Walking benefits: ನಡಿಗೆಯಿಂದ ನಮ್ಮ ಆರೋಗ್ಯಕ್ಕೆ ಏನೆಲ್ಲಾ ಲಾಭ? ಪ್ರತಿದಿನದ 30 ನಿಮಿಷಗಳ ನಡಿಗೆಯ ಪ್ರಯೋಜನಗಳನ್ನು ತಿಳಿಯಿರಿ
ಕನ್ನಡ ಸುದ್ದಿ  /  ಜೀವನಶೈಲಿ  /  Walking Benefits: ನಡಿಗೆಯಿಂದ ನಮ್ಮ ಆರೋಗ್ಯಕ್ಕೆ ಏನೆಲ್ಲಾ ಲಾಭ? ಪ್ರತಿದಿನದ 30 ನಿಮಿಷಗಳ ನಡಿಗೆಯ ಪ್ರಯೋಜನಗಳನ್ನು ತಿಳಿಯಿರಿ

Walking benefits: ನಡಿಗೆಯಿಂದ ನಮ್ಮ ಆರೋಗ್ಯಕ್ಕೆ ಏನೆಲ್ಲಾ ಲಾಭ? ಪ್ರತಿದಿನದ 30 ನಿಮಿಷಗಳ ನಡಿಗೆಯ ಪ್ರಯೋಜನಗಳನ್ನು ತಿಳಿಯಿರಿ

ನಡಿಗೆಯಿಂದ ನಮ್ಮ ಆರೋಗ್ಯಕ್ಕೆ ಏನೆಲ್ಲಾ ಲಾಭವಿದೆ? ಪ್ರತಿದಿನದ 30 ನಿಮಿಷಗಳ ನಡಿಗೆಯು ನಿಮಗೆ ಏನೆಲ್ಲಾ ಪ್ರಯೋಜನಗಳನ್ನು ನೀಡುತ್ತದೆ? ನಡಿಗೆಯನ್ನು ನಿರಂತರ ಮಾಡುವುದರಿಂದ ನಮ್ಮ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ. ವೈದ್ಯರೇ ಹೇಳಿದ್ದಾರೆ ನೋಡಿ.

ನಡಿಗೆಯಿಂದ ನಮ್ಮ ಆರೋಗ್ಯಕ್ಕೆ ಏನೆಲ್ಲಾ ಲಾಭವಿದೆ?
ನಡಿಗೆಯಿಂದ ನಮ್ಮ ಆರೋಗ್ಯಕ್ಕೆ ಏನೆಲ್ಲಾ ಲಾಭವಿದೆ? (Pixabay)

ನಡಿಗೆಯಿಂದ ನಿಮ್ಮ ಆರೋಗ್ಯದಲ್ಲಿ ಏನೆಲ್ಲಾ ಸುಧಾರಣೆಗಳಾಗುತ್ತವೆ, ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಅರೋಗ್ಯ ಮತ್ತು ಫಿಟ್ ನೆಸ್ ಅನ್ನು ಕಾಪಾಡಿಕೊಳ್ಳಲು ಇದೊಂದು ಅತ್ಯುತ್ತಮ ವ್ಯಾಯಾಮ ಎನ್ನುವುದು ವೈದ್ಯರ ಅಭಿಪ್ರಾಯ. ನಡಿಗೆ ನಿಮ್ಮ ಒಟ್ಟಾರೆ ಆರೋಗ್ಯಕ್ಕೆ ಸರಳವಾದ ಅತ್ಯಂತ ಪರಿಣಾಮಕಾರಿ ವ್ಯಾಯಾಮಗಳಲ್ಲಿ ಒಂದಾಗಿದೆ. ಇದು ಯಾವುದೇ ಅಡ್ಡ ಪರಿಣಾಮಗಳನ್ನು ಬೀರುವುದಿಲ್ಲ, ಇದಕ್ಕೆ ಯಾವುದೇ ವಿಶೇಷ ಉಪಕರಣಗಳ ಅಗತ್ಯವಿಲ್ಲ. ಜೊತೆಗೆ ಸುಲಭ ಮತ್ತು ಸರಳ ಕೂಡ. ಪ್ರತಿದಿನ ನಡೆಯುವುದರಿಂದ ಆರೋಗ್ಯಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ ಎನ್ನುವುದು ನಿಮಗೆ ಗೊತ್ತಾ? ದಿನಕ್ಕೆ 30 ನಿಮಿಷಗಳ ವಾಕಿಂಗ್ ನಿಮಗೆ ಹೇಗೆಲ್ಲಾ ಸಹಾಯ ಮಾಡುತ್ತದೆ ಎನ್ನುವುದು ತಿಳಿದಿದೆಯಾ? ನಡಿಗೆಯಿಂದ ದೇಹದಲ್ಲಿ ಯಾವೆಲ್ಲಾ ಒಳ್ಳೆಯ ಬದಲಾವಣೆಗಳು ಆಗಬಹುದು? ಅದರ ಬಗ್ಗೆ ತಜ್ಞರೇ ಮಾಹಿತಿ ನೀಡಿದ್ದಾರೆ ಕೇಳಿ.

