Bank Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ವ್ಯವಸ್ಥಾಪಕರ ಹುದ್ದೆಗೆ ನೇಮಕ, ವೇತನ ಮಾಸಿಕ 28 ಲಕ್ಷ ರೂ.
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bank Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ವ್ಯವಸ್ಥಾಪಕರ ಹುದ್ದೆಗೆ ನೇಮಕ, ವೇತನ ಮಾಸಿಕ 28 ಲಕ್ಷ ರೂ.

Bank Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ವ್ಯವಸ್ಥಾಪಕರ ಹುದ್ದೆಗೆ ನೇಮಕ, ವೇತನ ಮಾಸಿಕ 28 ಲಕ್ಷ ರೂ.

Bank Recruitment 2025: ಬ್ಯಾಂಕ್‌ ಆಫ್‌ ಬರೋಡಾವು ಈ ಸಾಲಿನಲ್ಲಿ ಹಿರಿಯ ವ್ಯವಸ್ಥಾಪಕ ಹುದ್ದೆಗೆ ಅರ್ಹ ಪದವೀಧರರಿಂದ ಅರ್ಜಿಯನ್ನು ಆಹ್ವಾನ ಮಾಡಿದೆ.

ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Bank Recruitment 2025:ಭಾರತದ ಅತ್ಯಂತ ಹಳೆಯ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (BOB)ದ 146 ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಆರಂಭವಾಗಿದ್ದು ಏಪ್ರಿಲ್ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.ಬ್ಯಾಂಕ್ ಆಫ್ ಬರೋಡಾ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಬ್ಯಾಂಕ್‌ ವಲಯದಲ್ಲಿ ಈಗಾಗಲೇ ಕೆಲಸ ಮಾಡಿ ಅನುಭವ ಇದ್ದವರು ವೃತ್ತಿಜೀವನದಲ್ಲಿ ಮತ್ತಷ್ಟು ಉತ್ತಮ ಹುದ್ದೆಗಳನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಈಗಾಗಲೇ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ.ಬ್ಯಾಂಕ್ ಆಫ್ ಬರೋಡಾ (BOB)ದಲ್ಲಿ ಒಟ್ಟು ನೇಮಕಗೊಳ್ಳಲಿರುವ ಹುದ್ದೆಗಳ ಸಂಖ್ಯೆ146 ಇದ್ದು ಭಾರತದಾದ್ಯಂತ ಕೆಲಸ ಮಾಡಲು ಸಿದ್ದರಿರಬೇಕಾಗುತ್ತದೆ. ಹಿರಿಯ ವ್ಯವಸ್ಥಾಪಕ ಹುದ್ದೆ ಇದಾಗಿದೆ. ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಎನ್ನುವ ಹೆಸರನ್ನು ಹುದ್ದೆಗಳಿಗೆ ನೀಡಲಾಗಿದೆ. ವಾರ್ಷಿಕ ಸಂಬಳವು ರೂ. 6,00,000 ದಿಂದ ಆರಂಭಗೊಂಡ 28,00,000 ಲಕ್ಷ ರೂ.ವರೆಗೂ ಇರಲಿದೆ.

ಅರ್ಹತಾ ವಿವರಗಳು ಹೀಗಿವೆ

ಶೈಕ್ಷಣಿಕ ಅರ್ಹತೆ: ಬ್ಯಾಂಕ್‌ ಆಫ್‌ ಬರೋಡಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿಯಲ್ಲಿ ಸಡಿಲಿಕೆ

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯಸ್ಸಿನ ರಿಯಾಯಿತಿ ಇದೆ. ವಿಕಲಚೇತನರಲ್ಲಿ (ಸಾಮಾನ್ಯ/ ಇಡಬ್ಲ್ಯೂಎಸ್) ಅಭ್ಯರ್ಥಿಗಳು 10 ವರ್ಷಗಳು, ವಿಕಲಚೇತನರಲ್ಲಿ (ಒಬಿಸಿ) ಅಭ್ಯರ್ಥಿಗಳು 13 ವರ್ಷಗಳು ಹಾಗೂ ವಿಕಲಚೇತನರಲ್ಲಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು 15 ವರ್ಷಗಳ ವಯಸ್ಸಿನ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಎಷ್ಟು

ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 600/- ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳು: ರೂ. 100/-

ಅರ್ಜಿ ಸಲ್ಲಿಸುವುದು ಹೀಗೆ

ಮೊದಲನೆ ಹಂತವಾಗು ಬ್ಯಾಂಕ್‌ ಆಫ್‌ ಬರೋಡಾ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ. ಆನಂತರ ನಿಮಗೆ ಅವಕಾಶವಿದ್ದರೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರು ಮಾಡಿ.

ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಮಾಹಿತಿ ಒದಗಿಸಿರಿ.

ಬ್ಯಾಂಕ್‌ ಆಫ್‌ ಬರೋಡಾ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ – ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬ್ಯಾಂಕ್‌ ಆಫ್‌ ಬರೋಡಾ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.

ಬ್ಯಾಂಕ್‌ ಆಫ್‌ ಬರೋಡಾ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಕ್ಲಿಕ್ ಮಾಡಿ. ನಂತರ ನೀವು ಸಲ್ಲಿಸಿದ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದಿಟ್ಟುಕೊಳ್ಳಿ. ಬ್ಯಾಂಕ್‌ ಆಯ್ಕೆಗೆ ಸಂಬಂಧಿಸಿದಂತೆ ನೀಡುವ ಸೂಚನೆಗಳನ್ನು ನಿಯಮಿತವಾಗಿ ಗಮನಿಸುತ್ತಾ ಇರಿ.

 

 

 

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.