Donald Trump Oath Ceremony: ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೋನಾಲ್ಡ್‌ ಟ್ರಂಪ್
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Donald Trump Oath Ceremony: ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೋನಾಲ್ಡ್‌ ಟ್ರಂಪ್

Donald Trump Oath Ceremony: ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೋನಾಲ್ಡ್‌ ಟ್ರಂಪ್

ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅವರು ಎರಡನೇ ಬಾರಿ ಅಮೇರಿಕಾದ ಅಧಕ್ಷ ಸ್ಥಾನವನ್ನು ಸ್ವೀಕರಿಸಿದ್ದಾರೆ.

47ನೇ ಅಧ್ಯಕ್ಷನಾಗಿ ಪ್ರಮಾಣ ವಚನ ಸ್ವೀಕರಿಸಿದ ಡೋನಾಲ್ಡ್‌ ಟ್ರಂಪ್
47ನೇ ಅಧ್ಯಕ್ಷನಾಗಿ ಪ್ರಮಾಣ ವಚನ ಸ್ವೀಕರಿಸಿದ ಡೋನಾಲ್ಡ್‌ ಟ್ರಂಪ್

ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರು ಡೆಮಾಕ್ರಟಿಕ್ ಪಕ್ಷದ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿ ಗೆದ್ದಿದ್ದ ಡೊನಾಲ್ಡ್‌ ಟ್ರಂಪ್ ಇದೀಗ ಅಮೇರಿಕಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ್ದಾರೆ.

ಎರಡನೇ ಬಾರಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ

ಯುಎಸ್ ಮಾಜಿ ಅಧ್ಯಕ್ಷ ಜೋ ಬಿಡನ್ ಅವರ ಉತ್ತರಾಧಿಕಾರಿ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಮಾಣ ವಚನ ಸಮಾರಂಭಕ್ಕೂ ಮೊದಲು ಶ್ವೇತಭವನದಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಿದ್ದರು. ಆ ನಂತರದಲ್ಲಿ ಅವರು ಅಲ್ಲಿಂದ ತೆರಳಿ, ಇಂದು ಜನವರಿ 20 ರಂದು ಯುನೈಟೆಡ್ ಸ್ಟೇಟ್ಸ್ನ 47 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಪ್ರಮಾಣ ಸಮಾರಂಭವು ಯುಎಸ್ ಕ್ಯಾಪಿಟಲ್ ಕಟ್ಟಡದ ರೋಟುಂಡಾದಲ್ಲಿ ನಡೆದಿದ್ದು ಅಲ್ಲೇ ಡೊನಾಲ್ಡ್‌ ತಮ್ಮ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇನ್ನು ಮುಂದೆ ಅಮೇರಿಕಾದ ಗೋಲ್ಡನ್ ಎರಾ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಡೊನಾಲ್ಡ್‌ ಟ್ರಂಪ್ ಅವರು ಎರಡನೇ ಬಾರಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರು ಜನವರಿ 20 ರಂದು ಯುನೈಟೆಡ್ ಸ್ಟೇಟ್ಸ್ನ 47 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭವು ಯುಎಸ್ ಕ್ಯಾಪಿಟಲ್ ಕಟ್ಟಡದ ರೋಟುಂಡಾದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅಮೆರಿಕದ ಸುವರ್ಣಯುಗ ಇಂದಿನಿಂದ ಆರಂಭವಾಗಿದೆ. ನಮ್ಮ ದೇಶ ಇಂದಿನಿಂದ ಅಭಿವೃದ್ಧಿ ಹೊಂದುತ್ತದೆ ಎನ್ನುತ್ತಲೇ ಭಾಷಣ ಆರಂಭಿಸಿದ್ದಾರೆ. ಜನರಿಗೆ ಅವರ ನಂಬಿಕೆ, ಅವರ ಸಂಪತ್ತು, ಅವರ ಪ್ರಜಾಪ್ರಭುತ್ವ ಮತ್ತು ಅವರ ಸ್ವಾತಂತ್ರ್ಯವನ್ನು ಮರಳಿ ನೀಡಲು ನಾನು ಶ್ರಮಿಸುತ್ತೇನೆ ಎಂದಿದ್ದಾರೆ. ಈ ಕ್ಷಣದಿಂದ, ಅಮೆರಿಕದ ಅವನತಿ ಮುಗಿದಿದೆ.

ಡೊನಾಲ್ಡ್ ಟ್ರಂಪ್ ಭಾಷಣ

ಅಮೆರಿಕದಲ್ಲಿ ಸುವರ್ಣ ಯುಗ ಆರಂಭ: ಈ ಕ್ಷಣದಿಂದ ಅಮೆರಿಕದಲ್ಲಿ ಸುವರ್ಣ ಯುಗ ಆರಂಭವಾಗಿದೆ. ನಮ್ಮ ದೇಶವು ಸಮೃದ್ಧವಾಗಿ ಬೆಳೆಯುತ್ತದೆ. ಜಗತ್ತಿನಾದ್ಯಂತ ಗೌರವ ಪಡೆಯುತ್ತದೆ. ಎಲ್ಲ ದೇಶಗಳೂ ನಮ್ಮನ್ನು ಕಂಡು ಅಸೂಯೆ ಪಡಲಿವೆ. ನಮ್ಮನ್ನು ಇನ್ನೊಬ್ಬರ ಸ್ವಾರ್ಥಕ್ಕೆ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ.

ಟ್ರಂಪ್ ಆದ್ಯತೆ: ನಮ್ಮ ದೇಶದ ಹೆಮ್ಮೆ, ಸಮೃದ್ಧಿ ಮತ್ತು ಸ್ವಾತಂತ್ರ್ಯ ಕಾಪಾಡಿಕೊಳ್ಳುವುದು ನಮ್ಮ ಆದ್ಯತೆ. ಅಮೆರಿಕ ಶೀಘ್ರದಲ್ಲಿಯೇ ಹಿಂದೆಂದಿಗಿಂತಲೂ ಪ್ರಬಲ, ಶಕ್ತಿಶಾಲಿ ದೇಶವಾಗಲಿದೆ.

ಜನರ ನಂಬಿಕೆಗೆ ಬೆಲೆ: ಈ ದಿನ ನಮ್ಮ ಸರ್ಕಾರವು ವಿಶ್ವಾಸದ ಕೊರತೆಗೆ ಮುಖಾಮುಖಿಯಾಗಬೇಕಾಗಿದೆ. ಹಲವು ವರ್ಷಗಳಿಂದ ಅಸ್ತಿತ್ವದಲ್ಲಿದ್ದ ಭ್ರಷ್ಟ ಆಡಳಿತ ವ್ಯವಸ್ಥೆಯು ಜನರ ಅಧಿಕಾರ ಮತ್ತು ಸಂಪತ್ತನ್ನು ಕಿತ್ತುಕೊಂಡಿತ್ತು.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.