ಹೈದರಾಬಾದ್‌‌ನ ಅಪೊಲೊ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರಾಲಜಿಸ್ಟ್ ಡಾ.ಸುಧೀರ್ ಕುಮಾರ್ ಅವರ ಪ್ರಕಾರ, ಪ್ರತಿದಿನದ 30 ನಿಮಿಷಗಳ ನಡಿಗೆಯು ಹಲವಾರು ಆರೋಗ್ಯ ಸಮಸ್ಯೆಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ದೈಹಿಕ ಪ್ರಯೋಜನಗಳು

ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುತ್ತದೆ - ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ - ಕ್ಯಾಲೊರಿಗಳನ್ನು ಕರಗಿಸಲು ಮತ್ತು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಸ್ನಾಯುಗಳು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ - ಸ್ನಾಯುಗಳನ್ನೂ ಬಲಪಡಿಸಿ ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ - ಪ್ರತಿರಕ್ಷಣಾ ಕಾರ್ಯವನ್ನು ಸುಧಾರಿಸುವ ಮೂಲಕ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ - ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ - ಮಧುಮೇಹವನ್ನು ನಿರ್ವಹಿಸಲು ಪ್ರಯೋಜನಕಾರಿ.

ಶ್ವಾಸಕೋಶದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ - ಉತ್ತಮ ಆಮ್ಲಜನಕ ಪರಿಚಲನೆಯನ್ನು ಉತ್ತೇಜಿಸುತ್ತದೆ.

ಮಾನಸಿಕ ಪ್ರಯೋಜನಗಳು

ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ - ವಾಕಿಂಗ್, ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಒತ್ತಡ ಆತಂಕವನ್ನು ಕಡಿಮೆ ಮಾಡುತ್ತದೆ.

ಮನಸ್ಥಿತಿಯನ್ನು ಸುಧಾರಿಸುತ್ತದೆ - ಎಂಡಾರ್ಫಿನ್ ಮಟ್ಟವನ್ನು ಹೆಚ್ಚಿಸುತ್ತದೆ, ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

ಸೃಜನಶೀಲತೆಯನ್ನು ಹೆಚ್ಚಿಸುತ್ತದೆ - ಸಮಸ್ಯೆಯನ್ನು ಪರಿಹರಿಸುವ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಸುಧಾರಿಸುತ್ತದೆ.

ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ - ನಿದ್ರೆಯ ಸಮಸ್ಯೆಯನ್ನು ಹೋಗಲಾಡಿಸಿ ಗುಣಮಟ್ಟದ ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ಇತರ ಪ್ರಯೋಜನಗಳು

ಸುಲಭ ಮತ್ತು ಕಡಿಮೆ ಅಡ್ಡ ಪರಿಣಾಮ - ಎಲ್ಲಾ ವಯಸ್ಸಿನವರು ಮತ್ತು ಫಿಟ್ನೆಸ್ ಕಾಪಾಡಿಕೊಳ್ಳಲು ಸೂಕ್ತವಾಗಿದೆ.

