Gold Rate: ಸೋಮವಾರ ಸ್ಥಿರವಾಗಿದೆ ಹಳದಿ ಲೋಹದ ಬೆಲೆ, ಬೆಳ್ಳಿ ದರವೂ ತಟಸ್ಥ; ಇಂದಿನ ಆಭರಣ ಬೆಲೆ ಗಮನಿಸಿ
ಮಾರ್ಚ್ ತಿಂಗಳ ಕೊನೆಯ ವಾರದ ಮೊದಲ ದಿನ (ಮಾರ್ಚ್ 25) ಚಿನ್ನ ಹಾಗೂ ಬೆಳ್ಳಿ ದರ ತಟಸ್ಥವಾಗಿದೆ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ ನಿನ್ನೆಯ ದರವೇ ಇಂದು ಕೂಡ ಮುಂದುವರಿದಿದೆ.
ಬೆಂಗಳೂರು: ಕಳೆದ ಎರಡು ದಿನಗಳಿಂದ ಆಭರಣ ಪ್ರಿಯರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಮಾರ್ಚ್ ತಿಂಗಳ ಆರಂಭದಿಂದಲೂ ಬಹುತೇಕ ದಿನ ಏರಿಕೆ ಕಂಡಿದ್ದ ಚಿನ್ನದ ದರ ಕಳೆದ ಎರಡು ದಿನಗಳಿಂದ ತುಸು ಇಳಿಕೆ ಹಾಗೂ ತಟಸ್ಥವಾಗಿದೆ. ಇಂದು (ಮಾರ್ಚ್ 25) ಚಿನ್ನ ಹಾಗೂ ಬೆಳ್ಳಿ ಎರಡರ ದರವೂ ಸ್ಥಿರವಾಗಿದೆ. ದೇಶದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ.
22 ಕ್ಯಾರೆಟ್ ಚಿನ್ನದ ಬೆಲೆ
ಇಂದು 1 ಗ್ರಾಂ ಚಿನ್ನಕ್ಕೆ 6,125 ರೂ. ಇದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 49,000 ರೂ. ನೀಡಬೇಕು. 10 ಗ್ರಾಂ ಚಿನ್ನಕ್ಕೆ 61,250 ರೂ ಇದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,12,500 ರೂ. ನೀಡಬೇಕು.
24 ಕ್ಯಾರೆಟ್ ಚಿನ್ನದ ಬೆಲೆ
24 ಕ್ಯಾರೆಟ್ ಚಿನ್ನಕ್ಕೆ 1 ಗ್ರಾಂಗೆ 6,682 ರೂ. ಇದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,456 ರೂ. ಇದೆ. ಇಂದು 10 ಗ್ರಾಂ ಚಿನ್ನಕ್ಕೆ 66,820 ನೀಡಬೇಕು. 100 ಗ್ರಾಂ ಚಿನ್ನದ ಬೆಲೆ 6,68,200 ರೂ. ಇದೆ.
ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 61,250 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 66,820 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.
ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)
ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 61,850 ರೂ. 24 ಕ್ಯಾರೆಟ್‌ಗೆ 67,470 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 61,250 ರೂ. 24 ಕ್ಯಾರೆಟ್‌ಗೆ 66,820 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 61,400 ರೂ. 24 ಕ್ಯಾರೆಟ್‌ಗೆ 66,970 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 61,250 ರೂ. 24 ಕ್ಯಾರೆಟ್‌ಗೆ 66,820 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 61,250 ರೂ. ಇದ್ದರೆ, 24 ಕ್ಯಾರೆಟ್‌ಗೆ 66,820 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 61,250 ರೂ. 24 ಕ್ಯಾರೆಟ್‌ಗೆ 66,820 ರೂ. ಆಗಿದೆ.
ಬೆಳ್ಳಿ ದರ
ಇಂದು ಬೆಳ್ಳಿ ದರವೂ ಸ್ಥಿರವಾಗಿದೆ. ಒಂದು ಗ್ರಾಂ ಬೆಳ್ಳಿಗೆ 76 ರೂ. ಇದೆ. 8 ಗ್ರಾಂಗೆ 608 ರೂ ಇದ್ದರೆ, 10 ಗ್ರಾಂಗೆ 760 ರೂ. ಇದೆ. 100 ಗ್ರಾಂಗೆ 7,600 ರೂ. ಹಾಗೂ 1 ಕಿಲೋಗೆ 76,000 ರೂ. ಬೆಲೆ ನಿಗದಿ ಆಗಿದೆ.
