Tribal women get jobs: ಮೋದಿ ಬರ್ತ್‌ಡೇ ಗಿಫ್ಟ್, 1,898 ಬುಡಕಟ್ಟು ಮಹಿಳೆಯರಿಗೆ ಉದ್ಯೋಗ ನೀಡಿದ ಟಾಟಾ ಕಂಪನಿ
ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜಾರ್ಖಂಡ್‌ನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, 1,900 ಬುಡಕಟ್ಟು ಸಮುದಾಯದ ಮಹಿಳೆಯರಿಗೆ ಉದ್ಯೋಗ ನೀಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜಾರ್ಖಂಡ್‌ನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, 1,900 ಬುಡಕಟ್ಟು ಸಮುದಾಯದ ಮಹಿಳೆಯರಿಗೆ ಉದ್ಯೋಗ ನೀಡಿದೆ.
ಇತ್ತೀಚೆಗೆ ಜಾರ್ಖಾಂಡ್‌ನ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆದಿತ್ತು. ಅಲ್ಲಿ 1,900 ಬುಡಕಟ್ಟು ಮಹಿಳೆಯರು ಉದ್ಯೋಗ ಪಡೆದಿದ್ದಾರೆ. ಇವರು ಟಾಟಾ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಹೊಸೂರು ಘಟಕದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಈ ಉದ್ಯೋಗ ಮೇಳದಲ್ಲಿ 2,600 ಮಹಿಳೆಯರು ಪಾಲ್ಗೊಂಡಿದ್ದರು. ಇವರಲ್ಲಿ 1,898 ಮಹಿಳೆಯರು ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಬುಡಕಟ್ಟು ಮಹಿಳೆಯರ ಸಬಲೀಕರಣಕ್ಕಾಗಿ ಈ ಉದ್ಯೋಗ ಮೇಳ ಆಯೋಜಿಸಲಿದೆ ಮತ್ತು ಇಷ್ಟೊಂದು ಸಂಖ್ಯೆಯಲ್ಲಿ ಉದ್ಯೋಗ ನೀಡಿದ ಟಾಟಾ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ಗೆ ಧನ್ಯವಾದ ತಿಳಿಸುತ್ತೇನೆ ಎಂದು ಬುಡುಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಹೇಳಿದ್ದಾರೆ. ಈ ಉದ್ಯೋಗದ ಮೂಲಕ ತಮ್ಮ ಕೌಶಲವೃದ್ಧಿಸಿಕೊಳ್ಳಲು ಮತ್ತು ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿರುವುದಾಗಿ ಅವರು ಹೇಳಿದ್ದಾರೆ.
ಟಾಟಾ ಕಮ್ಯುನಿಕೇಷನ್ ಲಿಮಿಟೆಡ್ ಮತ್ತು ಬುಡುಕಟ್ಟು ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ತಂಡವು ರಾಂಚಿಯಲ್ಲಿ ಕ್ಯಾಂಪ್ ಮಾಡಿ ಈ ಬುಡಕಟ್ಟು ಮಹಿಳೆಯರ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದೆ.
ಆಯ್ಕೆಯಾದ ಈ ಮಹಿಳೆಯರಿಗೆ ತರಬೇತಿ, ಮೂಲಸೌಕರ್ಯ, ಆಹಾರ, ಸಾರಿಗೆ ವೆಚ್ಚ ಮತ್ತು ನಿರ್ದಿಷ್ಟ ವೇತನವನ್ನು ನೀಡುವುದಾಗಿ ಕಂಪನಿ ತಿಳಿಸಿದೆ.
ಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ(CISF Recruitment 2022) ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಸ್ಟೆನೊಗ್ರಾಪರ್) ಮತ್ತು ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟ್ರಿರಿಯಲ್) ಹುದ್ದೆಗಳಿಗೆ (Recruitment of Assistant Sub Inspector (Stenographer) and Head Constable (Ministerial) in CISF-2022) ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆಗಳ ಕುರಿತು ಹೆಚ್ಚಿನ ವಿವರ, ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ, ವೇತನ, ವಯೋಮಿತಿ, ದೈಹಿಕ ಸಾಮರ್ಥ್ಯ, ಸದೃಢತೆ ಇತ್ಯಾದಿ ವಿವರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ದೇಶದ ರಕ್ಷಣಾ ಸಚಿವಾಲಯದಡಿ ಬರುವ ಕೊಡಗು ಜಿಲ್ಲೆಯಲ್ಲಿರುವ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಸೈನಿಕ ಶಾಲೆಯಲ್ಲಿರುವ ವಿವಿಧ ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
.

ವಿಭಾಗ