Gold Rate Today: ಇಳಿಕೆಯಾದ ಬೆನ್ನಲ್ಲೇ ಮತ್ತೆ ಏರಿತು ಬಂಗಾರದ ಬೆಲೆ; ಬುಧವಾರ ತುಸು ಕಡಿಮೆಯಾಯ್ತು ಬೆಳ್ಳಿ ದರ
ಮಂಗಳವಾರ ಕೊಂಚ ಕಡಿಮೆಯಾಗಿ ಖುಷಿ ಮೂಡಿಸಿದ್ದ ಚಿನ್ನದ ದರ ಇದೀಗ ಇಂದು (ಜುಲೈ 17) ಮತ್ತೆ ಏರಿಕೆ ಕಂಡಿದೆ. ಚಿನ್ನದ ದರ ಏರಿಕೆ ಕಂಡಿರುವುದು ಆಭರಣ ಪ್ರಿಯರಿಗೆ ಬೇಸರ ಮೂಡಿಸಿದೆ. ಆದರೆ ಬೆಳ್ಳಿ ದರದಲ್ಲಿ ಕೊಂಚ ಕಡಿಮೆಯಾಗಿರುವುದನ್ನು ಈ ವೇಳೆ ಗಮನಿಸಬಹುದು. ಇಂದು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚಿನ್ನದ ದರ ಎಷ್ಟಿದೆ ಗಮನಿಸಿ.

ಬೆಂಗಳೂರು: ಚಿನ್ನಾಭರಣಕ್ಕೆ ಭಾರತದಲ್ಲಿ ಎಂದಿಗೂ ಬೇಡಿಕೆ ಕಡಿಮೆಯಾಗುವುದಿಲ್ಲ. ಯಾಕೆಂದರೆ ಭಾರತೀಯರು ಆಭರಣ ಪ್ರಿಯರು. ಹಳದಿ ಲೋಹದ ದರ ದಿನೇ ದಿನೇ ಗಗನಕ್ಕೇರುತ್ತಿದ್ದರೂ ಚಿನ್ನದ ಕೊಳ್ಳುವ ವಿಚಾರದಲ್ಲಿ ಯಾರೂ ಹಿಂದೇಟು ಹಾಕುತ್ತಿಲ್ಲ. ಇತ್ತೀಚಿನ ವರ್ಷಗಳಲ್ಲಿ ಚಿನ್ನದ ದರದಲ್ಲಿ ವಿಪರೀತ ಏರಿಕೆ ಕಾಣುತ್ತಿದೆ. ನಿನ್ನೆಯಷ್ಟೇ ಕೊಂಚ ಇಳಿಕೆಯಾಗಿ ಖುಷಿ ಕೊಟ್ಟಿದ್ದ ಬಂಗಾರ ಇಂದು ಮತ್ತೆ ಏರಿಕೆಯಾಗಿದೆ, ನಿನ್ನೆಗಿಂತ ಇಂದು ಬೆಳ್ಳಿ ದರ ತುಸು ಕಡಿಮೆಯಾಗಿದೆ. ದೇಶದಾದ್ಯಂತ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಗಮನಿಸಿ.
22 ಕ್ಯಾರೆಟ್ ಚಿನ್ನದ ಬೆಲೆ
ಇಂದು 1 ಗ್ರಾಂ ಚಿನ್ನಕ್ಕೆ 6,785 ರೂ ಇದೆ. ನಿನ್ನೆ 6,750 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 35 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,280 ರೂ ನೀಡಬೇಕು. ನಿನ್ನೆ 54,000 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 280 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 67,850 ರೂ ಇದೆ. ನಿನ್ನೆ 67,500 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 350 ರೂ. ಕಡಿಮೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,78,500 ರೂ. ನೀಡಬೇಕು. ನಿನ್ನೆ 6,75,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 3,500 ರೂ. ಏರಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ
24 ಕ್ಯಾರೆಟ್ ಚಿನ್ನಕ್ಕೆ 1 ಗ್ರಾಂಗೆ 7,402 ರೂ. ಇದೆ. ನಿನ್ನೆ 7,364 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 38 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 59,216 ರೂ. ನೀಡಬೇಕು. ನಿನ್ನೆ 58,912 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 304 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 74,020 ನೀಡಬೇಕು. ನಿನ್ನೆ 73,640 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 380 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,40,200 ರೂ. ಇದೆ. ನಿನ್ನೆ 7,36,640 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 3,800 ರೂ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಚಿನ್ನದ ಬೆಲೆ (1 ಗ್ರಾಂ)
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 6,785 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 7,402 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.
ಹೊರ ರಾಜ್ಯಗಳಲ್ಲಿ ಚಿನ್ನದ ದರ (1 ಗ್ರಾಂ)
ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 6,830 ರೂ. 24 ಕ್ಯಾರೆಟ್‌ಗೆ 7,451 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 6,785 ರೂ. 24 ಕ್ಯಾರೆಟ್‌ಗೆ 7,402 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 6,800 ರೂ. 24 ಕ್ಯಾರೆಟ್‌ಗೆ 7,417 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 6,785 ರೂ. 24 ಕ್ಯಾರೆಟ್‌ಗೆ 7,402 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 6,785 ರೂ. ಇದ್ದರೆ, 24 ಕ್ಯಾರೆಟ್‌ಗೆ 7,402 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 6,785 ರೂ. 24 ಕ್ಯಾರೆಟ್‌ಗೆ 7,402 ರೂ. ಆಗಿದೆ.
ಬೆಳ್ಳಿ ದರ
ಇಂದು ಬೆಳ್ಳಿ ದರ ತುಸು ಇಳಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 94.25 ರೂ. ಇದೆ. 8 ಗ್ರಾಂಗೆ 754 ರೂ ಇದ್ದರೆ, 10 ಗ್ರಾಂಗೆ 942.50 ರೂ. ಇದೆ. 100 ಗ್ರಾಂಗೆ 9,425 ರೂ. ಹಾಗೂ 1 ಕಿಲೋಗೆ 94,250 ರೂ. ಬೆಲೆ ನಿಗದಿ ಆಗಿದೆ.