ಕನ್ನಡ ಸುದ್ದಿ  /  Nation And-world  /  Details On Indian Coast Guard Recruitment 2022

Indian Coast Guard Recruitment 2022: ಕರಾವಳಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ, ಹೀಗೆ ಅರ್ಜಿ ಸಲ್ಲಿಸಿ

ಆಸಕ್ತ ಅಭ್ಯರ್ಥಿಗಳು joinindiancoastguard.gov.in ವೆಬ್‌ಸೈಟ್ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭಾರತೀಯ ಕರಾವಳಿ ಭದ್ರತಾ ಪಡೆ(Indian Coast Guard)ಯಲ್ಲಿ ಒಟ್ಟು 71 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್ ಕಮಾಂಡೆಂಟ್ ಜನರಲ್ ಡ್ಯೂಟಿ, ಸಿಪಿಎಲ್, ಟೆಕ್ನಿಕಲ್ (ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಮತ್ತು ಕಾನೂನು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 07 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiancoastguard.cdac.in ಮೂಲಕ ಅರ್ಜಿ ಸಲ್ಲಿಸಬಹುದು.

ಭಾರತೀಯ ಕೋಸ್ಟ್ ಗಾರ್ಡ್ ಸಹಾಯಕ ಕಮಾಂಡೆಂಟ್(Assistant Commandant) ಹುದ್ದೆಯ ವಿವರಗಳು

ಜನರಲ್‌ ಡ್ಯೂಟಿ (GD) ಮತ್ತು ವಾಣಿಜ್ಯ ಪೈಲಟ್ ಪರವಾನಗಿ (SSA) -50 ಹುದ್ದೆಗಳು

ವೇತನ ಶ್ರೇಣಿ: 56100/-

ಟೆಕ್ನಿಕಲ್‌ (ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) -20 ಹುದ್ದೆಗಳು

ಕಾನೂನು: 01 ಹುದ್ದೆ

ಅರ್ಹತಾ ಮಾನದಂಡ

ಜನರಲ್‌ ಡ್ಯೂಟಿ

ಅಭ್ಯರ್ಥಿಯು ಕನಿಷ್ಟ 60% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಗಣಿತ ಮತ್ತು ಭೌತಶಾಸ್ತ್ರದಲ್ಲಿ ಒಟ್ಟು 60% ಅಂಕ ಗಳಿಸಿರಬೇಕು.

CPL-SSA

ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಂದ (DGCA) ವಿತರಿಸಲಾದ ಅಥವಾ ಮೌಲ್ಯೀಕರಿಸಲಾದ ವಾಣಿಜ್ಯ ಪೈಲಟ್ ಪರವಾನಗಿ (CPL) ಹೊಂದಿರುವ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಅಲ್ಲಿಸಲು ಅರ್ಹರು. ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ XIIನೇ ತರಗತಿಯನ್ನು ಒಟ್ಟು 60% ಅಂಕಗಳೊಂದಿಗೆ ಪಾಸ್ ಆಗಿರಬೇಕು. ಇಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನೇ ಓದಿರಬೇಕು.

ತಾಂತ್ರಿಕ ಹುದ್ದೆ (ಮೆಕ್ಯಾನಿಕಲ್)

ಅಭ್ಯರ್ಥಿಯು ಕನಿಷ್ಠ 60% ಒಟ್ಟು ಅಂಕಗಳೊಂದಿಗೆ ನೇವಲ್ ಆರ್ಕಿಟೆಕ್ಚರ್ ಅಥವಾ ಮೆಕ್ಯಾನಿಕಲ್ ಅಥವಾ ಮೆರೈನ್ ಅಥವಾ ಆಟೋಮೋಟಿವ್ ಅಥವಾ ಮೆಕಾಟ್ರಾನಿಕ್ಸ್ ಅಥವಾ ಇಂಡಸ್ಟ್ರಿಯಲ್ ಮತ್ತು ಪ್ರೊಡಕ್ಷನ್ ಅಥವಾ ಮೆಟಲರ್ಜಿ ಅಥವಾ ಡಿಸೈನ್ ಅಥವಾ ಏರೋನಾಟಿಕಲ್ ಅಥವಾ ಏರೋಸ್ಪೇಸ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.

ತಾಂತ್ರಿಕ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್)

ಅಭ್ಯರ್ಥಿಯು ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ ಟೆಲಿಕಮ್ಯುನಿಕೇಶನ್ ಅಥವಾ ಇನ್‌ಸ್ಟ್ರುಮೆಂಟೇಶನ್ ಅಥವಾ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಅಥವಾ ಪವರ್ ಎಂಜಿನಿಯರಿಂಗ್ ಅಥವಾ ಪವರ್ ಎಲೆಕ್ಟ್ರಾನಿಕ್ಸ್‌ನಲ್ಲಿ ಕನಿಷ್ಠ 60% ಒಟ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.

ಲಾ ಎಂಟ್ರಿ

ಕನಿಷ್ಠ 60% ಒಟ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕದ ವಿವರ

ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್/ಡೆಬಿಟ್ ಕಾರ್ಡ್/ಯುಪಿಐ ಮೂಲಕ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ ವರ್ಗ ಅಥವಾ ಒಬಿಸಿಗಳಿಗೆ 250/- ರೂಪಾಯಿ ಶುಲ್ಕವಿದ್ದು, ಎಸ್‌ ಮತ್ತು ಎಸ್‌ಟಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು joinindiancoastguard.gov.in ವೆಬ್‌ಸೈಟ್ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ: ಆಗಸ್ಟ್ 17

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 07

ವಿಭಾಗ