ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಶುಕ್ರವಾರ ಸ್ವಲ್ಪ ಇಳಿಕೆ ಕಂಡ ಹಳದಿ ಲೋಹದ ದರ, ಏರುತ್ತಲೇ ಇದೆ ಬೆಳ್ಳಿ ಬೆಲೆ

Gold Rate Today: ಶುಕ್ರವಾರ ಸ್ವಲ್ಪ ಇಳಿಕೆ ಕಂಡ ಹಳದಿ ಲೋಹದ ದರ, ಏರುತ್ತಲೇ ಇದೆ ಬೆಳ್ಳಿ ಬೆಲೆ

ಚಿನ್ನದ ದರ ಇಳಿಕೆಯಾಗುತ್ತಿಲ್ಲ ಎಂದು ಬೇಸರ ಪಟ್ಟುಕೊಂಡವರಿಗೆ ಕಣ್ಣೊರೆಸುವಂತೆ ಕಳೆದ ಎರಡು ದಿನಗಳಿಂದ ಹಳದಿ ಲೋಹದ ಬೆಲೆ ಕಡಿಮೆಯಾಗುತ್ತಿದೆ. ಆದರೆ ಕೇವಲ 10-10 ರೂಪಾಯಿ ಇಳಿಕೆಯಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ಎದುರಾಗಿದೆ. ಬೆಳ್ಳಿ ದರದ ಏರಿಕೆಯು ನಿಲ್ಲುತ್ತಿಲ್ಲ.

ಮೇ 10ರ ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ಏರಿಕೆ
ಮೇ 10ರ ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ಏರಿಕೆ

ಬೆಂಗಳೂರು: ಚಿನ್ನದ ದರ ಕಡಿಮೆಯಾಗಿದೆ ಎಂದರೆ ಯಾರಾದ್ರೂ ಖುಷಿಪಡುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಇಳಿಕೆಯು ಖುಷಿ ನೀಡುತ್ತಿಲ್ಲ. ಅದಕ್ಕೆ ಕಾರಣ ದಿನಕ್ಕೆ 10, 20 ರೂಪಾಯಿ ಇಳಿಕೆಯಾಗುವುದು. ಇದರಿಂದ ಆಭರಣ ಪ್ರಿಯರಿಗೆ ನಿರಾಸೆಯಾಗುತ್ತಿದೆ ಹೊರತು ಖುಷಿ ಸಿಗುತ್ತಿಲ್ಲ. ಇನ್ನು ಬೆಳ್ಳಿ ದರ ನಿರಂತರವಾಗಿ ಏರಿಕೆ ಕಾಣುತ್ತಿದೆ. ಶುಕ್ರವಾರ (ಮೇ 10) ರಂದು ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಎಂಬುದನ್ನು ಗಮನಿಸಿ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,615 ರೂ. ಇದೆ. ನಿನ್ನೆ 6,625 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 10 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 52,920 ರೂ. ನೀಡಬೇಕು. ನಿನ್ನೆ 53,000 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 80 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 66,150 ರೂ ಇದೆ. ನಿನ್ನೆ 66,250 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 100 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,61,500 ರೂ. ನೀಡಬೇಕು. ನಿನ್ನೆ 6,62,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 1,000 ರೂ. ಕಡಿಮೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,216 ರೂ. ಇದೆ. ನಿನ್ನೆ 7,227 ರೂ. ಇದು ಈ ದರಕ್ಕೆ ಹೋಲಿಸಿದರೆ 11 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,728 ರೂ. ನೀಡಬೇಕು. ನಿನ್ನೆ 57,816 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 88 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,160 ನೀಡಬೇಕು. ನಿನ್ನೆ 72,270 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 110 ರೂ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,21,600 ರೂ. ಇದೆ. ನಿನ್ನೆ 7,22,700 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 1,100 ರೂ ಕಡಿಮೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,150 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 72,160 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. 24 ಕ್ಯಾರೆಟ್‌ಗೆ 72,160 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. 24 ಕ್ಯಾರೆಟ್‌ಗೆ 72,160 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,300 ರೂ. 24 ಕ್ಯಾರೆಟ್‌ಗೆ 72,310 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. 24 ಕ್ಯಾರೆಟ್‌ಗೆ 72,160 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. ಇದ್ದರೆ, 24 ಕ್ಯಾರೆಟ್‌ಗೆ 72,160 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. 24 ಕ್ಯಾರೆಟ್‌ಗೆ 72,160 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 85.20 ರೂ. ಇದೆ. 8 ಗ್ರಾಂಗೆ 681.60 ರೂ ಇದ್ದರೆ, 10 ಗ್ರಾಂಗೆ 852 ರೂ. ಇದೆ. 100 ಗ್ರಾಂಗೆ 8,520 ರೂ. ಹಾಗೂ 1 ಕಿಲೋಗೆ 85,200 ರೂ. ಬೆಲೆ ನಿಗದಿ ಆಗಿದೆ.

IPL_Entry_Point