ಕನ್ನಡ ಸುದ್ದಿ  /  Nation And-world  /  Earthquake In Turkey And Syria Death Toll Rises To 15 000

Earthquake in Turkey Syria Updates: ಟರ್ಕಿ, ಸಿರಿಯಾ ಭೂಕಂಪನದಲ್ಲಿ ಸಾವಿನ ಸಂಖ್ಯೆ 15 ಸಾವಿರಕ್ಕೆ ಏರಿಕೆ!

ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದಿಂದಾಗಿ ಇದುವರೆಗೆ 15,000 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ಇಂದು ಪ್ರಕಟಿಸಿದೆ.

ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದ ಎಲ್ಲವನ್ನ ಕಳೆದುಕೊಂಡು ಕಣ್ಣೀರಿಡುತ್ತಿರುವ ಮಹಿಳೆ (ಫೋಟೋ-REUTERS)
ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದ ಎಲ್ಲವನ್ನ ಕಳೆದುಕೊಂಡು ಕಣ್ಣೀರಿಡುತ್ತಿರುವ ಮಹಿಳೆ (ಫೋಟೋ-REUTERS)

ಅಂಕಾರಾ: ಪ್ರಬಲ ಭೂಕಂಪನದಿಂದಾಗಿ ಟರ್ಕಿ ಮತ್ತು ಸಿರಿಯಾ ಅಕ್ಷರಶಃ ಸ್ಮಶಾನದಂತಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದುವರೆಗೆ 15,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ಇಂದು ಪ್ರಕಟಿಸಿದೆ.

ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದು. ವಿಶ್ವದ 24 ದೇಶಗಳ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಭಾರತೀಯ ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಟರ್ಕಿಯಲ್ಲಿ ಫೀಲ್ಡ್‌ ಗೆ ಇಳಿದಿವೆ.

ಭೂಕಂಪ ಪೀಡಿತ ಪ್ರದೇಶಗಳಲ್ಲಿ ಕ್ಷೇತ್ರ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎನ್ ಡಿಆರ್ ಎಫ್ ತಂಡಗಳು ಸಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ಮಧ್ಯಪ್ರಾಚ್ಯ ದೇಶಗಳಾದ ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪನ ಭಾರಿ ಪ್ರಮಾಣದ ಹಾನಿಯನ್ನುಂಟುಮಾಡಿದೆ. ಅನೇಕ ಕಟ್ಟಡಗಳು ನಾಶವಾಗಿವೆ. ಒಂದು ವರದಿಯ ಪ್ರಕಾರ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.9 ರಷ್ಟಿ ದಾಖಲಾಗಿದೆ ಎಂದು ಹೇಳಲಾಗಿದೆ.

ಸಾವಿರಾರು ಕಟ್ಟಡಗಳು ಧರೆಗುರುಳಿರುವುದರಿಂದ ನೆರವು ಕೂಡ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಧ್