BJP National Executive Meet: 9 ರಾಜ್ಯಗಳಲ್ಲಿ ದಿಗ್ವಿಜಯ ಸಾಧಿಸಲು ಬಿಜೆಪಿ ಪಣ:ಮಹತ್ವದ ಸಭೆಯ ಮೊದಲ ದಿನದ ನಿರ್ಣಯಗಳೇನು?
2024ರ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದು ಪರಿಗಣಿಸಲಾಗುವ ಈ ವರ್ಷ ನಡೆಯಲಿರುವ ಒಂಬತ್ತು ರಾಜ್ಯಗಳ ವಿಧಾನಸಭೆಯಲ್ಲಿ ದಿಗ್ವಿಜಯ ಸಾಧಿಸಲು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಣ ತೊಡಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಮೊದಲ ದಿನದ ಸಭೆಯಲ್ಲಿ, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಯಿತು.
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದು ಪರಿಗಣಿಸಲಾಗುವ ಈ ವರ್ಷ ನಡೆಯಲಿರುವ ಒಂಬತ್ತು ರಾಜ್ಯಗಳ ವಿಧಾನಸಭೆಯಲ್ಲಿ ದಿಗ್ವಿಜಯ ಸಾಧಿಸಲು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಣ ತೊಡಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಮೊದಲ ದಿನದ ಸಭೆಯಲ್ಲಿ, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಯಿತು.
ಮುಂಬರುವ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಬಿಜೆಪಿ ಎರಡು ದಿನಗಳ ಬೃಹತ್ ಕಾರ್ಯತಂತ್ರದ ಅಧಿವೇಶನವನ್ನು ಪ್ರಾರಂಭಿಸಿದೆ.ಮೊದಲ ದಿನದ ಅಧಿವೇಶನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ದೆಹಲಿಯಲ್ಲಿ ಬೃಹತ್ ರೋಡ್ ಶೋ ನಡೆಸಿದ್ದರು.
ಇನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಮೊದಲ ದಿನದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪಕ್ಷದ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಪ್ರಸ್ತಕ ವರ್ಷ ಬರಲಿರುವ 9 ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಗೆಲ್ಲಲು ಪಕ್ಷವು ಬದ್ಧವಾಗಿದೆ ಎಂದು ತಿಳಸಿದರು. ಈಗ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಲಾಗಿದ್ದು, ಮೊದಲ ದಿನದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು ಎಂದು ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದರು.
ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ 35 ಕೇಂದ್ರ ಸಚಿವರು, 12 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು 37 ರಾಜ್ಯ ಘಟಕಗಳ ಮುಖ್ಯಸ್ಥರು ಭಾಗವಹಿಸುತ್ತಿದ್ದಾರೆ. ಅಲ್ಲದೇ ವಿವಿಧ ರಾಜ್ಯಗಳಿಂದ ಪಕ್ಷದ ಸುಮಾರು 350 ಕಾರ್ಯಕರ್ತರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಕಾರುಗಳು ಮತ್ತು ಸೆಲ್‌ಫೋನ್‌ಗಳ ಉತ್ಪಾದನೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಭಾರತವು ಅಗಾಧ ಸಾಧನೆ ಮಾಡಿದೆ. ದೇಶದ ಟಿಜಿಟಲ್ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸಂಭವಿಸಿದ್ದು, ಈ ಸಾಧನೆಗಳನ್ನು ಮುಂದುವರೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದೂ ರವಿಶಂಕರ್ ಪ್ರಸಾದ್ ಮಾಹಿತಿ ನೀಡಿದರು.
"ಭಾರತವು ಇಂಗ್ಲೆಂಡ್ ಅನ್ನು ಮೀರಿಸುವ ಮೂಲಕ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ರಾಷ್ಟ್ರವಾಗಿ ಬೆಳೆದಿದೆ. ಭಾರತ ಈಗ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಉತ್ಪಾದಕ ರಾಷ್ಟ್ರವಾಗಿದೆ. 2013-14ರಲ್ಲಿ ಸೆಲ್‌ಫೋನ್‌ಗಳನ್ನು ಆಮದು ಮಾಡಿಕೊಳ್ಳುತ್ತಿದ್ದ ರಾಷ್ಟ್ರ, ಈಗ ಸೆಲ್‌ಫೋನ್‌ಗಳನ್ನು ರಫ್ತು ಮಾಡುತ್ತಿದೆ. ಇದು ಪ್ರಧಾನಿ ಮೋದಿ ಅವರ ಕೇಂದ್ರ ಸರ್ಕಾರದ ಸಾಧನೆ ಎಂದು ರವಿಶಂಕರ್ ಪ್ರಸಾದ್ ಪ್ರಶಂಸೆ ವ್ಯಕ್ತಪಡಿಸಿದರು.
ಒಟ್ಟಿನಲ್ಲಿ ಮುಂಬರುವ ಒಂಬತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಗೆಲ್ಲುವುದರ ಬಗ್ಗೆ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಮೊದಲ ದಿನ ಚರ್ಚೆ ಮಾಡಲಾಗಿದೆ.
ಇಂದಿನ ಪ್ರಮುಖ ಸುದ್ದಿಗಳು
Rich Indians Wealth: ಭಾರತದ ಶೇ.1ರಷ್ಟು ಶ್ರೀಮಂತರ ಬಳಿ ದೇಶದ ಶೇ.40ರಷ್ಟು ಸಂಪತ್ತು: ಈ ಅಸಮಾನತೆ ತರಲಿದೆಯೇ ಆಪತ್ತು?
ಭಾರತದಲ್ಲಿನ ಶೇ.1ರಷ್ಟು ಶ್ರೀಮಂತರ ಬಳಿ ದೇಶದ ಶೇ.40ಕ್ಕೂ ಹೆಚ್ಚು ಸಂಪತ್ತು ಇದ್ದು, ಜನಸಂಖ್ಯೆಯ ಕೆಳಭಾಗದ ಅರ್ಧದಷ್ಟು ಜನರು ಕೇವಲ ಶೇ.3ರಷ್ಟು ಸಂಪತ್ತನ್ನು ಹಂಚಿಕೊಂಡಿದ್ದಾರೆ ಎಂದು ಹೊಸ ಅಧ್ಯಯನವೊಂದು ಬಹಿರಂಗಪಡಿಸಿದೆ. ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯ ಮೊದಲ ದಿನ, ತನ್ನ ವಾರ್ಷಿಕ ಅಸಮಾನತೆಯ ವರದಿಯನ್ನು, ಆಕ್ಸ್‌ಫ್ಯಾಮ್ ಇಂಟರ್‌ನ್ಯಾಶನಲ್ ಬಿಡುಗಡೆ ಮಾಡಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.
Kanhaiya on RSS-BJP: 'ಆರೆಸ್ಸೆಸ್ ಮರದ ಬೇರಾದರೆ, ಬಿಜೆಪಿ ಅದರ ಹಣ್ಣು.. ಅವೆರಡನ್ನು ಪ್ರತ್ಯೇಕವಾಗಿ ನೋಡುವುದಿಲ್ಲ' - ಕನ್ಹಯ್ಯಾ ಕುಮಾರ್
“ನಾವು ಆರೆಸ್ಸೆಸ್ ಮತ್ತು ಬಿಜೆಪಿಯನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಆರೆಸ್ಸೆಸ್ ಮರದ ಬೇರಾದರೆ, ಬಿಜೆಪಿ ಅದರ ಹಣ್ಣು” ಎಂದು ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ಹೇಳಿದರು. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.
ವಿಭಾಗ