CBI summons Arvind Kejriwal: ದೆಹಲಿ ಅಬಕಾರಿ ಪ್ರಕರಣ, ಅರವಿಂದ್‌ ಕೇಜ್ರಿವಾಲ್‌ಗೆ ಸಮನ್ಸ್‌ ಜಾರಿ ಮಾಡಿದ ಸಿಬಿಐ, ಏ. 16ರಂದು ವಿಚಾರಣೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Cbi Summons Arvind Kejriwal: ದೆಹಲಿ ಅಬಕಾರಿ ಪ್ರಕರಣ, ಅರವಿಂದ್‌ ಕೇಜ್ರಿವಾಲ್‌ಗೆ ಸಮನ್ಸ್‌ ಜಾರಿ ಮಾಡಿದ ಸಿಬಿಐ, ಏ. 16ರಂದು ವಿಚಾರಣೆ

CBI summons Arvind Kejriwal: ದೆಹಲಿ ಅಬಕಾರಿ ಪ್ರಕರಣ, ಅರವಿಂದ್‌ ಕೇಜ್ರಿವಾಲ್‌ಗೆ ಸಮನ್ಸ್‌ ಜಾರಿ ಮಾಡಿದ ಸಿಬಿಐ, ಏ. 16ರಂದು ವಿಚಾರಣೆ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ (Delhi excise case) ವಿಚಾರಣೆಗೆ ಹಾಜರಾಗುವಂತೆ ದೆಹಲಿಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಸಿಬಿಐ ಸಮನ್ಸ್‌ (CBI summons ) ಜಾರಿ ಮಾಡಿದೆ. ಏಪ್ರಿಲ್‌ 16, ಭಾನುವಾರ ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

CBI summons Arvind Kejriwal: ದೆಹಲಿ ಅಬಕಾರಿ ಪ್ರಕರಣ, ಅರವಿಂದ್‌ ಕೇಜ್ರಿವಾಲ್‌ಗೆ ಸಮನ್ಸ್‌
CBI summons Arvind Kejriwal: ದೆಹಲಿ ಅಬಕಾರಿ ಪ್ರಕರಣ, ಅರವಿಂದ್‌ ಕೇಜ್ರಿವಾಲ್‌ಗೆ ಸಮನ್ಸ್‌ (PTI)

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ (Delhi excise case) ವಿಚಾರಣೆಗೆ ಹಾಜರಾಗುವಂತೆ ದೆಹಲಿಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಸಿಬಿಐ ಸಮನ್ಸ್‌ (CBI summons ) ಜಾರಿ ಮಾಡಿದೆ. ಏಪ್ರಿಲ್‌ 16, ಭಾನುವಾರ ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

ಆಮ್‌ ಆದ್ಮಿಯ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದಾರೆ. ಈಗಾಗಲೇ ಆಪ್‌ನ ಹಲವು ಮಂದಿಯನ್ನು ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಿರುವ ಹಿನ್ನಲೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ಗೂ ಸಮನ್ಸ್‌ ಜಾರಿ ಮಾಡಲಾಗಿದೆ.

ಈ ಪ್ರಕರಣ ಮಾತ್ರವಲ್ಲದೆ ಈಗಾಗಲೇ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಗೋವಾ ಪೊಲೀಸರು ಕೂಡ ಸಮನ್ಸ್‌ ಜಾರಿ ಮಾಡಿದ್ದಾರೆ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇವರ ವಿರುದ್ಧ ಸಮನ್ಸ್‌ ಜಾರಿ ಮಾಡಲಾಗಿದೆ. ಇದಕ್ಕಾಗಿ ಇವರು ಏಪ್ರಿಲ್‌ 27ರಂದು ವಿಚಾರಣೆಗೆ ಹಾಜರಾಗಬೇಕಿರುತ್ತದೆ.

ಸಿಬಿಐಯು ರಾಜ್ಯದ ಮುಖ್ಯಸ್ಥರಿಗೆ ಸಮನ್ಸ್‌ ಜಾರಿ ಮಾಡುವುದು ಇದೇ ಮೊದಲು. ಅರವಿಂದ್‌ ಕೇಜ್ರಿವಾಲ್‌ ಅವರು ಅಬಕಾರಿ ನೀತಿ ಹಗರಣದ ಮಾಸ್ಟರ್‌ ಮೈಂಡ್‌ ಎಂದು ಬಿಜೆಪಿ ಹೇಳಿಕೊಳ್ಳುತ್ತ ಬಂದಿದೆ.

"ದೇಶದ ಪ್ರಗತಿಯನ್ನು ಬಯಸದ ಹಲವಾರು ದೇಶ ವಿರೋಧಿ ಶಕ್ತಿಗಳು ದೇಶದಲ್ಲಿವೆ. ಈ ಎಲ್ಲಾ ಜನರು ಮನೀಶ್ ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಿದವರು ದೇಶದ ಶತ್ರುಗಳು" ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದರು.
ಫೆಬ್ರವರಿ 26 ರಂದು ಎಂಟು ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತು. ಫೆಬ್ರವರಿ 27 ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಮತ್ತು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಲಾಯಿತು.

ಮಾರ್ಚ್ 4 ರಂದು ನ್ಯಾಯಾಲಯವು ಸಿಸೋಡಿಯಾ ಅವರ ಸಿಬಿಐ ಕಸ್ಟಡಿಯನ್ನು ಎರಡು ದಿನಗಳವರೆಗೆ ವಿಸ್ತರಿಸಿತು. ನಂತರ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಸಿಬಿಐ ತನಿಖೆಯಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರು ಪ್ರಸ್ತುತ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ.

ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನ ಅಕ್ರಮಗಳಿಗೆ ಸಂಬಂಧಪಟ್ಟ ಹಣ ವರ್ಗಾವಣೆಗೆ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಅವರಿಗೆ ಇದೇ ಏಪ್ರಿಲ್‌ 5ರವರೆಗೆ ರೇಸ್‌ ಅವೆನ್ಯೂ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಸ್ತರಿಸಿತ್ತು. ಮತ್ತೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಸ್ತರಣೆಯಾಗಿತ್ತು.

ಉಪಮುಖ್ಯಮಂತ್ರಿಯಾಗಿದ್ದ ಸಿಸೋಡಿಯಾ ಅವರು ದೆಹಲಿ ಸರ್ಕಾರದ ಆರೋಗ್ಯ, ಹಣಕಾಸು, ಶಿಕ್ಷಣ ಮತ್ತು ಗೃಹ ಸೇರಿದಂತೆ 33 ಇಲಾಖೆಗಳ ಪೈಕಿ 18 ಖಾತೆಗಳನ್ನು ನಿರ್ವಹಿಸುತ್ತಿದ್ದರು. ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾದ ನಂತರ ಸಿಸೋಡಿಯಾ ಅವರು ತಮ್ಮ ಎಲ್ಲಾ 18 ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಸಿಸೋಡಿಯಾ ಅವರು ವಿಜಿಲೆನ್ಸ್ ಇಲಾಖೆಯ ಉಸ್ತುವಾರಿ ಸಚಿವ ಕೂಡ ಆಗಿದ್ದರು.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.