ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಆಭರಣ ಪ್ರಿಯರಿಗೆ ಇಲ್ಲಿದೆ ಭರ್ಜರಿ ಸುದ್ದಿ, ಚಿನ್ನದೊಂದಿಗೆ ಬೆಳ್ಳಿ ಬೆಲೆಯೂ ಇಳಿಕೆ; ರಾಜ್ಯದಲ್ಲಿಂದು ದರ ಎಷ್ಟಿದೆ ಗಮನಿಸಿ

Gold Rate Today: ಆಭರಣ ಪ್ರಿಯರಿಗೆ ಇಲ್ಲಿದೆ ಭರ್ಜರಿ ಸುದ್ದಿ, ಚಿನ್ನದೊಂದಿಗೆ ಬೆಳ್ಳಿ ಬೆಲೆಯೂ ಇಳಿಕೆ; ರಾಜ್ಯದಲ್ಲಿಂದು ದರ ಎಷ್ಟಿದೆ ಗಮನಿಸಿ

ಆಭರಣ ಪ್ರಿಯರಿಗೆ ಬುಧವಾರ (ಮೇ 15) ಶುಭಸುದ್ಧಿ ಇದೆ. ಇಂದು ಚಿನ್ನ ಹಾಗೂ ಬೆಳ್ಳಿ ಎರಡರ ದರದಲ್ಲೂ ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಮೇಲೆ 400 ರೂ ಕಡಿಮೆಯಾದರೆ, ಬೆಳ್ಳಿ ಕೆಜಿ ಮೇಲೆ 250 ರೂ ಕಡಿಮೆಯಾಗಿದೆ. ದೇಶದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಾಗಿದೆ ಗಮನಿಸಿ.

ಮೇ 15ರ ಚಿನ್ನ, ಬೆಳ್ಳಿ ದರ
ಮೇ 15ರ ಚಿನ್ನ, ಬೆಳ್ಳಿ ದರ

ಬೆಂಗಳೂರು: ಚಿನ್ನಾಭರಣ ದರ ನಿರ್ಧಾರವಾಗುವುದು ಅಂತರರಾಷ್ಟ್ರೀಯ ಮಾರುಕಟ್ಟೆಯನ್ನು ಅವಲಂಭಿಸಿದೆ. ಭಾರತದಲ್ಲಿ ಇತ್ತೀಚಿಗೆ ಚಿನ್ನ, ಬೆಳ್ಳಿ ದರದಲ್ಲಿ ಹಾವು ಏಣಿಯಾಣ ಮುಂದುವರಿದಿದೆ. ಚಿನ್ನದ ದರ ಕೊಂಚ ಕಡಿಮೆಯಾದರೂ ದುಪ್ಪಟ್ಟು ಏರಿಕೆ ಕಂಡು ನಿರಾಸೆ ಮೂಡಿಸುತ್ತಿದೆ. ಇದೀಗ ಮೇ 15ರ ಬುಧವಾರ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು, ಬೆಳ್ಳಿ ದರವೂ ಕಡಿಮೆಯಾಗಿದೆ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,675 ರೂ. ಇದೆ. ನಿನ್ನೆ 6,715 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 40 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,400 ರೂ. ನೀಡಬೇಕು. ನಿನ್ನೆ 53,720 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 320 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 67,750 ರೂ ಇದೆ. ನಿನ್ನೆ 67,150 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 400 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,67,500 ರೂ. ನೀಡಬೇಕು. ನಿನ್ನೆ 6,71,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 4,000 ರೂ. ಕಡಿಮೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,282 ರೂ. ಇದೆ. ನಿನ್ನೆ 7,325 ರೂ. ಇದು ಈ ದರಕ್ಕೆ ಹೋಲಿಸಿದರೆ 43 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 58,256 ರೂ. ನೀಡಬೇಕು. ನಿನ್ನೆ 58,600 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 344 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,820 ನೀಡಬೇಕು. ನಿನ್ನೆ 73,250 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 430 ರೂ ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,28,200 ರೂ. ಇದೆ. ನಿನ್ನೆ 7,32,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 4,300 ರೂ ಕಡಿಮೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,750 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 72,820 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,900 ರೂ. 24 ಕ್ಯಾರೆಟ್‌ಗೆ 72,980 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,750 ರೂ. 24 ಕ್ಯಾರೆಟ್‌ಗೆ 72,820 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,900 ರೂ. 24 ಕ್ಯಾರೆಟ್‌ಗೆ 72,970 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,750 ರೂ. 24 ಕ್ಯಾರೆಟ್‌ಗೆ 72,820 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,750 ರೂ. ಇದ್ದರೆ, 24 ಕ್ಯಾರೆಟ್‌ಗೆ 72,820 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,750 ರೂ. 24 ಕ್ಯಾರೆಟ್‌ಗೆ 72,820 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ಇಳಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 86 ರೂ. ಇದೆ. 8 ಗ್ರಾಂಗೆ 688 ರೂ ಇದ್ದರೆ, 10 ಗ್ರಾಂಗೆ 860 ರೂ. ಇದೆ. 100 ಗ್ರಾಂಗೆ 8,600 ರೂ. ಹಾಗೂ 1 ಕಿಲೋಗೆ 86,000 ರೂ. ಬೆಲೆ ನಿಗದಿ ಆಗಿದೆ.

IPL_Entry_Point