Gold Rate Today: ವಾರಾಂತ್ಯದಲ್ಲಿ ಏರಿಕೆಯಾಯ್ತು ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಗೋಲ್ಡ್ ರೇಟ್ ಎಷ್ಟಿದೆ ಗಮನಿಸಿ
ಆಭರಣ ಖರೀದಿ ಮಾಡೋಣ ಎಂದು ಹಣ ಕೂಡಿಸಿ ಇಟ್ಟು ಕಾಯುತ್ತಿದ್ದರೆ ನಿಮಗೆ ನಿರಾಸೆ ಕಾಡುವುದು ಖಚಿತ. ಚಿನ್ನದ ದರ ಏರಿಕೆಗೆ ಸಿಗುತ್ತಿಲ್ಲ ಬ್ರೇಕ್. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಬೆಳ್ಳಿ ದರದಲ್ಲೂ ಭಾರಿ ಹೆಚ್ಚಳವಾಗುತ್ತಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಶನಿವಾರ (ಏಪ್ರಿಲ್ 27) ಚಿನ್ನ, ಬೆಳ್ಳಿ ದರ ಎಷ್ಟಿದೆ ಗಮನಿಸಿ.
ಬೆಂಗಳೂರು: ಏಪ್ರಿಲ್ ತಿಂಗಳು ಮುಗಿಯುತ್ತಾ ಬಂದಿದೆ. ಬಹುತೇಕ ಮದುವೆಯಂತಹ ಶುಭಕಾರ್ಯಕ್ರಮಗಳು ಈಗಾಗಲೇ ನಡೆದು ಹೋಗಿವೆ. ಆದರೂ ಚಿನ್ನದ ಬೇಡಿಕೆ ತಗ್ಗುತ್ತಿಲ್ಲ, ಹಾಗೆಯೇ ಹಳದಿ ಲೋಹದ ಬೆಲೆ ಏರಿಕೆಯೂ ನಿಲ್ಲುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗುತ್ತಿದೆ. ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಖರೀದಿ ಮಾಡಬೇಕು ಎಂದು ನೀವು ಪ್ಲಾನ್ ಮಾಡಿದ್ದರೆ ಇಂದಿನ ದರ ಗಮನಿಸಿ.
22 ಕ್ಯಾರೆಟ್ ಚಿನ್ನದ ಬೆಲೆ
ಇಂದು 1 ಗ್ರಾಂ ಚಿನ್ನಕ್ಕೆ 6,665 ರೂ. ಇದೆ. ನಿನ್ನೆ 6,625 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 40 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,320 ರೂ. ನೀಡಬೇಕು. ನಿನ್ನೆ 53,000 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 320 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 66,650 ರೂ ಇದೆ. ನಿನ್ನೆ 66,250 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 400 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,66,500 ರೂ. ನೀಡಬೇಕು. ನಿನ್ನೆ 6,62,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 4,000 ರೂ. ಹೆಚ್ಚಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ
24 ಕ್ಯಾರೆಟ್ ಚಿನ್ನಕ್ಕೆ 1 ಗ್ರಾಂಗೆ 7,271 ರೂ. ಇದೆ. ನಿನ್ನೆ 7,227 ರೂ. ಇದು ಈ ದರಕ್ಕೆ ಹೋಲಿಸಿದರೆ 44 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 58,168 ರೂ. ನೀಡಬೇಕು. ನಿನ್ನೆ 57,816 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 352 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,710 ನೀಡಬೇಕು. ನಿನ್ನೆ 72,270 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 440 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,27,100 ರೂ. ಇದೆ. ನಿನ್ನೆ 7,22,700 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 4,400 ರೂ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,650 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 72,710 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.
ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)
ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 67,550 ರೂ. 24 ಕ್ಯಾರೆಟ್‌ಗೆ 73,690 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 66,650 ರೂ. 24 ಕ್ಯಾರೆಟ್‌ಗೆ 72,710 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 66,800 ರೂ. 24 ಕ್ಯಾರೆಟ್‌ಗೆ 72,860 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 66,650 ರೂ. 24 ಕ್ಯಾರೆಟ್‌ಗೆ 72,710 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 66,650 ರೂ. ಇದ್ದರೆ, 24 ಕ್ಯಾರೆಟ್‌ಗೆ 72,710 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 66,650 ರೂ. 24 ಕ್ಯಾರೆಟ್‌ಗೆ 72,710 ರೂ. ಆಗಿದೆ.
ಬೆಳ್ಳಿ ದರ
ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 83.60 ರೂ. ಇದೆ. 8 ಗ್ರಾಂಗೆ 668.80 ರೂ ಇದ್ದರೆ, 10 ಗ್ರಾಂಗೆ 836 ರೂ. ಇದೆ. 100 ಗ್ರಾಂಗೆ 8,360 ರೂ. ಹಾಗೂ 1 ಕಿಲೋಗೆ 83,600 ರೂ. ಬೆಲೆ ನಿಗದಿ ಆಗಿದೆ.