ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಶನಿವಾರ (ಮೇ 18) ತುಸು ಕಡಿಮೆಯಾಗಿದ್ದ ಬಂಗಾರದ ದರ ಭಾನುವಾರ (ಮೇ 19) ದುಪ್ಪಟ್ಟು ಹೆಚ್ಚಾಗಿದೆ. ಭಾನುವಾರ ಆಭರಣ ಮಳಿಗೆಗೆ ಹೋಗಬೇಕು ಅಂದುಕೊಂಡವರಿಗೆ ಇಂದು ಭಾರಿ ನಿರಾಸೆ ಕಾಡುವುದು ಖಚಿತ. ಇಂದು ಬೆಳ್ಳಿ ದರವೂ ತುಸು ಏರಿಕೆಯಾಗಿದೆ.

ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ
ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಬೆಂಗಳೂರು: ಚಿನ್ನದ ದರ ಯಾವಾಗ ಕಡಿಮೆ ಆಗುತ್ತದೆ ಎಂದು ಕಾದು ಕುಳಿತವರಿಗೆ ನಿರಾಸೆಯೇ ಹೊರತು ಭರವಸೆ ಖಂಡಿತ ಮೂಡುವುದಿಲ್ಲ. ಯಾಕೆಂದರೆ ಒಂದಿಷ್ಟು ದಿನಗಳಿಂದ ಚಿನ್ನದ ದರದಲ್ಲಿ ಏರುಗತಿಯೇ ಕಾಣುತ್ತಿದೆ. ತುಸು ಇಳಿಕೆಯಾದ್ರೂ ಏರಿಕೆಯ ಪ್ರಮಾಣವೇ ಹೆಚ್ಚಿರುವ ಕಾರಣ ಚಿನ್ನದ ದರ ಬಗ್ಗೆ ನಿರಾಸೆಯೇ ಹೆಚ್ಚಿದೆ. ಇದರೊಂದಿಗೆ ಮೇ ತಿಂಗಳಿನಲ್ಲಿ ಬೆಳ್ಳಿ ದರವೂ ಒಂದೇ ಸಮನೆ ಏರುತ್ತಿದೆ. ಭಾನುವಾರ ಚಿನ್ನ ಹಾಗೂ ಬೆಳ್ಳಿ ಎರಡರ ದರವೂ ಹೆಚ್ಚಾಗಿದೆ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,840 ರೂ. ಇದೆ. ನಿನ್ನೆ 6,760 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 80 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,720 ರೂ. ನೀಡಬೇಕು. ನಿನ್ನೆ 54,080 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 640 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 68,400 ರೂ ಇದೆ. ನಿನ್ನೆ 67,600 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 800 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,84,000 ರೂ. ನೀಡಬೇಕು. ನಿನ್ನೆ 6,76,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 8,000 ರೂ. ಹೆಚ್ಚಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,462 ರೂ. ಇದೆ. ನಿನ್ನೆ 7,375 ರೂ. ಇದು ಈ ದರಕ್ಕೆ ಹೋಲಿಸಿದರೆ 87 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 59,696 ರೂ. ನೀಡಬೇಕು. ನಿನ್ನೆ 59,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 696 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 74,620 ನೀಡಬೇಕು. ನಿನ್ನೆ 73,750 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 870 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,46,200 ರೂ. ಇದೆ. ನಿನ್ನೆ 7,37,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 8,700 ರೂ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (1 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 6,840 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 7,462 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (1 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,850 ರೂ. 24 ಕ್ಯಾರೆಟ್‌ಗೆ 7,473 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,840 ರೂ. 24 ಕ್ಯಾರೆಟ್‌ಗೆ 7,462 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,855 ರೂ. 24 ಕ್ಯಾರೆಟ್‌ಗೆ 7,477 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,840 ರೂ. 24 ಕ್ಯಾರೆಟ್‌ಗೆ 7,462 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,840 ರೂ. ಇದ್ದರೆ, 24 ಕ್ಯಾರೆಟ್‌ಗೆ 7,462 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,840 ರೂ. 24 ಕ್ಯಾರೆಟ್‌ಗೆ 7,462 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 89 ರೂ. ಇದೆ. 8 ಗ್ರಾಂಗೆ 712 ರೂ ಇದ್ದರೆ, 10 ಗ್ರಾಂಗೆ 890 ರೂ. ಇದೆ. 100 ಗ್ರಾಂಗೆ 8,900 ರೂ. ಹಾಗೂ 1 ಕಿಲೋಗೆ 89,000 ರೂ. ಬೆಲೆ ನಿಗದಿ ಆಗಿದೆ.

 

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024