Sikkim road accident: ಕಮರಿಗೆ ಬಿದ್ದ ಆರ್ಮಿ ಟ್ರಕ್: ಭಾರತೀಯ ಸೇನೆಯ 16 ಯೋಧರು ಹುತಾತ್ಮ
ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಭಾರತೀಯ ಸೇನೆಯ 16 ಮಂದಿ ಯೋಧರು ಹುತಾತ್ಮರಾಗಿರುವ ಘಟನೆ ಉತ್ತರ ಸಿಕ್ಕಿಂನ ಝೇಮಾದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರು ಯೋಧರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆದೆ ಸಾಗಿಸಲಾಗಿದೆ.
ಸಿಕ್ಕಿಂ: ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಭಾರತೀಯ ಸೇನೆಯ 16 ಮಂದಿ ಯೋಧರು ಹುತಾತ್ಮರಾಗಿರುವ ಘಟನೆ ಉತ್ತರ ಸಿಕ್ಕಿಂನ ಝೇಮಾದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರು ಯೋಧರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆದೆ ಸಾಗಿಸಲಾಗಿದೆ.
ಅಪಘಾತಕ್ಕೊಳಗಾದ ಈ ಆರ್ಮಿ ಟ್ರಕ್ ಮೂರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿತ್ತು. ಇಂದು ಬೆಳಗ್ಗೆ ಚಾಟೆನ್‌ನಿಂದ ಥಾಂಗು ಕಡೆಗೆ ಚಲಿಸುತ್ತಿತ್ತು. ಝೇಮಾ ಮಾರ್ಗದಲ್ಲಿ ಸಾಗುತ್ತಿದ್ದಾಗ ವಾಹನವು ತೀಕ್ಷ್ಣವಾದ ತಿರುವಿನಲ್ಲಿ ಕಡಿದಾದ ಇಳಿಜಾರಿನಲ್ಲಿ ಜಾರಿ ಕಮರಿಗೆ ಬಿದ್ದಿದೆ.
ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಗಾಯಗೊಂಡು ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತ 16 ಮಂದಿಯಲ್ಲಿ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಯೋಧರ ಪ್ರಾಣಹಾನಿಗೆ ಸಂತಾಪ ಸೂಚಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗಳ ಪ್ರಾಣಹಾನಿಯಿಂದ ತೀವ್ರ ನೋವಾಗಿದೆ. ಅವರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರವು ಕೃತಜ್ಞವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ನವೆಂಬರ್ನಲ್ಲಿ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಹಿಮಪಾತಕ್ಕೆ ಸಿಲುಕಿ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದರು. ಜಿಲ್ಲೆಯ ಮಚ್ಚಿಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸೇನೆಯ 55 ರಾಷ್ಟ್ರೀಯ ರೈಫಲ್ಸ್‌ನ ಮೂವರು ಯೋಧರು ಕರ್ತವ್ಯದಲ್ಲಿರುವಾಗ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲರ ಮೃತದೇಹಗಳನ್ನು ಹೊರತೆಗೆಯಲಾಗಿತ್ತು.
ನವೆಂಬರ್ನಲ್ಲಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಬಾರ್ಮರ್-ಚೌಹತನ್ ರಸ್ತೆಯಲ್ಲಿ ಬಿಎಸ್‌ಎಫ್ ಯೋಧರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದರು.
ಈ ವರ್ಷ ಮೇ ತಿಂಗಳಲ್ಲಿ 26 ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಭಾರತೀಯ ಸೇನೆಯ ಕನಿಷ್ಠ ಏಳು ಯೋಧರು ಹುತಾತ್ಮರಾಗಿದ್ದರು. 26 ಸೈನಿಕರ ತಂಡವು ಪರ್ತಾಪುರ್ ಕ್ಯಾಂಪ್‌ನಿಂದ ಲೇಹ್ ಜಿಲ್ಲೆಯ ತುರ್ತುಕ್‌ಗೆ ಬಸ್‌ನಲ್ಲಿ ತೆರಳಿದ್ದರು. ಈ ವೇಳೆ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ನದಿಗೆ ಬಿದ್ದಿದ್ದು, ಉಳಿದವರಿಗೆಲ್ಲರೂ ಗಾಯಗೊಂಡಿದ್ದರು.
Shopian Encounter: ಶೋಪಿಯಾನ್ನಲ್ಲಿ ಲಷ್ಕರ್-ಇ-ತೊಯ್ಬಾದ ಮೂವರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಡಿಸೆಂಬರ್ 20 ರಂದು ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಇ-ತೊಯ್ಬಾ (ಎಲ್‌ಇಟಿ) ಸಂಘಟನೆ ಜೊತೆ ನಂಟು ಹೊಂದಿದಗ್ದ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