ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನ ಗೆಲ್ಲುತ್ತೆ, ವಿಶ್ಲೇಷಣೆಗಳಿಗೆ ನಿಮ್ಮ ಸಮಯ ವ್ಯರ್ಥಮಾಡಿಕೊಳ್ಳಬೇಡಿ; ಪ್ರಶಾಂತ್ ಕಿಶೋರ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನ ಗೆಲ್ಲುತ್ತೆ, ವಿಶ್ಲೇಷಣೆಗಳಿಗೆ ನಿಮ್ಮ ಸಮಯ ವ್ಯರ್ಥಮಾಡಿಕೊಳ್ಳಬೇಡಿ; ಪ್ರಶಾಂತ್ ಕಿಶೋರ್

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎಗೆ ಭಾರಿ ಗೆಲುವು ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಇದರ ನಡುವೆ ಪ್ರಶಾಂತ್ ಬಿಜೆಪಿಗೆ ಸ್ಪಷ್ಟ ಬಹುಮತದ ಭವಿಷ್ಯ ನುಡಿದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನ ಗೆಲ್ಲುತ್ತೆ, ಸುಮ್ಮನೆ ವಿಶ್ಲೇಷಣೆಗಳಿಗೆ ನಿಮ್ಮ ಸಯಮ ವ್ಯರ್ಥಮಾಡಿಕೊಳ್ಳಬೇಡಿ ಎಂದು ಚುನಾವಣೆ ತಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನ ಗೆಲ್ಲುತ್ತೆ, ಸುಮ್ಮನೆ ವಿಶ್ಲೇಷಣೆಗಳಿಗೆ ನಿಮ್ಮ ಸಯಮ ವ್ಯರ್ಥಮಾಡಿಕೊಳ್ಳಬೇಡಿ ಎಂದು ಚುನಾವಣೆ ತಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. (PTI file)

ದೆಹಲಿ: ಲೋಕಸಭಾ ಚುನಾವಣೆಗೆ 2024 ರ (Lok Sabha Election 2024) ಎಕ್ಸಿಟ್ ಪೋಲ್ ಫಲಿತಾಂಶಗಳು (Exit Polls Results 2024) ಬಿಡುಗಡೆಯಾದ ಬೆನ್ನಲ್ಲೇ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಶನಿವಾರ "ನಕಲಿ ಪತ್ರಕರ್ತರು ಮತ್ತು ಲೌಡ್ ಮೌತ್ ರಾಜಕಾರಣಿಗಳನ್ನು" ತರಾಟೆಗೆ ತೆಗೆದುಕೊಂಡಿದ್ದಾರೆ. "ನಿಷ್ಪ್ರಯೋಜಕ ಚರ್ಚೆಗಳು" ಮತ್ತು "ವಿಶ್ಲೇಷಣೆಗಳಿಗೆ" ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಪ್ರಶಾಂತ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಮತಗಟ್ಟೆ ಸಮೀಕ್ಷೆಗಳು ಬಿಹಿರಂಗವಾದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ಪ್ರಶಾಂತ್ ಕಿಶೋರ್ ಅವರು, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆಲ್ಲಬಹುದು, 2019 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆದ್ದ ಸ್ಥಾನಗಳ ಸಂಖ್ಯೆ ಅಥವಾ ಸ್ವಲ್ಪ ಹೆಚ್ಚು ಎಂದು ಜನ್ ಸುರಾಜ್ ಪಕ್ಷದ ಮುಖ್ಯಸ್ಥರೂ ಆಗಿರುವ ಪ್ರಶಾಂತ್ ಹೇಳಿದ್ದಾರೆ.

