Winter Health Tips: ಮಧುಮೇಹಿಗಳು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸಬೇಕಾದ ಆಹಾರಗಳಿವು
ಕನ್ನಡ ಸುದ್ದಿ  /  ಜೀವನಶೈಲಿ  /  Winter Health Tips: ಮಧುಮೇಹಿಗಳು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸಬೇಕಾದ ಆಹಾರಗಳಿವು

Winter Health Tips: ಮಧುಮೇಹಿಗಳು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸಬೇಕಾದ ಆಹಾರಗಳಿವು

Winter Health Tips: ಚಳಿಗಾಲದಲ್ಲಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು,ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಈ ಅವಧಿಯಲ್ಲಿ ಕೆಲವು ರೀತಿಯ ಆಹಾರಗಳನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.ಅಂತಹ ಆಹಾರಗಳು ಯಾವ್ಯಾವು, ಇಲ್ಲಿವೆ.

ಮಧುಮೇಹಿಗಳು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸಬೇಕಾದ ಆಹಾರಗಳಿವು
ಮಧುಮೇಹಿಗಳು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸಬೇಕಾದ ಆಹಾರಗಳಿವು

ಮಧುಮೇಹ ಇರುವವರಿಗೆ ಚಳಿಗಾಲವು ಹೆಚ್ಚು ಸವಾಲಿನದ್ದಾಗಿದೆ. ಶೀತ ಹವಾಮಾನವು ಮಧುಮೇಹದ ಮೇಲೆ ನೇರ ಪರಿಣಾಮ ಬೀರುತ್ತದೆ. ಇಂತಹ ಶೀತ ವಾತಾವರಣದಲ್ಲಿ ದೇಹಕ್ಕೆ ಇನ್ಸುಲಿನ್ ಹೆಚ್ಚು ಬೇಕಾಗುತ್ತದೆ. ಇನ್ಸುಲಿನ್ ಅಸಮತೋಲನದಿಂದ ತೊಂದರೆಗಳು ಉಂಟಾಗುತ್ತವೆ. ಅದಕ್ಕಾಗಿಯೇ ಮಧುಮೇಹ ಇರುವವರು ಚಳಿಗಾಲದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಚಳಿಗಾಲದಲ್ಲಿ ಅಧಿಕ ರಕ್ತದ ಸಕ್ಕರೆಯ ಅಪಾಯವು ಹೆಚ್ಚು. ಇದರಿಂದ ತೊಂದರೆಗಳು ಉಂಟಾಗುತ್ತವೆ. ಅದಕ್ಕಾಗಿಯೇ ಚಳಿಗಾಲದಲ್ಲಿ ನಿಯಮಿತವಾಗಿ ಕೆಲವು ಆಹಾರಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಮಧುಮೇಹ ಇರುವವರು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸಬೇಕಾದ ಆಹಾರಗಳು ಯಾವ್ಯಾವು ಎಂಬುದು ಇಲ್ಲಿದೆ.

ಮಧುಮೇಹ ಇರುವವರು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸಬೇಕಾದ ಆಹಾರಗಳು

ಸಿಹಿ ಗೆಣಸು: ಮಧುಮೇಹ ಇರುವವರು ಚಳಿಗಾಲದಲ್ಲಿ ತಮ್ಮ ಆಹಾರದಲ್ಲಿ ಸಿಹಿ ಗೆಣಸುಗಳನ್ನು ಸೇವಿಸಬೇಕು. ಇದು ಜನಪ್ರಿಯ ಮಧುಮೇಹ ವಿರೋಧಿ ಆಹಾರವಾಗಿದೆ ಸಿಹಿಗೆಣಸು ಫೈಟೊಕೆಮಿಕಲ್ ಬೀಟಾ ಕ್ಯಾರೋಟಿನ್‌ನಲ್ಲಿ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದು ತೂಕ ಹೆಚ್ಚಾಗುವುದನ್ನು ತಡೆಯಲು ಸಹ ಸಹಾಯ ಮಾಡುತ್ತದೆ.

ಕಿತ್ತಳೆ ಹಾಗೂ ನಿಂಬೆಹಣ್ಣು: ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಮತ್ತು ನಿಂಬೆಹಣ್ಣುಗಳು ಮಧುಮೇಹದಿಂದ ಬಳಲುತ್ತಿರುವವರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಇದು ಸಹಕಾರಿಯಾಗಿದೆ. ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವುದರಿಂದ ಮಧುಮೇಹ ಇರುವವರು ಕಿತ್ತಳೆ ಹಣ್ಣನ್ನು ಸೇವಿಸಬಹುದು. ಆದರೆ, ಇವನ್ನು ಮಿತವಾಗಿ ತೆಗೆದುಕೊಳ್ಳಬೇಕು.

