ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ರಾಮ ನವಮಿಯ ದಿನವೂ ಆಭರಣ ಪ್ರಿಯರಿಗೆ ತಪ್ಪಿದ್ದಲ್ಲ ನಿರಾಸೆ, ಇಂದು ಚಿನ್ನದೊಂದಿಗೆ ಬೆಳ್ಳಿ ದರವೂ ಏರಿಕೆ

Gold Rate Today: ರಾಮ ನವಮಿಯ ದಿನವೂ ಆಭರಣ ಪ್ರಿಯರಿಗೆ ತಪ್ಪಿದ್ದಲ್ಲ ನಿರಾಸೆ, ಇಂದು ಚಿನ್ನದೊಂದಿಗೆ ಬೆಳ್ಳಿ ದರವೂ ಏರಿಕೆ

ದೇಶದಾದ್ಯಂತ ರಾಮ ನವಮಿ ಸಂಭ್ರಮ ಜೋರಾಗಿದೆ. ಈ ವರ್ಷ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಹಿನ್ನೆಲೆ ರಾಮ ನವಮಿ ಬಹಳ ವಿಶೇಷ. ಆದರೆ ಈ ಸಂಭ್ರಮದ ನಡುವೆಯೂ ಆಭರಣ ಪ್ರಿಯರಿಗೆ ನಿರಾಸೆ ತಪ್ಪಿದ್ದಲ್ಲ. ಇಂದು (ಏಪ್ರಿಲ್‌ 17) ಚಿನ್ನ ಹಾಗೂ ಬೆಳ್ಳಿ ಎರಡರ ದರವೂ ಏರಿಕೆಯಾಗಿದೆ.

ಏಪ್ರಿಲ್‌ 17ರ ಚಿನ್ನ, ಬೆಳ್ಳಿ ದರ
ಏಪ್ರಿಲ್‌ 17ರ ಚಿನ್ನ, ಬೆಳ್ಳಿ ದರ

ಬೆಂಗಳೂರು: ಸಾಮಾನ್ಯವಾಗಿ ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಭಾರತೀಯರು ಚಿನ್ನ, ಬೆಳ್ಳಿ ಖರೀದಿಗೆ ಒತ್ತು ನೀಡುತ್ತಾರೆ. ಹಬ್ಬದ ದಿನಗಳಲ್ಲಿ ಚಿನ್ನ ಖರೀದಿ ಮಾಡುವುದರಿಂದ ಶುಭವಾಗುತ್ತದೆ ಎಂಬ ನಂಬಿಕೆ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯರಿಗೆ ಹಬ್ಬದ ದಿನಗಳೂ ಕಹಿ ಎನ್ನಿಸುತ್ತಿವೆ. ಅದಕ್ಕೆ ಕಾರಣ ಏರುತ್ತಿರುವ ಬಂಗಾರದ ಬೆಲೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ಬೆಳ್ಳಿ ದರವೂ ಹೆಚ್ಚಳವಾಗುತ್ತಿದೆ. ಇಂದು ರಾಮ ನವಮಿ ಇದ್ದು, ಈ ದಿನವೂ ಆಭರಣದ ಬೆಲೆ ಏರಿಕೆಗೆ ಬ್ರೇಕ್‌ ಬಿದ್ದಿಲ್ಲ. ದೇಶದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,795 ರೂ. ಇದೆ. ನಿನ್ನೆ 6,705 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 90 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,360 ರೂ. ನೀಡಬೇಕು. ನಿನ್ನೆ 53,640 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 720 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 67,950 ರೂ ಇದೆ. ನಿನ್ನೆ 67,050 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 900 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,79,500 ರೂ. ನೀಡಬೇಕು. ನಿನ್ನೆ 6,70,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 9,000 ರೂ. ಹೆಚ್ಚಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,413 ರೂ. ಇದೆ. ನಿನ್ನೆ 7,315 ರೂ. ಇದು ಈ ದರಕ್ಕೆ ಹೋಲಿಸಿದರೆ 98 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 59,304 ರೂ. ನೀಡಬೇಕು. ನಿನ್ನೆ 58,520 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 784 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 74,130 ನೀಡಬೇಕು. ನಿನ್ನೆ 73,150 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 980 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,41,300 ರೂ. ಇದೆ. ನಿನ್ನೆ 7,31,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 9,800 ರೂ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 67,950 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 74,130 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,700 ರೂ. 24 ಕ್ಯಾರೆಟ್‌ಗೆ 74,950 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,950 ರೂ. 24 ಕ್ಯಾರೆಟ್‌ಗೆ 74,130 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,100 ರೂ. 24 ಕ್ಯಾರೆಟ್‌ಗೆ 74,280 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,950 ರೂ. 24 ಕ್ಯಾರೆಟ್‌ಗೆ 74,130 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,950 ರೂ. ಇದ್ದರೆ, 24 ಕ್ಯಾರೆಟ್‌ಗೆ 74,130 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,950 ರೂ. 24 ಕ್ಯಾರೆಟ್‌ಗೆ 74,130 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 85.50 ರೂ. ಇದೆ. 8 ಗ್ರಾಂಗೆ 684 ರೂ ಇದ್ದರೆ, 10 ಗ್ರಾಂಗೆ 855 ರೂ. ಇದೆ. 100 ಗ್ರಾಂಗೆ 8,550 ರೂ. ಹಾಗೂ 1 ಕಿಲೋಗೆ 85,500 ರೂ. ಬೆಲೆ ನಿಗದಿ ಆಗಿದೆ.

IPL_Entry_Point