2024 ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಡುಗಡೆಯಾಗುವ ಕೆಲವೇ ಗಂಟೆಗಳ ಮೊದಲು, ದಿ ಪ್ರಿಂಟ್‌ಗೆ ನೀಡಿದ ಸಂದರ್ಶನದಲ್ಲಿ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕಾರ್ಯಕ್ಷಮತೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಪುನರುಚ್ಚರಿಸಿದ್ದಾರೆ. ಪಶ್ಚಿಮ ಮತ್ತು ಉತ್ತರ ಭಾರತದಲ್ಲಿ, ಸ್ಥಾನಗಳ ಸಂಖ್ಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ನಾನು ನೋಡುತ್ತಿಲ್ಲ. ಭಾರತದ ಪೂರ್ವ ಮತ್ತು ದಕ್ಷಿಣದ ಪ್ರದೇಶಗಳಿಂದ ಪಕ್ಷವು ಸಾಕಷ್ಟು ಬೆಂಬಲವನ್ನು ಗಳಿಸಿದೆ" ಎಂದು ಹೇಳಿದ್ದಾರೆ.

ಪೂರ್ವ ಮತ್ತು ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿಯ ಸ್ಥಾನಗಳ ಸಂಖ್ಯೆ ಮತ್ತು ಮತ ಹಂಚಿಕೆಯಲ್ಲಿ ಸಂಭಾವ್ಯ ಏರಿಕೆಯನ್ನು ಪ್ರಶಾಂತ್ ಕಿಶೋರ್ ಸೂಚಿಸಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ತನ್ನ ಅಸ್ತಿತ್ವವನ್ನು ಹೆಚ್ಚಿಸಲು ಪಕ್ಷದಿಂದ ಹೆಚ್ಚಿನ ಪ್ರಯತ್ನಗಳು ನಡೆದಿವೆ. ಈ ಪ್ರದೇಶಗಳಲ್ಲಿ ಮತದಾರರಿಗೆ ಬಿಜೆಪಿಯೊಂದಿಗೆ ತುಲನಾತ್ಮಕವಾಗಿ ಪರಿಚಯವಿಲ್ಲದ ಕಾರಣ ಲಾಭವನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಹಲವು ಚುನಾವಣೋತ್ತರ ಸಮೀಕ್ಷೆಗಳು ತಮಿಳುನಾಡು ಮತ್ತು ಕೇರಳದಲ್ಲಿ ಎನ್‌ಡಿಎ ತನ್ನ ಖಾತೆಯನ್ನು ತೆರೆಯಲಿದೆ ಮತ್ತು ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿವೆ. ಆದರೆ ಬಿಹಾರ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಹರಿಯಾಣದಂತಹ ರಾಜ್ಯಗಳಲ್ಲಿ ತನ್ನ ಸಂಖ್ಯಾಬಲದಲ್ಲಿ ಕುಸಿತವನ್ನು ಕಾಣಬಹುದು, ಆದರೆ ಉತ್ತರ ಪ್ರದೇಶವು ಬಿಜೆಪಿಯ ಭದ್ರಕೋಟೆಯಾಗಿ ಉಳಿಯುವ ನಿರೀಕ್ಷೆಯಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದೊಡ್ಡ ಬಹುಮತವನ್ನು ಪಡೆಯುವ ನಿರೀಕ್ಷೆ ಇದೆ ಎಂದು ಹೇಳಿವೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ 543 ಸದಸ್ಯರ ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 361-401 ಸ್ಥಾನಗಳು ಮತ್ತು ಪ್ರತಿಪಕ್ಷ ಇಂಡಿಯಾ ಬಣಕ್ಕೆ 131-166 ಸ್ಥಾನಗಳನ್ನು ಊಹಿಸಿದ್ದರೆ, ಎಬಿಪಿ-ಸಿ ವೋಟರ್ ಆಡಳಿತ ಮೈತ್ರಿಕೂಟಕ್ಕೆ 353-383 ಸ್ಥಾನಗಳು ಮತ್ತು ಇಂಡಿಯಾ ಬಣಕ್ಕೆ 152-182 ಸ್ಥಾನಗಳನ್ನು ಊಹಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಮೈತ್ರಿಗೆ '400 ಪಾರ್' ಘೋಷಣೆಯನ್ನು ನೀಡಿತ್ತು. ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024