Procedures before budget presentation: ಬಜೆಟ್ ಮಂಡನೆಗೂ ಮುನ್ನ ಸಚಿವ ಸಂಪುಟ ಸಭೆ, ರಾಷ್ಟ್ರಪತಿ ಅಂಕಿತ ಸೇರಿ ಹೇಗಿರುತ್ತೆ ಪ್ರಕ್ರಿಯೆ?
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Procedures Before Budget Presentation: ಬಜೆಟ್ ಮಂಡನೆಗೂ ಮುನ್ನ ಸಚಿವ ಸಂಪುಟ ಸಭೆ, ರಾಷ್ಟ್ರಪತಿ ಅಂಕಿತ ಸೇರಿ ಹೇಗಿರುತ್ತೆ ಪ್ರಕ್ರಿಯೆ?

Procedures before budget presentation: ಬಜೆಟ್ ಮಂಡನೆಗೂ ಮುನ್ನ ಸಚಿವ ಸಂಪುಟ ಸಭೆ, ರಾಷ್ಟ್ರಪತಿ ಅಂಕಿತ ಸೇರಿ ಹೇಗಿರುತ್ತೆ ಪ್ರಕ್ರಿಯೆ?

ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಕೆಲ ಪ್ರಕ್ರಿಯೆಗಳು ನಡೆಯುತ್ತವೆ. ಈ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್ (ಫೋಟೋ-ANI)
ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್ (ಫೋಟೋ-ANI)

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 1, 2023) ಬೆಳಗ್ಗೆ 11 ಗಂಟೆಗೆ 2023-24ನೇ ಸಾಲಿನ ಅಯವ್ಯಯವನ್ನು ಮಂಡಿಸಲಿದ್ದಾರೆ.

ಸೀತಾರಾಮನ್ ಅವರು ಮಂಡಿಸುತ್ತಿರುವ ಐದನೇ ಆಯವ್ಯಯ ಇದಾಗಿದೆ. ಈ ಭಾರಿಯೂ ಕಾಗದ ರಹಿತ ಬಜೆಟ್ ಮಂಡಿಸುತ್ತಿದ್ದು, ಡಿಜಿಟಲ್ ಟ್ಯಾಬ್ಲೆಟ್ ಮೂಲಕ ಆರ್ಥಿಕ ವರ್ಷದ ಆಯವ್ಯಯ ಮಂಡಿಸಲಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಕೆಲವು ಪ್ರಮುಖ ಪ್ರಕ್ರಿಯೆಗಳು ಕೆಲವೇ ಕೆಲವು ನಿಮಿಷಗಳು ಅಂತರದಲ್ಲಿ ನಡೆಯುತ್ತವೆ. ಆ ಪ್ರಕ್ರಿಯೆಗಳು ಯಾವುವು ಎಂಬುದರ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಬಜೆಟ್ ಮಂಡಿಸುವುದಕ್ಕೆ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ನಿವಾಸದಿಂದ ಹಣಕಾಸು ಸಚಿವಾಲಯಕ್ಕೆ ಆಗಮಿಸುತ್ತಾರೆ. ಅಲ್ಲಿ ಅಧಿಕಾರಿಗಳ ಜೊತೆ ಒಂದು ಸುತ್ತಿನ ಮಾತುಕತೆಯ ಬಳಿಕ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾರೆ.

ಮತ್ತೊಂದೆಡೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಹಣಕಾಸು ಇಲಾಖೆ ರಾಜ್ಯ ಸಚಿವ ಡಾ. ಭಾಗವತ್ ಕರದ್, ಸಚಿವ ಪಂಕಜ್ ಚೌಧರಿ ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿ ಬೆಳಗ್ಗೆ 9 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಇಂದಿನ ಬಜೆಟ್ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆಯಲಾಗುತ್ತದೆ. ಆ ಬಳಿಕ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ಬಜೆಟ್ ಗೆ ರಾಷ್ಟ್ರಪತಿ ಭವನಕ್ಕೆ ಕಳುಹಿಸಿ ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅಂಕಿತ ಪಡೆಯಲಾಗುತ್ತದೆ.

ಆ ನಂತರ ಅಂದರೆ ಬೆಳಗ್ಗೆ 11 ಗಂಟೆಗೆ ಸಚಿವ ನಿರ್ಮಲಾ ಸೀತಾರಾಮನ್ ಅವರು ಸಂಸತ್ ಕಲಾಪದಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

ಇತರೆ ದೇಶಗಳಿಗಿಂತ ನಮ್ಮ ಆರ್ಥಿಕತೆ ಚೆನ್ನಾಗಿದೆ

ಕೋವಿಡ್‌ನಿಂದ ದೇಶವು ಉತ್ತಮ ಚೇತರಿಕೆ ಕಂಡಿದೆ. ಆರ್ಥಿಕ ಸಮೀಕ್ಷೆಯನ್ನು ನೋಡಿದರೆ ಎಲ್ಲಾ ಕ್ಷೇತ್ರಗಳು ಪ್ರಗತಿಯಲ್ಲಿವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕತೆ ಉತ್ತಮವಾಗಿದೆ. 2014 ರಲ್ಲಿ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಿದಾಗ ಆರ್ಥಿಕ ವಿಷಯದಲ್ಲಿ ಭಾರತ 10ನೇ ಸ್ಥಾನದಲ್ಲಿತ್ತು. ಇಂದು ಅದು 5ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಡಾ ಬಿ ಕರದ್ ಹೇಳಿದ್ದಾರೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.