ಹಣವನ್ನು ಉಳಿಸುತ್ತದೆ - ಯಾವುದೇ ಜಿಮ್ ಸದಸ್ಯತ್ವ ಅಗತ್ಯವಿಲ್ಲ!

ಸಾಮಾಜಿಕ ಜೀವನವನ್ನು ಸುಧಾರಿಸುತ್ತದೆ - ಸ್ನೇಹಿತರೊಂದಿಗೆ ಅಥವಾ ಗುಂಪುಗಳಲ್ಲಿ ನಡೆಯುವುದು ಸಾಮಾಜಿಕ ಸಂವಹನಗಳನ್ನು ಹೆಚ್ಚಿಸುತ್ತದೆ.

ನಡಿಗೆಯ ಸರಿಯಾದ ಕ್ರಮ ಯಾವುದು?

ನಡಿಗೆ ಒಳ್ಳೆಯದಾದರೂ, ಅದರ ವೇಗದ ಕಡೆಗೂ ಗಮನ ಕೊಡುವುದು ಅವಶ್ಯಕ. ನಿಧಾನಗತಿಯಲ್ಲಿ ನಡೆಯುವುದು ಅಷ್ಟು ಪರಿಣಾಮಕಾರಿಯಾಗಿರುವುದಿಲ್ಲ. ಹೆಚ್ಚಿನ ಪ್ರಯೋಜನವನ್ನು ಪಡೆಯಲು, ನಡಿಗೆಯಲ್ಲಿ ನಿಮ್ಮ ವೇಗವನ್ನು ಹೆಚ್ಚಿಸುವುದು ಮುಖ್ಯ, ಏಕೆಂದರೆ ಚುರುಕಾದ ನಡಿಗೆಯು ಹೆಚ್ಚಿನ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ ಮತ್ತು ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇದು ಹೃದಯರಕ್ತನಾಳದ ಮತ್ತು ಉಸಿರಾಟದ ಆರೋಗ್ಯವನ್ನು ಸುಧಾರಿಸುತ್ತದೆ ಎನ್ನುವುದು ತಜ್ಞರ ಅಭಿಪ್ರಾಯ.

ಹಾಗಾದರೆ ನೀವೂ ಇನ್ನು ಮುಂದೆ ಈ ಒಳ್ಳೆಯ ಅಭ್ಯಾಸವನ್ನು ಪ್ರಾರಂಭಿಸಿ. ಅತ್ಯುತ್ತಮ ಪ್ರಯೋಜನಗಳನ್ನು ಪಡೆಯಲು, ವಾರದ ಹೆಚ್ಚಿನ ದಿನಗಳಲ್ಲಿ ನಿಮಗೆ ಸಾಧ್ಯವಾದಷ್ಟು ಚುರುಕಾಗಿ ಕನಿಷ್ಠ 30 ನಿಮಿಷಗಳ ಕಾಲ ನಡೆಯಲು ಪ್ರಯತ್ನಿಸಿ. ಇದು ಅಡ್ಡ ಪರಿಣಾಮಗಳನ್ನು ಹೊಂದಿಲ್ಲದೆ ಇದ್ದರೂ, ಕೆಲವೊಂದು ಅರೋಗ್ಯ ಸಮಸ್ಯೆಗಳನ್ನು ಹೊಂದಿರುವ ಜನರಿಗೆ ಅಪಾಯವನ್ನು ಉಂಟು ಮಾಡಬಹುದು. ಇಂತಹ ಸಂದರ್ಭಗಳಲ್ಲಿ, ಯಾವುದೇ ಹೊಸ ವ್ಯಾಯಾಮವನ್ನು ಪ್ರಾರಂಭಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ ಅವರ ಅಭಿಪ್ರಾಯವನ್ನು ಪಡೆಯುವುದು ಸೂಕ್ತ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
Whats_app_banner