Gold Rate Today: ಆಭರಣ ಪ್ರಿಯರಿಗೆ ಇಲ್ಲಿದೆ ಭರ್ಜರಿ ಸುದ್ದಿ, ಬಹುದಿನಗಳ ಬಳಿಕ ಭಾರಿ ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆಯೂ ಕುಸಿತ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಆಭರಣ ಪ್ರಿಯರಿಗೆ ಇಲ್ಲಿದೆ ಭರ್ಜರಿ ಸುದ್ದಿ, ಬಹುದಿನಗಳ ಬಳಿಕ ಭಾರಿ ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆಯೂ ಕುಸಿತ

Gold Rate Today: ಆಭರಣ ಪ್ರಿಯರಿಗೆ ಇಲ್ಲಿದೆ ಭರ್ಜರಿ ಸುದ್ದಿ, ಬಹುದಿನಗಳ ಬಳಿಕ ಭಾರಿ ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆಯೂ ಕುಸಿತ

ಚಿನ್ನದ ಬೆಲೆ ಏರಿಕೆಯಿಂದ ಕಂಗೆಟ್ಟಿದ ಆಭರಣ ಪ್ರಿಯರಿಗೆ ಇಲ್ಲೊಂದು ಭರ್ಜರಿ ಸುದ್ದಿ ಇದೆ. ಬುಧವಾರ (ಏಪ್ರಿಲ್‌ 24) ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ. ಇಂದು ಬೆಳ್ಳಿ ದರವೂ ಕುಸಿತವಾಗಿದ್ದು, ಬರದ ಸಮಯದಲ್ಲಿ ಮಳೆ ಬಂದಷ್ಟೇ ಖುಷಿ ಚಿನ್ನಾಭರಣ ಪ್ರಿಯರಿಗಾಗಿದೆ.

ಏಪ್ರಿಲ್‌ 24ರ ಚಿನ್ನ, ಬೆಳ್ಳಿ ದರ
ಏಪ್ರಿಲ್‌ 24ರ ಚಿನ್ನ, ಬೆಳ್ಳಿ ದರ

ಬೆಂಗಳೂರು: ದೇಶದ ಜನರು ಬಿಸಿಲಿನಿಂದ ಕಂಗೆಟ್ಟು ಹೋಗಿದ್ದಾರೆ. ಈ ನಡುವೆ ಚಿನ್ನದ ದರ ಏರಿಕೆಯು ಬೇಸಿಗೆಯ ತಾಪವನ್ನು ಇನ್ನಷ್ಟು ಹೆಚ್ಚುವಂತೆ ಮಾಡಿದ್ದು ಸುಳ್ಳಲ್ಲ. ನಿರಂತರ ಬೆಲೆ ಏರಿಕೆಯು ಆಭರಣ ಪ್ರಿಯರಲ್ಲಿ ದಿಗಿಲು ಮೂಡಿಸಿತ್ತು. ಆದರೆ ಇದೀಗ ಈ ಎಲ್ಲಾ ಆತಂಕವನ್ನು ಬದಿಗಿರಿಸಿ, ಚಿನ್ನದ ದರವು ಕುಸಿತ ಕಂಡಿದೆ. ಒಂದಿಷ್ಟು ದಿನಗಳ ನಂತರ ಹಳದಿ ಲೋಹದ ಬೆಲೆಯಲ್ಲಿ ಇಳಿಕೆಯಾಗಿರುವುದು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಈ ನಡುವೆ ಬೆಳ್ಳಿ ದರವೂ ಇಳಿಕೆಯಾಗಿದೆ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,615 ರೂ. ಇದೆ. ನಿನ್ನೆ 6,755 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 140 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 52,920 ರೂ. ನೀಡಬೇಕು. ನಿನ್ನೆ 54,040 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 1,120 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 66,150 ರೂ ಇದೆ. ನಿನ್ನೆ 67,550 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 1,400 ರೂ. ಕಡಿಮೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,61,500 ರೂ. ನೀಡಬೇಕು. ನಿನ್ನೆ 6,75,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 14,000 ರೂ. ಕಡಿಮೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,216 ರೂ. ಇದೆ. ನಿನ್ನೆ 7,369 ರೂ. ಇದು ಈ ದರಕ್ಕೆ ಹೋಲಿಸಿದರೆ 153 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,728 ರೂ. ನೀಡಬೇಕು. ನಿನ್ನೆ 58,952 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 1,224 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,160 ನೀಡಬೇಕು. ನಿನ್ನೆ 73,690 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 1,530 ರೂ ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,21,600 ರೂ. ಇದೆ. ನಿನ್ನೆ 7,36,900 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 15,300 ರೂ ಇಳಿಕೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,150 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 72,160 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,000 ರೂ. 24 ಕ್ಯಾರೆಟ್‌ಗೆ 73,100 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. 24 ಕ್ಯಾರೆಟ್‌ಗೆ 72,160 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,300 ರೂ. 24 ಕ್ಯಾರೆಟ್‌ಗೆ 72,310 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,150 ರೂ. 24 ಕ್ಯಾರೆಟ್‌ಗೆ 72,160 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. ಇದ್ದರೆ, 24 ಕ್ಯಾರೆಟ್‌ಗೆ 72,160 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. 24 ಕ್ಯಾರೆಟ್‌ಗೆ 72,160 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ಇಳಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 85.90 ರೂ. ಇದೆ. 8 ಗ್ರಾಂಗೆ 687.20 ರೂ ಇದ್ದರೆ, 10 ಗ್ರಾಂಗೆ 859 ರೂ. ಇದೆ. 100 ಗ್ರಾಂಗೆ 8,590 ರೂ. ಹಾಗೂ 1 ಕಿಲೋಗೆ 85,900 ರೂ. ಬೆಲೆ ನಿಗದಿ ಆಗಿದೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.