Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ; 300 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ; 300 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ

Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ; 300 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ

ಇಂಡಿಯನ್ ಬ್ಯಾಂಕ್‌ನಲ್ಲಿ ಸ್ಥಳೀಯ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 2ರಂದು ಕೊನೆಯ ದಿನವಾಗಿದ್ದು, ಈ ಕೆಳಗೆ ನೀಡಿರುವ ಲಿಂಕ್‌ ಮೂಲಕ ನೇರವಾಗಿ ಅರ್ಜಿ ಸಲ್ಲಿಕೆ ಮಾಡಬಹುದು. ವಿವರಗಳನ್ನು ಕೆಳಗೆ ನೀಡಲಾಗಿದೆ.

ಇಂಡಿಯನ್ ಬ್ಯಾಂಕ್‌ನಲ್ಲಿ ಸ್ಥಳೀಯ ಬ್ಯಾಂಕ್ ಆಫೀಸರ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭ
ಇಂಡಿಯನ್ ಬ್ಯಾಂಕ್‌ನಲ್ಲಿ ಸ್ಥಳೀಯ ಬ್ಯಾಂಕ್ ಆಫೀಸರ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭ

ಇಂಡಿಯನ್ ಬ್ಯಾಂಕ್‌ನಲ್ಲಿ ಸ್ಥಳೀಯ ಬ್ಯಾಂಕ್ ಆಫೀಸರ್ (Local Bank Officers) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಂಡಿಯನ್ ಬ್ಯಾಂಕ್ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಮೂಲಕ ಭಾರತದಾದ್ಯಂತ ಒಟ್ಟು 300 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈಗಾಗಲೇ ನೇಮಕಾತಿ ಪ್ರಕ್ರಿಯೆ ತೆರೆಯಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯಾವುದೇ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ಖಾಲಿ ಇರುವ 35 ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ನೋಂದಣಿ ಪ್ರಕ್ರಿಯೆಯು ಆಗಸ್ಟ್ 13ರಂದು ಆರಂಭವಾಗಿದೆ. ಸೆಪ್ಟೆಂಬರ್ 2ರಂದು ಕೊನೆಯ ದಿನವಾಗಿದ್ದು, ಅದಕ್ಕೂ ಮುನ್ನ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಖಾಲಿ ಹುದ್ದೆಗಳ ವಿವರ

  • ಕರ್ನಾಟಕ: 35 ಹುದ್ದೆಗಳು
  • ಆಂಧ್ರಪ್ರದೇಶ ಮತ್ತು ತೆಲಂಗಾಣ: 50 ಹುದ್ದೆಗಳು
  • ಮಹಾರಾಷ್ಟ್ರ: 40 ಹುದ್ದೆಗಳು
  • ಗುಜರಾತ್: 15 ಹುದ್ದೆಗಳು
  • ತಮಿಳುನಾಡು/ ಪುದುಚೇರಿ: 160 ಹುದ್ದೆಗಳು

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಹತಾ ಮಾನದಂಡಗಳು

ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯು ಆನ್‌ಲೈನ್ ನೋಂದಾಣಿ ವೇಳೆ ಪದವಿಯಲ್ಲಿ ಪಡೆದ ಅಂಕಗಳ ಶೇಕಡಾವಾರು ಪ್ರಮಾಣವನ್ನು ನಮೂದಿಸಬೇಕು. ಇದಕ್ಕಾಗಿ ಶಿಕ್ಷಣಸಂಸ್ಥೆಯಿಂದ ನೀಡಲಾಗಿರುವ ಅಂಕಪಟ್ಟಿ / ಪದವಿ ಪ್ರಮಾಣಪತ್ರವನ್ನು ಹೊಂದಿರಬೇಕು.

ಪರೀಕ್ಷೆ ಹೇಗಿರುತ್ತದೆ?

ಪರೀಕ್ಷೆ ಅಥವಾ ಸಂದರ್ಶನದ ವಿವರಗಳನ್ನು ಅಭ್ಯರ್ಥಿಗಳಿಗೆ ಇಮೇಲ್ ಮೂಲಕ ಅಥವಾ ಬ್ಯಾಂಕ್ ವೆಬ್‌ಸೈಟ್ ಮೂಲಕ ನೀಡಲಾಗುತ್ತದೆ. ಪರೀಕ್ಷೆಯು 200 ಅಂಕಗಳಿಗಿದ್ದರೆ, ಸಂದರ್ಶನವು 100 ಅಂಕಗಳನ್ನು ಒಳಗೊಂಡಿರುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಸ್ವೀಕರಿಸಿದ ಒಟ್ಟು ಅರ್ಜಿಗಳ ಸಂಖ್ಯೆಯನ್ನು ಅವಲಂಬಿಸಿ, ಬ್ಯಾಂಕ್ ತನ್ನ ವಿವೇಚನೆಯ ಮೇರೆಗೆ ಆಯ್ಕೆ ವಿಧಾನವನ್ನು ನಿರ್ಧರಿಸುತ್ತದೆ. ಅರ್ಜಿಗಳ ಪರಿಶೀಲನೆ ಬಳಿಕ ಲಿಖಿತ ಅಥವಾ ಆನ್‌ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಆ ಬಳಿಕ ಸಂದರ್ಶನವನ್ನು ಒಳಗೊಂಡಿರುತ್ತದೆ. ಅಥವಾ ಆರಂಭದಲ್ಲೇ ಸಂದರ್ಶನವನ್ನೂ ನಡೆಸಬಹುದು.

ಅರ್ಜಿ ಶುಲ್ಕ

ಎಸ್ಸಿ/ಎಸ್ಟಿ ಹಾಗೂ ವಿಕಲ ಅಭ್ಯರ್ಥಿಗಳಿಗೆ 175 ರೂಪಾಯಿ ಶುಲ್ಕವಿದೆ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 1000 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಡೆಬಿಟ್, ಕ್ರೆಡಿಟ್ ಕಾರ್ಡ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಪಾವತಿ ಮಾಡಬಹುದು.

ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹೆಚ್ಚಿನ ಮಾಹಿತಿಗಾಗಿ ಇಂಡಿಯನ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ಪರಿಶೀಲಿಸಬಹುದು.

ಇನ್ನಷ್ಟು ಬ್ಯಾಂಕ್‌ ಉದ್ಯೋಗ ಮಾಹಿತಿಗೆ ಇಲ್ಲಿ ಕ್ಲಿಕ್‌ ಮಾಡಿ

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.