ಪಾಲಕ್ ಸೊಪ್ಪು: ಮಧುಮೇಹಿಗಳಿಗೆ ಸೂಪರ್ ಫುಡ್ ಆಗಿ ಪಾಲಕ್ ಸೊಪ್ಪು ಕಾರ್ಯನಿರ್ವಹಿಸುತ್ತದೆ. ಇದನ್ನು ಆಹಾರದಲ್ಲಿ ನಿಯಮಿತವಾಗಿ ತೆಗೆದುಕೊಳ್ಳಬೇಕು. ಪಾಲಕ್ ಸೊಪ್ಪಿನಲ್ಲಿರುವ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಿರುವುದರಿಂದ, ಸಕ್ಕರೆಯ ಮಟ್ಟವು ಅತಿಯಾಗಿ ಏರುವುದಿಲ್ಲ. ಪಾಲಕ್ ಸೊಪ್ಪನ್ನು ಹೆಚ್ಚಾಗಿ ತಿನ್ನಬಹುದು.

ಕ್ಯಾರೆಟ್: ಕ್ಯಾರೆಟ್ ಅತ್ಯಂತ ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಆದ್ದರಿಂದ, ಮಧುಮೇಹ ಇರುವವರಿಗೆ ಇದು ಉತ್ತಮ ಆಹಾರ ಆಯ್ಕೆಯಾಗಿದೆ. ಇದು ಫೈಬರ್‌ನಲ್ಲಿ ಸಮೃದ್ಧವಾಗಿದೆ. ಅದಕ್ಕಾಗಿಯೇ ಇದು ಜೀರ್ಣವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸದೆ ನಿಯಂತ್ರಿಸಬಹುದು.

ಮೀನು: ಮೀನು ಕೂಡ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಸಾಲ್ಮನ್, ಸಾರ್ಡೀನ್, ಮ್ಯಾಕೆರೆಲ್‌ನಂತಹ ಉತ್ತಮ ಕೊಬ್ಬಿನಂಶ ಇರುವ ಮೀನುಗಳನ್ನು ಮಧುಮೇಹ ಇರುವವರು ಚಳಿಗಾಲದಲ್ಲಿ ತೆಗೆದುಕೊಳ್ಳಬಹುದು. ಒಮೆಗಾ-3 ಕೊಬ್ಬಿನಾಮ್ಲಗಳನ್ನು ಒಳಗೊಂಡಂತೆ ಈ ಹೆಚ್ಚಿನ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಇದು ಆರೋಗ್ಯಕರ ಕೊಬ್ಬುಗಳನ್ನು ಸಹ ಒಳಗೊಂಡಿದೆ. ಮೀನು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಬೀಜಗಳು: ಬಾದಾಮಿ ಮತ್ತು ವಾಲ್‌ನಟ್‌ಗಳಂತಹ ಬೀಜಗಳನ್ನು ಸಹ ನಿಯಮಿತವಾಗಿ ತೆಗೆದುಕೊಳ್ಳಬೇಕು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇವುಗಳಲ್ಲಿ ಫೈಬರ್ ಸೇರಿದಂತೆ ಪೋಷಕಾಂಶಗಳು ಸಮೃದ್ಧವಾಗಿವೆ. ಕಾರ್ಬೋಹೈಡ್ರೇಟ್ಗಳು ತುಂಬಾ ಕಡಿಮೆಯಿದ್ದು, ಹೃದಯದ ಆರೋಗ್ಯವನ್ನೂ ಸುಧಾರಿಸುತ್ತದೆ. ಆದರೆ, ಇವುಗಳನ್ನು ಸೀಮಿತ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು.

ಬೆರ್ರಿ ಹಣ್ಣುಗಳು: ಮಧುಮೇಹ ಇರುವವರು ಚಳಿಗಾಲದಲ್ಲಿ ಸ್ಟ್ರಾಬೆರಿ ಮತ್ತು ಬ್ಲೂಬೆರ್ರಿ ಹಣ್ಣುಗಳನ್ನು ಸೇವಿಸಬಹುದು. ಇವುಗಳು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಬೆರ್ರಿ ಹಣ್ಣುಗಳು ಸಿಹಿ ಪದಾರ್ಥಗಳನ್ನು ತಿನ್ನುವ ಬಯಕೆಯನ್ನು ಕಡಿಮೆ ಮಾಡಬಹುದು.

(ಗಮನಿಸಿ: ಮಧುಮೇಹ ಇರುವವರು ವೈದ್ಯರು ಸೂಚಿಸಿದ ಔಷಧಿಗಳನ್ನು ಬಳಸುವಾಗ ಇತರ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ನಿಮಗೆ ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸಂಬಂಧಪಟ್ಟ ವೈದ್ಯರನ್ನು ಸಂಪರ್ಕಿಸಿ.)

Whats_app_banner