Kerala Bus Accident: ಇಡುಕ್ಕಿಯಲ್ಲಿ ಕಮರಿಗೆ ಉರುಳಿದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್‌, ಓರ್ವ ವಿದ್ಯಾರ್ಥಿ ಮೃತ್ಯು, ಹಲವರಿಗೆ ಗಾಯ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Kerala Bus Accident: ಇಡುಕ್ಕಿಯಲ್ಲಿ ಕಮರಿಗೆ ಉರುಳಿದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್‌, ಓರ್ವ ವಿದ್ಯಾರ್ಥಿ ಮೃತ್ಯು, ಹಲವರಿಗೆ ಗಾಯ

Kerala Bus Accident: ಇಡುಕ್ಕಿಯಲ್ಲಿ ಕಮರಿಗೆ ಉರುಳಿದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್‌, ಓರ್ವ ವಿದ್ಯಾರ್ಥಿ ಮೃತ್ಯು, ಹಲವರಿಗೆ ಗಾಯ

ಕೇರಳದ ಇಡುಕ್ಕಿಯಲ್ಲಿ ಇಂದು ಬೆಳ್ಳಂಬೆಳಗೆ ಪ್ರವಾಸಿ ಬಸ್‌ ಕಮರಿಗೆ ಉರುಳಿ ಓರ್ವ ವಿದ್ಯಾರ್ಥಿ ಮೃತಪಟ್ಟ ದುರ್ಘಟನೆ ನಡೆದಿದೆ. ವಾಲಂಚೇರಿಯ ಕಾಲೇಜೊಂದರ ವಿದ್ಯಾರ್ಥಿಗಳು ಇದ್ದ ಈ ಬಸ್‌ ಕಮರಿಗೆ ಉರುಳಿದ್ದು, ವಿದ್ಯಾರ್ಥಿ ಮನೋಜ್‌ ಮೃತಪಟ್ಟಿದ್ದಾನೆ.

Kerala Bus Accident: ಇಡುಕ್ಕಿಯಲ್ಲಿ ಕಮರಿಗೆ ಉರುಳಿದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್‌
Kerala Bus Accident: ಇಡುಕ್ಕಿಯಲ್ಲಿ ಕಮರಿಗೆ ಉರುಳಿದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್‌

ಇಡುಕ್ಕಿ: ಕೇರಳದ ಇಡುಕ್ಕಿಯಲ್ಲಿ ಇಂದು ಬೆಳ್ಳಂಬೆಳಗೆ ಪ್ರವಾಸಿ ಬಸ್‌ ಕಮರಿಗೆ ಉರುಳಿ ಓರ್ವ ವಿದ್ಯಾರ್ಥಿ ಮೃತಪಟ್ಟ ದುರ್ಘಟನೆ ನಡೆದಿದೆ. ವಾಲಂಚೇರಿಯ ಕಾಲೇಜೊಂದರ ವಿದ್ಯಾರ್ಥಿಗಳು ಇದ್ದ ಈ ಬಸ್‌ ಕಮರಿಗೆ ಉರುಳಿದ್ದು, ವಿದ್ಯಾರ್ಥಿ ಮನೋಜ್‌ ಮೃತಪಟ್ಟಿದ್ದಾನೆ.

ಇಂದು ಮುಂಜಾನೆ ಬಸ್‌ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದೆ. ಬಸ್‌ನಲ್ಲಿ ಒಟ್ಟು 41 ಪ್ರಯಾಣಿಕರು ಇದ್ದರು. ಗಾಯಗೊಂಡವರನ್ನು ತಾಲೂಕು ಆಸ್ಪತ್ರೆ ಮತ್ತು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮೃತಪಟ್ಟ ಮನೋಜ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದಾನೆ. ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆ ಹೋಗಿ ಹಿಂತುರುಗಿ ಬರುವಾಗ ದುರ್ಘಟನೆ ನಡೆದಿದೆ.

ಅರಣ್ಯ ಪ್ರದೇಶದಲ್ಲಿ ಕಂದಕಕ್ಕೆ ಪಲ್ಟಿಯಾದ ಬಸ್‌ನ ಬಳಿ ಪೊಲೀಸರು ಮತ್ತು ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೊಸ ವರ್ಷವನ್ನು ವಿಶ್ವದ ಇತರ ಭಾಗಗಳಲ್ಲಿ ಮತ್ತು ದೇಶದಾದ್ಯಂತ ಸ್ವಾಗತಿಸುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.

ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದ್ದು, ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಶನಿವಾರ, ಮಹಾರಾಷ್ಟ್ರದ ಬಾರಾಮತಿಯಲ್ಲಿ ಬಸ್ ಸೇತುವೆಯಿಂದ ಬಿದ್ದು 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 57 ಪ್ರಯಾಣಿಕರು ಗಾಯಗೊಂಡಿದ್ದರು. ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯ ಖಾಸಗಿ ಶಾಲಾ ವಿದ್ಯಾರ್ಥಿಗಳ ಪ್ರವಾಸಿ ಬಸ್‌ ಇದಾಗಿತ್ತು.

ಚಿರತೆ ದಾಳಿಗೆ ಹಸು ಬಲಿ; ಹೆಚ್ಚಿದ ಆತಂಕ

ಮಂಡ್ಯ ಜಿಲ್ಲೆಯಲ್ಲಿ ಚಿರತೆ ದಾಳಿ ಮುಂದುವರಿದಿದ್ದು,ಮಳವಳ್ಳಿ ತಾಲೂಕಿನ ಬ್ಲಫ್ ಬಳಿ ಚಿರತೆ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ತಾಲೂಕಿನಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸಹಜವಾಗಿ ಜನರಲ್ಲಿನ ಆತಂಕವನ್ನು ಹೆಚ್ಚಿಸಿದೆ. ಮಳವಳ್ಳಿ ತಾಲೂಕಿನ ಬ್ಲಫ್ ಬಳಿಯ ನಂಜಪ್ಪ ಎಂಬವರು ಸಾಕಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಗ್ರಾಮದಲ್ಲಿ ಕತ್ತಲಾದರೆ ಸಾಕು ಜನರು ಒಂಟಿಯಾಗಿ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಬಳಿ ಸಮರ್ಪಕ ಬೋನು ಇಲ್ಲದೆ ಇರುವ ಹಿನ್ನೆಲೆ ಚಿರತೆಗಳು ಸೆರೆಯಾಗದೆ ಎಲ್ಲೆಂದರಲ್ಲಿ ದಾಳಿ ನಡೆಸುತ್ತಿದೆ. ಚಿರತೆ ಪ್ರತ್ಯಕ್ಷಗೊಂಡ ಸ್ಥಳದಲ್ಲಿ ಬೋನ್ ಅಳವಡಿಸಿ ಅನಾಹುತಕ್ಕೆ ಕಡಿವಾಣ ಹಾಕಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕೆಆರ್‌ಎಸ್‌ ಬಳಿ ಪದೇಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಇತ್ತೀಚೆಗೆ ಹಿಡಿಯಲಾಗಿತ್ತು.

ದೆಹಲಿ, ಹರಿಯಾಣ ಸುತ್ತಮುತ್ತ ಭೂಕಂಪ

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಹರಿಯಾಣ ಸುತ್ತಮುತ್ತ ನಿನ್ನೆ ರಾತ್ರಿ 1.19ರ ಸುಮಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಹರಿಯಾಣದ ಝಜ್ಜರ್​ನಲ್ಲಿ ಭೂಪಂಕದ ಕೇಂದ್ರ ಬಿಂದು, ಭೂಮಿಯಿಂದ 5 ಕಿಲೋ ಮೀಟರ್​ ಆಳದಲ್ಲಿ ಭೂಕಂಪದ ಅನುಭವ ಆಗಿದೆ.

ಭೂಕಂಪನದ ತೀವ್ರತೆಯಿಂದ ಯಾವುದೇ ಪ್ರಾಣಾಪಾಯ ಅಥವಾ ಗಾಯಗೊಂಡ ಪ್ರಕರಣಗಳು ವರದಿಯಾಗಿಲ್ಲ ಎಂದು ತಿಳಿದು ಬಂದಿದೆ. ಕಳೆದ ಒಂದು ತಿಂಗಳಲ್ಲಿ ಇದು ಮೂರನೇ ಬಾರಿ ಭೂಕಂಪನದ ಅನುಭವವಾಗಿದೆ.

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.