Annamalai: ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ; ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಭವಿಷ್ಯ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Annamalai: ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ; ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಭವಿಷ್ಯ

Annamalai: ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ; ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಭವಿಷ್ಯ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕಮಾರ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಜಗಳವಾಡದೇ ಇದ್ದರೆ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು ಎಂದು ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಸ್ ಹಾಗೂ ಎನ್‌ಆರ್ ರಮೇಶ್ ಇದ್ದಾರೆ (PTI)
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಸ್ ಹಾಗೂ ಎನ್‌ಆರ್ ರಮೇಶ್ ಇದ್ದಾರೆ (PTI)

ಬೆಂಗಳೂರು: ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ಸರ್ಕಾರ (Karnataka Govt) ಪತನವಾಗಲಿದೆ ಎಂದು ನೆರೆಯ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ(Annamalai) ಭವಿಷ್ಯ ನುಡಿದಿದ್ದಾರೆ.

ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ತಮ್ಮ ಸರ್ಕಾರದ ಅವಧಿಯಲ್ಲಿ ಜಗಳವಾಡದೇ ಇದ್ದರೆ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗುವುದು ಎಂದು ವ್ಯಂಗ್ಯವಾಡಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವು (Karnataka Congress) ಎರಡು ಗುಂಪುಗಳಾಗಿ ವಿಭಜನೆಯಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ತಮ್ಮದೇ ಆದ ಗುಂಪುಗಳನ್ನು ಕಟ್ಟಿಕೊಂಡು ಅವರ ಬೆಂಬಲವನ್ನು ಹೊಂದಿದ್ದಾರೆ. ಈ ನಡೆ ಆಡಳಿತವನ್ನು ನಿರ್ಲಕ್ಷಿಸಲು ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಮುಂದಿನ ವರ್ಷದ ವೇಳೆ ಕರ್ನಾಟಕದ ಹೊಸ ಸರ್ಕಾರ ಇಸ್ಪೀಟ್‌ ಕಾರ್ಡ್‌ಗಳ ರೀತಿಯಲ್ಲಿ ಪತನವಾಗುವುದು ಖಚಿತ ಅಂತ ಅಣ್ಣಾಮಲೈ ಭವಿಷ್ಯ ನುಡಿದಿದ್ದಾರೆ.

ಇವರ ಸಚಿವ ಸಂಪುಟದಲ್ಲಿರುವ ಯಾವುದೇ ಸಚಿವರಿಗೆ ಯಾವುದಕ್ಕೂ ಹೊಣೆಗಾರಿಕೆ ಇರೋದಿಲ್ಲ. ಈ ರೀತಿಯ ಪರಿಸ್ಥಿತಿ ಆಡಳಿತದಲ್ಲಿ ಅವ್ಯವಸ್ಥೆಗೆ ಕಾರಣವಾಗುತ್ತದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವಿನ ಅಜೈವಿಕ ಬಾಂಧವ್ಯವನ್ನು ಬಿಂಬಿಸಲು ಕಾಂಗ್ರೆಸ್‌ ಪಕ್ಷ ಪ್ರಯತ್ನಿಸುತ್ತಿದೆ ಎಂದು ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆಶಿ ಶಿವಕುಮಾರ್ ಜಗಳವಾಡದಿದ್ದರೆ ಜೊತೆಗೆ ಅವಧಿಯನ್ನು ಮುಗಿಸಿದರೆ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು. ಬಿಜೆಪಿ ವಿರೋಧಿ ಪಕ್ಷ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಂದಿರೋದನ್ನು ನೋಡಿದ್ದೇವೆ. ಇವರ ಒಗ್ಗಟ್ಟು ಬೆಂಗಳೂರಿನಲ್ಲಿ ಔತಣಕೂಟಕ್ಕೆ ಮಾತ್ರ ಸೀಮಿತವಾಗಿದೆ ಎಂದು ಬಿಜೆಪಿ ನಾಯಕ ಟೀಕಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕರ್ನಾಟಕದ ಈ ನಾಯಕರು ಅಧಿಕಾರಕ್ಕಾಗಿ ಕ್ಷುಲ್ಲಕ ರಾಜಕಾರಣ ಮಾಡ್ತಾರೆ. ಹೀಗೆ ನಡೆಯುವುುದನ್ನು ನಾವು ಈಗಾಗಲೇ ಹಲವು ಸಲ ನೋಡಿದ್ದೇವೆ ಅಂತಲೂ ಹೇಳಿದ್ದಾರೆ.

ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ನಿನ್ನೆ (ಮೇ 20, ಶನಿವಾರ) ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸಿಎಂ ಹಾಗೂ ಡಿಸಿಎಂ ಜೊತೆಗೆ ಡಾ ಜಿ ಪರಮೇಶ್ವರ್‌, ಕೆಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಎಂಬಿ ಪಾಟೀಲ್, ಕೆಎಚ್‌ ಮುನಿಯಪ್ಪ ಹಾಗೂ ಪ್ರಿಯಾಂಕ್‌ ಖರ್ಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಸರ್ಕಾರವನ್ನು ಆಡಳಿತದಿಂದ ಕೆಳಗಿಳಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಕೇಸರಿ ಪಕ್ಷ 66 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಇನ್ನ ರಾಜ್ಯದ ಹಳೆಯ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ 19 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.