೆ ಮಾತ್ರವಲ್ಲ, ದಿನವಿಡೀ ಕುಡಿಯಬಹುದು. ಇದು ತೂಕ ಇಳಿಸುವ ಪ್ರಯತ್ನವನ್ನು ಮತ್ತಷ್ಟು ಬೆಂಬಲಿಸುತ್ತದೆ. ತ್ವರಿತ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಬೆಚ್ಚಗಿನ ನೀರು ಒಟ್ಟಾರೆ ಆರೋಗ್ಯಕ್ಕೂ ಒಳ್ಳೆಯದು. ಇದು ಉಸಿರಾಟದ ತೊಂದರೆಗಳನ್ನು ತಡೆಯಬಹುದು.
ಬಿಸಿ ನೀರಿನ ಹೆಚ್ಚಿನ ಪ್ರಯೋಜನಗಳು
ಬಿಸಿ ನೀರನ್ನು ಕುಡಿಯುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಅಂಗಗಳಿಗೆ ರಕ್ತದ ಹರಿವು ಸುಧಾರಿಸುತ್ತದೆ. ಇದು ಅಂಗಾಂಗಳನ್ನು ಸಕ್ರಿಯಗೊಳಿಸುತ್ತದೆ. ಸ್ನಾಯು ಮತ್ತು ಕೀಲು ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ಬಾಯಿಯ ಆರೋಗ್ಯಕ್ಕೂ ಒಳ್ಳೆಯದು. ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಒತ್ತಡವೂ ಕಡಿಮೆಯಾಗುತ್ತದೆ.
(ಗಮನಿಸಿ: ಈ ಮಾಹಿತಿಯು ಸಾಮಾನ್ಯಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ)