Bengaluru airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಉಗ್ರರ ನಿಗ್ರಹಕ್ಕೆ 1700 ಹೆಚ್ಚುವರಿ ಸಿಐಎಸ್‌ಎಫ್‌ ಸಿಬ್ಬಂದಿ ನಿಯೋಜನೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಉಗ್ರರ ನಿಗ್ರಹಕ್ಕೆ 1700 ಹೆಚ್ಚುವರಿ ಸಿಐಎಸ್‌ಎಫ್‌ ಸಿಬ್ಬಂದಿ ನಿಯೋಜನೆ

Bengaluru airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಉಗ್ರರ ನಿಗ್ರಹಕ್ಕೆ 1700 ಹೆಚ್ಚುವರಿ ಸಿಐಎಸ್‌ಎಫ್‌ ಸಿಬ್ಬಂದಿ ನಿಯೋಜನೆ

Bengaluru airport: ಈಗಾಗಲೇ ಕರ್ನಾಟಕದ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಅರೆಸೇನಾ ಪಡೆಯ 3,500 ಪುರುಷ ಮತ್ತು ಮಹಿಳಾ ಸಿಬ್ಬಂದಿ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 1700 ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಉಗ್ರರ ನಿಗ್ರಹಕ್ಕೆ 1700 ಹೆಚ್ಚುವರಿ ಸಿಐಎಸ್‌ಎಫ್‌ ಸಿಬ್ಬಂದಿಗಳ ನಿಯೋಜನೆ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಉಗ್ರರ ನಿಗ್ರಹಕ್ಕೆ 1700 ಹೆಚ್ಚುವರಿ ಸಿಐಎಸ್‌ಎಫ್‌ ಸಿಬ್ಬಂದಿಗಳ ನಿಯೋಜನೆ (ANI)

ಬೆಂಗಳೂರು: ಇತ್ತೀಚೆಗೆ ಹೊಸದಾಗಿ ವಿಸ್ತರಣೆಗೊಂಡ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಯೋತ್ಪಾದನಾ ನಿಗ್ರಹ ಉದ್ದೇಶಕ್ಕಾಗಿ ಸುಮಾರು 1700 ಸಿಐಎಸ್‌ಎಫ್‌ ಸಿಬ್ಬಂದಿಯನ್ನು ಕೇಂದ್ರ ಸರಕಾರ ಮಂಜೂರು ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ಕರ್ನಾಟಕದ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಅರೆಸೇನಾ ಪಡೆಯ 3,500 ಪುರುಷ ಮತ್ತು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 1700 ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ.

ಸೆಂಟ್ರಲ್‌ ಇಂಡಸ್ಟ್ರಿಯಲ್‌ ಸೆಕ್ಯುರಿಟಿ ಫೋರ್ಸ್‌ (ಸಿಐಎಸ್‌ಎಫ್‌), ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ 1ರಲ್ಲಿ ಕಾರ್ಯನಿರ್ವಹಿಸಲಿದೆ. ಪ್ರಯಾಣಿಕರನ್ನು ಪರೀಕ್ಷಿಸುವುದು, ಅವರ ಕ್ಯಾಬಿನ್ ಸಾಮಾನುಗಳನ್ನು ಸ್ಕ್ಯಾನ್ ಮಾಡುವುದು ಮತ್ತು ಸಮಗ್ರ ಶಸ್ತ್ರಸಜ್ಜಿತ ಆಂಟಿ-ಹೈಜಾಕ್ ಮತ್ತು ಕೌಂಟರ್-ಟೆರರಿಸ್ಟ್ ಕವರ್ ಅನ್ನು ಸಿಐಎಸ್‌ಎಫ್‌ ಒದಗಿಸಲಿದೆ.

ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೊಸದಾಗಿ ನಿಯೋಜಿಸಲಾದ 3,500 ಸಿಬ್ಬಂದಿಯ ಜತೆಗೆ ಹೆಚ್ಚುವರಿಯಾಗಿ ಸುಮಾರು 1,700 ಸಿಐಎಸ್‌ಎಫ್ ಸಿಬ್ಬಂದಿಯನ್ನು ಮಂಜೂರು ಮಾಡಿದೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ ವರ್ಷ ನವೆಂಬರ್‌ನಲ್ಲಿ ಕೆಐಎಯ ಟರ್ಮಿನಲ್‌ 2 ಉದ್ಘಾಟಿಸಿದ್ದರು. ಇದು ಪರಿಸರ ಸ್ನೇಹಿಕಟ್ಟಡವಾಗಿದ್ದು, ಸುಮಾರು 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚುತ್ತಿರುವುದರಿಂದ ಮತ್ತು ಚೆಕ್‌ ಇನ್‌ ಕೌಂಟರ್‌ಗಳಲ್ಲಿ ಚೆಕ್‌ಇನ್‌, ಭದ್ರತಾ ಪರಿಶೀಲನೆಗೆ ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿರುವುದರಿಂದ ಹೊಸದಾಗಿ ಭದ್ರತಾ ಸಿಬ್ಬಂದಿಯನ್ನು ಮಂಜೂರು ಮಾಡಲಾಗಿದೆ.

ಇದೇ ರೀತಿ ದೆಹಲಿಯ ಇಂದಿರಾ ಗಾಂಧಿ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ನಲ್ಲಿ 1400 ಸಿಐಎಸ್‌ಎಫ್‌ ಸಿಬ್ಬಂದಿಯನ್ನು ಮಂಜೂರು ಮಾಡಲಾಗಿದೆ.

ಸಿಐಎಸ್‌ಎಫ್‌ ಈಗ ಭಾರತದ 66 ನಾಗರಿಕ ವಿಮಾನ ನಿಲ್ದಾಣಗಳಲ್ಲಿ ಸೇವೆ ಸಲ್ಲಿಸುತ್ತಿದೆ.

ಇದೇ ಜನವರಿ 15ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಕಾರ್ಯಾಚರಣೆ ಆರಂಭಿಸಿತ್ತು. ಡೊಳ್ಳು ಕುಣಿತ ಪ್ರದರ್ಶನ, ಮನರಂಜನೆ ಕಾರ್ಯಕ್ರಮಗಳು, ಟರ್ಮಿನಲ್ 2 ಆವರಣದಲ್ಲಿ ದೀಪವನ್ನು ಬೆಳಗಿಸುವ ಮೂಲಕ ಅದರ ವಾಣಿಜ್ಯ ಕಾರ್ಯಾಚರಣೆಗೆ ಚಾಲನೆ ನೀಡಲಾಗಿತ್ತು.

ಉದ್ಘಾಟನೆಗೊಂಡು ಎರಡು ತಿಂಗಳಾದರೂ ಟರ್ಮಿನಲ್ 2 ವೀಕ್ಷಣೆಗ ಕೆಂಪೇಗೌಡ ವಿಮಾನ ನಿಲ್ದಾಣ ಆಡಳಿತ ಮಂಡಳಿ ಅವಕಾಶ ನೀಡಿರಲಿಲ್ಲ. ಇದೇ ಜನವರಿ 15ರ ಬಳಿಕ ಈ ಟರ್ಮಿನಲ್‌ ಜನರ ಪ್ರವೇಶಕ್ಕೆ ಮುಕ್ತವಾಗಿದೆ.

ಟರ್ಮಿನಲ್‌ 2 ಉದ್ಯಾನ ನಗರಿ ಬೆಂಗಳೂರಿನ ಸೌಂದರ್ಯವನ್ನು ಉಣಬಡಿಸುವ ವಿನ್ಯಾಸವನ್ನು ಹೊಂದಿದೆ. ಟರ್ಮಿನಲ್‌ 2 ಉದ್ಘಾಟನೆಯೊಂದಿಗೆ, ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯ ಹಾಗೂ ಚೆಕ್-ಇನ್ ಮತ್ತು ವಲಸೆಗಾಗಿ ಕೌಂಟರ್‌ಗಳು ದ್ವಿಗುಣಗೊಂಡಿವೆ.

ದ್ಯಾನ ನಗರಿ ಬೆಂಗಳೂರಿನ ಸೌಂದರ್ಯದ ಅನುಭವ ನೀಡಲು, 'ವಾಕ್‌ ಇನ್‌ ದಿ ಗಾರ್ಡನ್‌' ಹೆಸರಿನ ಟರ್ಮಿನಲ್‌ 2ನ್ನು ನಿರ್ಮಿಸಲಾಗಿದೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.