ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಆಭರಣ ಪ್ರಿಯರಿಗೆ ಭಾರಿ ನಿರಾಸೆ, ಕಡಿಮೆಯಾದ ಬೆನ್ನಲ್ಲೇ ಮತ್ತೆ ಏರಿಕೆಯಾಯ್ತು ಹಳದಿ ಲೋಹದ ಬೆಲೆ

Gold Rate Today: ಆಭರಣ ಪ್ರಿಯರಿಗೆ ಭಾರಿ ನಿರಾಸೆ, ಕಡಿಮೆಯಾದ ಬೆನ್ನಲ್ಲೇ ಮತ್ತೆ ಏರಿಕೆಯಾಯ್ತು ಹಳದಿ ಲೋಹದ ಬೆಲೆ

ಚಿನ್ನದ ಬೆಲೆ ಇನ್ನಷ್ಟು ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇರಿಸಿಕೊಂಡು ಕಾಯುತ್ತಿದ್ದವರಿಗೆ ನಿರಾಸೆ ಕಾಡುವುದು ಖಚಿತ. ಇಂದು (ಮಾರ್ಚ್‌ 28) ಚಿನ್ನದ ದರ ಮತ್ತಷ್ಟು ಏರಿಕೆಯಾಗಿದೆ. ಬೆಳ್ಳಿ ದರ ತುಸು ಇಳಿಕೆಯಾದರೂ ಹೇಳಿಕೊಳ್ಳುವಷ್ಟು ಕಡಿಮೆಯಾಗಿಲ್ಲ. ದೇಶದಾದ್ಯಂತ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಾಗಿದೆ ಗಮನಿಸಿ.

Gold Price Today December 19: ಚಿನ್ನದ ದರ ತಟಸ್ಥ, ಕರ್ನಾಟಕದ ಚಿನ್ನದಂಗಡಿಗಳಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರವೆಷ್ಟು?
Gold Price Today December 19: ಚಿನ್ನದ ದರ ತಟಸ್ಥ, ಕರ್ನಾಟಕದ ಚಿನ್ನದಂಗಡಿಗಳಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರವೆಷ್ಟು?

ಬೆಂಗಳೂರು: ಆಭರಣ ದರ ಯಾವಾಗ ಏರಿಕೆಯಾಗುತ್ತದೆ, ಯಾವಾಗ ಇಳಿಕೆಯಾಗುತ್ತದೆ ಎಂಬುದನ್ನು ಊಹಿಸುವುದೂ ಕಷ್ಟ. ಮಾರ್ಚ್‌ ತಿಂಗಳಲ್ಲಿ ಬಹುತೇಕ ಏರುಗತಿಯತ್ತಲೇ ಸಾಗಿತ್ತು ಹಳದಿ ಲೋಹದ ಬೆಲೆ. ಸಾಮಾನ್ಯವಾಗಿ ಬಹುತೇಕ ದಿನ ಸ್ಥಿರವಾಗಿ ಇರುತ್ತಿದ್ದ ಬೆಳ್ಳಿ ಬೆಲೆ ಕೂಡ ಆರ್ಥಿಕ ವರ್ಷದ ಕೊನೆಯ ತಿಂಗಳು ಹೆಚ್ಚಾಗಿತ್ತು. ಕೊಂಚ ಕಡಿಮೆಯಾಗುವ ಮೂಲಕ ಚಿನ್ನ ಪ್ರಿಯರಲ್ಲಿ ಖುಷಿ ಮೂಡಿಸಿದ್ದ ಬೆಲೆ, ಇದೀಗ ಮತ್ತೆ ಏರಿಕೆಯಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಎಂಬುದನ್ನು ಗಮನಿಸಿ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,135 ರೂ. ಆಗಿದೆ. ನಿನ್ನೆ 6,115 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 20 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 49,080 ರೂ. ನೀಡಬೇಕು. ನಿನ್ನೆ 48,920 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 160 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 61,350 ರೂ ಆಗಿದೆ. ನಿನ್ನೆ 61,150 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 200 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,13,500 ರೂ. ನೀಡಬೇಕು. ನಿನ್ನೆ 6,11,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 2,000 ರೂ. ಹೆಚ್ಚಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 6,693 ರೂ. ಆಗಿದೆ. ನಿನ್ನೆ 6,671 ರೂ. ಇದು ಈ ದರಕ್ಕೆ ಹೋಲಿಸಿದರೆ 22 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,544 ರೂ. ನೀಡಬೇಕು. ನಿನ್ನೆ 53,368 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 176 ರೂ. ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 66,930 ನೀಡಬೇಕು. ನಿನ್ನೆ 66,710 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 220 ರೂ ಹೆಚ್ಚಾಗಿದೆ. 100 ಗ್ರಾಂ ಚಿನ್ನದ ಬೆಲೆ 6,69,300 ರೂ. ಇದೆ. ನಿನ್ನೆ 6,67,100 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 2,200 ರೂ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 61,350 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 66,930 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 62,150 ರೂ. 24 ಕ್ಯಾರೆಟ್‌ಗೆ 67,800 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 61,350 ರೂ. 24 ಕ್ಯಾರೆಟ್‌ಗೆ 66,930 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 61,500 ರೂ. 24 ಕ್ಯಾರೆಟ್‌ಗೆ 67,080 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 61,350 ರೂ. 24 ಕ್ಯಾರೆಟ್‌ಗೆ 66,930 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 61,350 ರೂ. ಇದ್ದರೆ, 24 ಕ್ಯಾರೆಟ್‌ಗೆ 66,930 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 61,350 ರೂ. 24 ಕ್ಯಾರೆಟ್‌ಗೆ 66,930 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ತುಸು ಏರಿಕೆ ಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 76 ರೂ. ಇದೆ. 8 ಗ್ರಾಂಗೆ 608 ರೂ ಇದ್ದರೆ, 10 ಗ್ರಾಂಗೆ 760 ರೂ. ಇದೆ. 100 ಗ್ರಾಂಗೆ 7,600 ರೂ. ಹಾಗೂ 1 ಕಿಲೋಗೆ 76,000 ರೂ. ಬೆಲೆ ನಿಗದಿ ಆಗಿದೆ.

IPL_Entry_Point