Karnataka BJP Candidate list: ಇಂದು ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆ: ಬಸವರಾಜ ಬೊಮ್ಮಾಯಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /   Karnataka Bjp Candidate List: ಇಂದು ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆ: ಬಸವರಾಜ ಬೊಮ್ಮಾಯಿ

Karnataka BJP Candidate list: ಇಂದು ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆ: ಬಸವರಾಜ ಬೊಮ್ಮಾಯಿ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು(Karnataka BJP Candidate list) ಇಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಸರಾಜ್ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

Karnataka BJP Candidate list: ಇಂದು ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆ: ಬಸವರಾಜ ಬೊಮ್ಮಾಯಿ  (ANI Photo/ Shrikant Singh)
Karnataka BJP Candidate list: ಇಂದು ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆ: ಬಸವರಾಜ ಬೊಮ್ಮಾಯಿ (ANI Photo/ Shrikant Singh) (Shrikant Singh)

ಬೆಂಗಳೂರು/ನವದೆಹಲಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು(Karnataka BJP Candidate list) ಇಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಸರಾಜ್ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷದ ನಾಯಕರು ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಮೊದಲ ಪಟ್ಟಿಯಲ್ಲಿ 170-180 ಅಭ್ಯರ್ಥಿಗಳ ಹೆಸರು ಇರಬಹುದು ಎಂದು ರಾಜ್ಯ ಬಿಜೆಪಿಯ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಂದಾಜಿಸಿದ್ದಾರೆ. ಇಂದು ಪಟ್ಟಿಯನ್ನು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರೀಕ್ಷಿಸಬಹುದು ಎಂದು ಬೊಮ್ಮಾಯಿ ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷದ ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದ ನಂತರ ಮುಖ್ಯಮಂತ್ರಿ ಮತ್ತು ಇತರ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ನಂತರ ಅದನ್ನು ಬಿಡುಗಡೆ ಮಾಡಲಾಗುತ್ತದೆ.

ಕರ್ನಾಟಕ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸೋಮವಾರ ಹಗಲು ಚರ್ಚೆ ನಡೆಸಿದ್ದರು, ಇತ್ತೀಚಿನ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿವಿಧ ಮುಖಂಡರು ಮಾಡಿದ ಸಲಹೆಗಳನ್ನು ತಮ್ಮ ಚರ್ಚೆಯಲ್ಲಿ ಸೇರಿಸಿಕೊಂಡರು. ಅಮಿತ್‌ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ರಾಜ್ಯದ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ನಿನ್ನೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭ್ಯರ್ಥಿಗಳ ಪಟ್ಟಿ ಕುರಿತು ಮಾತನಾಡಿದ್ದರು. "ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ್ಪ ನವರು ಎಲ್ಲಾ ಮೀಟಿಂಗ್ ನಲ್ಲೂ ಸಹ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ ಅಧ್ಯಕ್ಷರನ್ನು ಸಹ ಭೇಟಿಯಾಗಿ ಅವರ ವೈಯಕ್ತಿಕ ಅಭಿಪ್ರಾಯ ನೀಡಿದ್ದಾರೆ. ನಾವು ಸುದೀರ್ಘವಾದ ಚರ್ಚೆ ಮಾಡಿದ್ದೇವೆ" ಎಂದು ಹೇಳಿದ್ದರು.

ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. "ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂದಮೇಲೆ ನಾಳೆ (ಮಂಗಳವಾರ) ತಡ ರಾತ್ರಿ ಅಥವಾ ನಾಡಿದ್ದು ಪಟ್ಟಿ ಬಿಡುಗಡೆ ಮಾಡುತ್ತೇವೆ" ಎಂದು ಹೇಳಿದ್ದರು. ಇಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದ ಪ್ರಕಾರ, ಇಂದು ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಅಲ್ಲದಿದ್ದರೆ ನಾಳೆ ಮೊದಲ ಪ್ರಕಟವಾಗುವುದು ಖಾತ್ರಿ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದಕ್ಷಿಣ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಬಿಜೆಪಿ 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. 2018 ರ ವಿಧಾನಸಭಾ ಚುನಾವಣೆಯಲ್ಲಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಏಕೈಕ ಪಕ್ಷವಾಗಿ ಹೊರಹೊಮ್ಮಿತು, ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಗೆದ್ದುಕೊಂಡಿತು.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ವಿಧಾನಸಭೆಯ ಮತ ಎಣಿಕೆ ನಡೆಯಲಿದೆ.

ಕರ್ನಾಟಕ ಚುನಾವಣೆಗೆ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳ ಕ್ರಮವಾಗಿ 166 ಮತ್ತು 93 ಅಭ್ಯರ್ಥಿಗಳನ್ನು ಇಲ್ಲಿಯವರೆಗೆ ಘೋಷಿಸಿವೆ. ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳನ್ನು ಮತ್ತು ಎರಡನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳನ್ನು ಘೋಷಿಸಿತ್ತು.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.