Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ದರ ಶನಿವಾರ (ಮೇ 18) ಇಳಿಕೆಯಾಗಿದೆ. ಇಂದು ಬೆಳ್ಳಿ ದರವೂ ತಟಸ್ಥವಾಗಿದೆ. ನೀವು ಚಿನ್ನ ಖರೀದಿಸುವ ಆಸೆ ಇದ್ದರೆ ಇಂದು ಆಭರಣ ಮಳಿಗೆಗೆ ಭೇಟಿ ನೀಡಬಹುದು. ಅದಕ್ಕೂ ಮುನ್ನ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಗಮನಿಸಿ.

ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ
ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

ಬೆಂಗಳೂರು: ದೇಶದಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಹಾವು ಏಣಿಯಾಟ ಆರಂಭವಾಗಿದೆ. ಚಿನ್ನದ ದರ ಎರಡು ದಿನಗಳು ಏರಿಕೆಯಾಗಿದ್ದು ಇಂದು ಪುನಃ ಇಳಿಕೆಯಾಗಿದೆ. ಸತತವಾಗಿ ಏರುತ್ತಲೇ ಇದ್ದ ಬೆಳ್ಳಿ ಬೆಲೆ ಇಂದು ತಟಸ್ಥವಾಗಿದೆ. ಆಭರಣ ಖರೀದಿ ಮಾಡುವವರಿಗೆ ಗೊಂದಲ ಮೂಡಿಸುತ್ತಿದೆ ದೈನಂದಿನ ಬೆಲೆ. ಅದೇನೆ ಇರಲಿ ಇಂದು (ಮೇ 18) ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ನೋಡಲು ಮುಂದೆ ಓದಿ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,780 ರೂ. ಇದೆ. ನಿನ್ನೆ 6,785 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 25 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,080 ರೂ. ನೀಡಬೇಕು. ನಿನ್ನೆ 54,280 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 200 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 67,600 ರೂ ಇದೆ. ನಿನ್ನೆ 67,850 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 250 ರೂ. ಕಡಿಮೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,76,000 ರೂ. ನೀಡಬೇಕು. ನಿನ್ನೆ 6,78,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 2,500 ರೂ. ಇಳಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,375 ರೂ. ಇದೆ. ನಿನ್ನೆ 7,402 ರೂ. ಇದು ಈ ದರಕ್ಕೆ ಹೋಲಿಸಿದರೆ 27 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 59,000 ರೂ. ನೀಡಬೇಕು. ನಿನ್ನೆ 59,216 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 216 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 73,750 ನೀಡಬೇಕು. ನಿನ್ನೆ 74,020 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 270 ರೂ ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,37,500 ರೂ. ಇದೆ. ನಿನ್ನೆ 7,40,200 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 2,700 ರೂ ಇಳಿಕೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (1 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 6,760 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 7,375 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (1 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,770 ರೂ. 24 ಕ್ಯಾರೆಟ್‌ಗೆ 7,385 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,760 ರೂ. 24 ಕ್ಯಾರೆಟ್‌ಗೆ 7,375 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,775 ರೂ. 24 ಕ್ಯಾರೆಟ್‌ಗೆ 7,390 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,760 ರೂ. 24 ಕ್ಯಾರೆಟ್‌ಗೆ 7,375 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,760 ರೂ. ಇದ್ದರೆ, 24 ಕ್ಯಾರೆಟ್‌ಗೆ 7,375 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,760 ರೂ. 24 ಕ್ಯಾರೆಟ್‌ಗೆ 7,375 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 86.75 ರೂ. ಇದೆ. 8 ಗ್ರಾಂಗೆ 694 ರೂ ಇದ್ದರೆ, 10 ಗ್ರಾಂಗೆ 867.50 ರೂ. ಇದೆ. 100 ಗ್ರಾಂಗೆ 8,675 ರೂ. ಹಾಗೂ 1 ಕಿಲೋಗೆ 86,750 ರೂ. ಬೆಲೆ ನಿಗದಿ ಆಗಿದೆ.

 

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.