Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ಭಾನುವಾರ ಚಿನ್ನ ಖರೀದಿ ಮಾಡೋಣ ಎಂದು ನೀವು ಅಂದುಕೊಂಡಿದ್ದರೆ ಇಂದು (ಮೇ 5) ನಿಮಗೆ ನಿರಾಸೆ ಕಾಡಬಹುದು. ಯಾಕೆಂದರೆ ಚಿನ್ನದ ಜೊತೆಗೆ ಬೆಳ್ಳಿ ದರವೂ ಹೆಚ್ಚಾಗಿದೆ. ಭಾರತದ ವಿವಿಧ ಚಿನ್ನಗಳಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ.

ಮೇ 5ರ ಚಿನ್ನ, ಬೆಳ್ಳಿ ದರ
ಮೇ 5ರ ಚಿನ್ನ, ಬೆಳ್ಳಿ ದರ

ಬೆಂಗಳೂರು: ಚಿನ್ನದ ಬೆಲೆ ಏರಿಕೆ ಬಹುಶಃ ಭಾರತೀಯರನ್ನು ಕಂಗೆಡಿಸುತ್ತದೆ. ಮೇ ತಿಂಗಳಲ್ಲಿ ಹಳದಿ ಲೋಹದ ಬೆಲೆ ಕಡಿಮೆಯಾಗಬಹುದು ಎಂದು ನೀವು ಊಹಿಸಿದ್ದರೆ, ನಿಮ್ಮ ಊಹೆಯನ್ನೂ ಸುಳ್ಳು ಮಾಡಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ. ಇನ್ನು ಐದಾರು ಚಿನ್ನಗಳಲ್ಲಿ ಚಿನ್ನದ ದರ 10 ಗ್ರಾಂಗೆ 2 ಲಕ್ಷ ದಾಟಬಹುದು ಎಂದು ಅಂದಾಜಿಸಲಾಗುತ್ತಿದೆ. ಜಾಗತಿಕ ವಿದ್ಯಮಾನಗಳು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದ್ದು, ಇಂದು (ಮೇ 5) ಚಿನ್ನದೊಂದಿಗೆ ಬೆಳ್ಳಿ ಬೆಲೆಯೂ ಹೆಚ್ಚಾಗಿದೆ. ಹಾಗಾದರೆ ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,585 ರೂ. ಇದೆ. ನಿನ್ನೆ 6,575 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 10 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 52,680 ರೂ. ನೀಡಬೇಕು. ನಿನ್ನೆ 52,600 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 80 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 65,850 ರೂ ಇದೆ. ನಿನ್ನೆ 65,750 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 100 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,58,500 ರೂ. ನೀಡಬೇಕು. ನಿನ್ನೆ 6,57,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 1,000 ರೂ. ಏರಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,183 ರೂ. ಇದೆ. ನಿನ್ನೆ 7,173 ರೂ. ಇದು ಈ ದರಕ್ಕೆ ಹೋಲಿಸಿದರೆ 10 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,464 ರೂ. ನೀಡಬೇಕು. ನಿನ್ನೆ 57,384 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 80 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 71,830 ನೀಡಬೇಕು. ನಿನ್ನೆ 71,730 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 100 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,18,300 ರೂ. ಇದೆ. ನಿನ್ನೆ 7,17,300 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 1,000 ರೂ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 65,850 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 71,830 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,000 ರೂ. 24 ಕ್ಯಾರೆಟ್‌ಗೆ 72,000 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,850 ರೂ. 24 ಕ್ಯಾರೆಟ್‌ಗೆ 71,830 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,000 ರೂ. 24 ಕ್ಯಾರೆಟ್‌ಗೆ 71,980 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,850 ರೂ. 24 ಕ್ಯಾರೆಟ್‌ಗೆ 71,830 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,850 ರೂ. ಇದ್ದರೆ, 24 ಕ್ಯಾರೆಟ್‌ಗೆ 71,830 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,850 ರೂ. 24 ಕ್ಯಾರೆಟ್‌ಗೆ 71,830 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 82.60 ರೂ. ಇದೆ. 8 ಗ್ರಾಂಗೆ 660.80 ರೂ ಇದ್ದರೆ, 10 ಗ್ರಾಂಗೆ 826 ರೂ. ಇದೆ. 100 ಗ್ರಾಂಗೆ 8,260 ರೂ. ಹಾಗೂ 1 ಕಿಲೋಗೆ 82,600 ರೂ. ಬೆಲೆ ನಿಗದಿ ಆಗಿದೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.