ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Price Today: ಚಿನಿವಾರ ಪೇಟೆಯಲ್ಲಿ ಸತತ 4ನೇ ದಿನವೂ ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ

Gold Price Today: ಚಿನಿವಾರ ಪೇಟೆಯಲ್ಲಿ ಸತತ 4ನೇ ದಿನವೂ ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ

ಚಿನಿವಾರ ಪೇಟೆಯಲ್ಲಿಂದು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ನೀವು ಚಿನ್ನ ಖರೀದಿಸುವ ಪ್ಲಾನ್ ಮಾಡಿದ್ದರೆ ಒಮ್ಮೆ ಬೆಲೆಗಳನ್ನು ಪರಿಶೀಲಿಸಿ ಆ ನಂತರ ಖರೀದಿಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ಚಿನ್ನ, ಬೆಳ್ಳಿ ದರದ ಮಾಹಿತಿ ಇಲ್ಲಿದೆ.

ಆಭರಣಗಳೊಂದಿಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (PTI)
ಆಭರಣಗಳೊಂದಿಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (PTI)

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ(Gold and Silver price) ಇಂದು (ಆಗಸ್ಟ್ 28, ಸೋಮವಾರ) ಯಥಾಸ್ಥಿತಿಯಲ್ಲಿದೆ. ಸತತ 4 ದಿನಗಳಿಂದ ಚಿನ್ನಾಭರಣಗಳ ದರಗಳು ಏರಿಳಿತವಾಗದಿರುವುದು ಚಿನ್ನಾಭರಣ ಪ್ರಿಯರಿಗೆ ಸಂತಸದ ವಿಷಯವಾಗಿದೆ. ನೀವು ಏನಾದರೂ ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡಿದ್ದರೆ ಚಿನ್ನಾಭರಣಗಳ ಬೆಲೆಗಳನ್ನು ಒಮ್ಮೆ ಪರೀಕ್ಷಿಸಿಕೊಳ್ಳಿ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 59,450 ರೂಪಾಯಿ ಇದೆ. ನಿನ್ನೆ ಕೂಡ ಇದೇ ಬೆಲೆ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ 54,500 ರೂಪಾಯಿಗೆ ಬಂದು ನಿಂತಿದೆ. ಒಂದು ಕೆಜಿ ಬೆಳ್ಳಿ ಬೆಲೆ ಇಂದು 75,500 ರೂಪಾಯಿ ಇದೆ. ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿ ಇದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.

ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನ, ಬೆಳ್ಳಿ ದರಗಳು:

Gold and silver rate in india: ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 59,450 ರೂಪಾಯಿ ಇದೆ. 22 ಕ್ಯಾರೆಟ್ ಚಿನ್ನದ ದರ 54,500 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಹೈದರಾಬಾದ್ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 80,000 ರೂಪಾಯಿಗೆ ವ್ಯಾಪಾರ ಆಗುತ್ತಿದೆ. ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,500 ಆಗಿದೆ. 24 ಕ್ಯಾರೆಟ್ ಚಿನ್ನಕ್ಕೆ 59,450 ರೂಪಾಯಿ ಇದೆ. ಇಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 80,000 ರೂಪಾಯಿಗೆ ಇದೆ. ವಿಶಾಖಪಟ್ಟಣಂ ಮಾರುಕಟ್ಟೆಯಲ್ಲಿ 22ಕ್ಯಾರೆಟ್ ಚಿನ್ನದ ಬೆಲೆ 54,500 ರೂಪಾಯಿ ಆಗಿದ್ದು, 24ಕ್ಯಾರೆಟ್ ಚಿನ್ನದ ಬೆಲೆ 59,450 ರೂಪಾಯಿಗೆ ಇಳಿದಿದೆ.

ಟ್ರೆಂಡಿಂಗ್​ ಸುದ್ದಿ

ದೇಶದ ಇತರ ನಗರಗಳಿಗೆ ಹೋಲಿಸಿಕೊಂಡಾಗ ನೆರೆಯ ಚೆನ್ನೈನಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿದೆ. ಚೆನ್ನೈನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ 54,800 ಇದೆ. 24 ಕ್ಯಾರೆಟ್ ಚಿನ್ನದ ಬೆಲೆ 59,780 ರೂಪಾಯಿಗೆ ಮಾರಾಟ ಆಗುತ್ತಿದೆ. ಚೆನ್ನೈನಲ್ಲೂ ಕೆಜಿ ಬೆಳ್ಳಿ 80,000 ರೂಪಾಯಿ ಇದೆ.

ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 54,500 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 59,450 ರೂಪಾಯಿ ಇದೆ. ದೇಶದ ವಾಣಿಜ್ಯ ನಗರಿಯಲ್ಲಿ ಕೆಜಿ ಬೆಳ್ಳಿ ಬೆಲೆ 76,900 ರೂಪಾಯಿ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 54,650 ರೂ., 24 ಕ್ಯಾರೆಟ್ ಚಿನ್ನದ ಬೆಲೆ 59,600 ರೂಪಾಯಿಯಲ್ಲಿ ವ್ಯಾಪಾರ ಮುಂದುವರೆಯುತ್ತಿದೆ. ಇಲ್ಲಿ ಬೆಳ್ಳಿ ಬೆಲೆ 76,900 ರೂಪಾಯಿಗೆ ವಹಿವಾಟು ನಡೆಸುತ್ತಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.