ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಚಿನ್ನದ ಬೆಲೆ ಕೊಂಚ ಕಡಿಮೆಯಾಗಿ ಭರವಸೆ ಮೂಡಿದ್ದರೂ ಕಳೆದೆರಡು ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಬಹುತೇಕ ಬೆಳ್ಳಿ ದರವೂ ಏರುಗತ್ತಿಯತ್ತಲೇ ಸಾಗುತ್ತಿದೆ. ಶುಕ್ರವಾರ (ಮೇ 17) ಚಿನ್ನ ಹಾಗೂ ಬೆಳ್ಳಿ ಎರಡರ ದರದಲ್ಲೂ ಹೆಚ್ಚಳವಾಗಿದೆ.

ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ
ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಬೆಂಗಳೂರು: ಮೇ ತಿಂಗಳು ಅರ್ಧ ಕಳೆದಿದೆ. ಬಹುತೇಕ ಕಾರ್ಯಕ್ರಮಗಳೆಲ್ಲಾ ಮುಗಿದು ಮಳೆಗಾಲ ಹತ್ತಿರದಲ್ಲಿದೆ. ಇನ್ನಾದರೂ ಚಿನ್ನದ ದರ ಕಡಿಮೆಯಾಗಬಹುದು ಎಂದು ಆಭರಣ ಪ್ರಿಯರು ಅಂದುಕೊಳ್ಳುತ್ತಿದ್ದರೆ ಅವರಿಗೆ ನಿರಾಸೆ ಕಾಡುವುದು ಖಂಡಿತ. ಶುಕ್ರವಾರ ಲಕ್ಷ್ಮೀ ಒಲಿಯಬಹುದು ಎಂದುಕೊಂಡಿದ್ದರೆ ಇಂದು ಕೂಡ ಆಭರಣ ದರ ಏರಿಕೆಯಾಗಿದೆ. ಹಾಗಾದರೆ ಕರ್ನಾಟಕದ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಇಂದು ಚಿನ್ನ, ಬೆಳ್ಳಿ ದರ ಎಷ್ಟಾಗಿದೆ ಗಮನಿಸಿ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,785 ರೂ. ಇದೆ. ನಿನ್ನೆ 6,715 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 70 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,280 ರೂ. ನೀಡಬೇಕು. ನಿನ್ನೆ 53,720 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 560 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 67,850 ರೂ ಇದೆ. ನಿನ್ನೆ 67,150 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 700 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,78,500 ರೂ. ನೀಡಬೇಕು. ನಿನ್ನೆ 6,71,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 7,000 ರೂ. ಏರಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,402 ರೂ. ಇದೆ. ನಿನ್ನೆ 7,325 ರೂ. ಇದು ಈ ದರಕ್ಕೆ ಹೋಲಿಸಿದರೆ 77 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 59,216 ರೂ. ನೀಡಬೇಕು. ನಿನ್ನೆ 58,600 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 616 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 74,020 ನೀಡಬೇಕು. ನಿನ್ನೆ 73,250 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 770 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,40,200 ರೂ. ಇದೆ. ನಿನ್ನೆ 7,32,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 7,700 ರೂ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (1 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 6,785 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 7,402 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (1 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,795 ರೂ. 24 ಕ್ಯಾರೆಟ್‌ಗೆ 7,413 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,785 ರೂ. 24 ಕ್ಯಾರೆಟ್‌ಗೆ 7,402 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,800 ರೂ. 24 ಕ್ಯಾರೆಟ್‌ಗೆ 7,417 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,785 ರೂ. 24 ಕ್ಯಾರೆಟ್‌ಗೆ 7,402 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,785 ರೂ. ಇದ್ದರೆ, 24 ಕ್ಯಾರೆಟ್‌ಗೆ 7,402 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,785 ರೂ. 24 ಕ್ಯಾರೆಟ್‌ಗೆ 7,402 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 86.75 ರೂ. ಇದೆ. 8 ಗ್ರಾಂಗೆ 694 ರೂ ಇದ್ದರೆ, 10 ಗ್ರಾಂಗೆ 867.50 ರೂ. ಇದೆ. 100 ಗ್ರಾಂಗೆ 8,675 ರೂ. ಹಾಗೂ 1 ಕಿಲೋಗೆ 86,750 ರೂ. ಬೆಲೆ ನಿಗದಿ ಆಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024