ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಎರಡು ದಿನಗಳ ಇಳಿಕೆಯ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ದರ; ಶನಿವಾರವೂ ಬೆಳ್ಳಿ ದರ ಹೆಚ್ಚಳ

Gold Rate Today: ಎರಡು ದಿನಗಳ ಇಳಿಕೆಯ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ದರ; ಶನಿವಾರವೂ ಬೆಳ್ಳಿ ದರ ಹೆಚ್ಚಳ

ನಿರಂತರ ಏರಿಕೆಯ ಬಳಿಕ ಕಳೆದೆರಡು ದಿನಗಳು ಚಿನ್ನದ ದರ ತುಸು ಇಳಿಕೆಯಾಗಿತ್ತು. ವಾರಾಂತ್ಯದಲ್ಲೂ ಚಿನ್ನದ ದರ ಇಳಿಕೆಯಾಗಬಹುದು ಎಂದು ನೀವು ನಿರೀಕ್ಷೆ ಮಾಡಿದ್ದರೆ ನಿಮಗೆ ನಿರಾಸೆ ಕಾಡುವುದು ಖಚಿತ. ಯಾಕೆಂದರೆ ಶನಿವಾರ (ಮೇ 11) ಚಿನ್ನ ಹಾಗೂ ಬೆಳ್ಳಿ ಎರಡರ ದರವೂ ಏರಿಕೆಯಾಗಿದೆ.

ಮೇ 11 ರಂದು ಚಿನ್ನ ಹಾಗೂ ಬೆಳ್ಳಿ ದರ ಏರಿಕೆ
ಮೇ 11 ರಂದು ಚಿನ್ನ ಹಾಗೂ ಬೆಳ್ಳಿ ದರ ಏರಿಕೆ

ಬೆಂಗಳೂರು: ಚಿನ್ನ ಹಾಗೂ ಬೆಳ್ಳಿಯ ದರ ಏರಿಳಿತವನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ಬಹುತೇಕ ಏರಿಕೆ ಕಂಡಿದ್ದೇ ಹೆಚ್ಚು. ಚಿನ್ನದ ದರದೊಂದಿಗೆ ಇತ್ತೀಚಿನ ದಿನಗಳಲ್ಲಿ ಬೆಳ್ಳಿ ದರ ಕೂಡ ಹೆಚ್ಚಳವಾಗುತ್ತಿದೆ. ಅಕ್ಷಯ ತೃತೀಯ ಹಿನ್ನೆಲೆ ನಿನ್ನೆ ಕೊಂಚ ಇಳಿಕೆಯಾಗಿದ್ದ ದರ ಇಂದು ಮತ್ತೆ ಏರಿಕೆಯಾಗಿದೆ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,700 ರೂ. ಇದೆ. ನಿನ್ನೆ 6,615 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 85 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,600 ರೂ. ನೀಡಬೇಕು. ನಿನ್ನೆ 52,920 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 680 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 67,000 ರೂ ಇದೆ. ನಿನ್ನೆ 66,150 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 850 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,70,000 ರೂ. ನೀಡಬೇಕು. ನಿನ್ನೆ 6,61,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 8,500 ರೂ. ಏರಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,309 ರೂ. ಇದೆ. ನಿನ್ನೆ 7,216 ರೂ. ಇದು ಈ ದರಕ್ಕೆ ಹೋಲಿಸಿದರೆ 93 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 58,472 ರೂ. ನೀಡಬೇಕು. ನಿನ್ನೆ 57,728 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 744 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 73,090 ನೀಡಬೇಕು. ನಿನ್ನೆ 72,160 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 930 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,30,900 ರೂ. ಇದೆ. ನಿನ್ನೆ 7,21,600 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 9,300 ರೂ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 67,000 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 73,090 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,700 ರೂ. 24 ಕ್ಯಾರೆಟ್‌ಗೆ 73,850 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,000 ರೂ. 24 ಕ್ಯಾರೆಟ್‌ಗೆ 73,090 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,150 ರೂ. 24 ಕ್ಯಾರೆಟ್‌ಗೆ 73,240 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,000 ರೂ. 24 ಕ್ಯಾರೆಟ್‌ಗೆ 73,090 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,000 ರೂ. ಇದ್ದರೆ, 24 ಕ್ಯಾರೆಟ್‌ಗೆ 73,090 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,000 ರೂ. 24 ಕ್ಯಾರೆಟ್‌ಗೆ 73,090 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 87 ರೂ. ಇದೆ. 8 ಗ್ರಾಂಗೆ 696 ರೂ ಇದ್ದರೆ, 10 ಗ್ರಾಂಗೆ 870 ರೂ. ಇದೆ. 100 ಗ್ರಾಂಗೆ 8,700 ರೂ. ಹಾಗೂ 1 ಕಿಲೋಗೆ 87,000 ರೂ. ಬೆಲೆ ನಿಗದಿ ಆಗಿದೆ.

IPL_Entry_Point