Gold Rate Today: ಯುಗಾದಿ ಹಬ್ಬದ ಮರುದಿನವೂ ಏರಿಕೆಯತ್ತ ಚಿನ್ನ, ಬೆಳ್ಳಿ ದರ; ಕರ್ನಾಟಕದಲ್ಲಿಂದು ಆಭರಣ ದರ ಎಷ್ಟಿದೆ ಗಮನಿಸಿ
ಹಬ್ಬದ ದಿನಗಳಲ್ಲಿ ನಮ್ಮ ಭಾರತ ಅದರಲ್ಲೂ ಕರ್ನಾಟಕದ ಮಂದಿ ಚಿನ್ನ ಖರೀದಿ ಮಾಡಲು ಹಾತೊರೆಯುತ್ತಾರೆ. ಆದರೆ ಯುಗಾದಿ ಹಬ್ಬದ ಸಮಯದಲ್ಲಿ ಚಿನ್ನದ ದರ ಬಹುತೇಕ ಏರಿಕೆಯಿತ್ತು. ಇದೀಗ ಹಬ್ಬ ಮುಗಿದ ಮೇಲೂ ದರ ಕಡಿಮೆಯಾಗಿಲ್ಲ. ಇಂದು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚಿನ್ನ ಬೆಳ್ಳಿ ದರ ಎಷ್ಟಿದೆ ಗಮನಿಸಿ.
ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ಮದುವೆ, ಗೃಹಪ್ರವೇಶದಂತಹ ಕಾರ್ಯಕ್ರಮಗಳು ಹೆಚ್ಚಿರುತ್ತದೆ. ಈ ಸಂದರ್ಭದಲ್ಲಿ ಚಿನ್ನ ಹಾಗೂ ಬೆಳ್ಳಿಗೆ ಬೇಡಿಕೆಯೂ ಹೆಚ್ಚು. ಆದರೆ ಈ ವರ್ಷ ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಜೊತೆಗೆ ಕಳೆದ ಒಂದಿಷ್ಟು ದಿನಗಳಿಂದ ಬೆಳ್ಳಿ ದರದಲ್ಲೂ ಹೆಚ್ಚಳವಾಗುತ್ತಿದೆ. ಯುಗಾದಿ ಹಬ್ಬದ ಸಂದರ್ಭದಲ್ಲೂ ಚಿನ್ನ, ಬೆಳ್ಳಿ ದರ ಏರಿಕೆಯಾಗಿದ್ದು, ಯುಗಾದಿ ಮುಗಿದ ಮೇಲೂ ದರ ಏರಿಕೆ ಮುಂದುವರಿದಿದೆ. ದೇಶದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ.
22 ಕ್ಯಾರೆಟ್ ಚಿನ್ನದ ಬೆಲೆ
ಇಂದು 1 ಗ್ರಾಂ ಚಿನ್ನಕ್ಕೆ 6,575 ರೂ. ಇದೆ. ನಿನ್ನೆ 6,565 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 10 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 52,600 ರೂ. ನೀಡಬೇಕು. ನಿನ್ನೆ 52,520 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 80 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 65,750 ರೂ ಇದೆ. ನಿನ್ನೆ 65,650 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 100 ರೂ. ಹೆಚ್ಚಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,57,500 ರೂ. ನೀಡಬೇಕು. ನಿನ್ನೆ 6,56,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 1,000 ರೂ. ಏರಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ
24 ಕ್ಯಾರೆಟ್ ಚಿನ್ನಕ್ಕೆ 1 ಗ್ರಾಂಗೆ 7,173 ರೂ. ಇದೆ. ನಿನ್ನೆ 7,162 ರೂ. ಇದು ಈ ದರಕ್ಕೆ ಹೋಲಿಸಿದರೆ 11 ರೂ ಹೆಚ್ಚಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,384 ರೂ. ನೀಡಬೇಕು. ನಿನ್ನೆ 57,296 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 88 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 71,730 ನೀಡಬೇಕು. ನಿನ್ನೆ 71,620 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 110 ರೂ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,17,300 ರೂ. ಇದೆ. ನಿನ್ನೆ 7,16,200 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 1,100 ರೂ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 65,750 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 71,730 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.
ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)
ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 66,700 ರೂ. 24 ಕ್ಯಾರೆಟ್‌ಗೆ 72,760 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 65,750 ರೂ. 24 ಕ್ಯಾರೆಟ್‌ಗೆ 71,730 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 65,900 ರೂ. 24 ಕ್ಯಾರೆಟ್‌ಗೆ 71,880 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 65,750 ರೂ. 24 ಕ್ಯಾರೆಟ್‌ಗೆ 71,730 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 65,750 ರೂ. ಇದ್ದರೆ, 24 ಕ್ಯಾರೆಟ್‌ಗೆ 71,730 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 65,750 ರೂ. 24 ಕ್ಯಾರೆಟ್‌ಗೆ 71,730 ರೂ. ಆಗಿದೆ.
ಬೆಳ್ಳಿ ದರ
ಇಂದು ಬೆಳ್ಳಿ ದರ ಕೂಡ ಹೆಚ್ಚಾಗಿದೆ. ಒಂದು ಗ್ರಾಂ ಬೆಳ್ಳಿಗೆ 83.75 ರೂ. ಇದೆ. 8 ಗ್ರಾಂಗೆ 670 ರೂ ಇದ್ದರೆ, 10 ಗ್ರಾಂಗೆ 837.50 ರೂ. ಇದೆ. 100 ಗ್ರಾಂಗೆ 8,375 ರೂ. ಹಾಗೂ 1 ಕಿಲೋಗೆ 83,750 ರೂ. ಬೆಲೆ ನಿಗದಿ ಆಗಿದೆ.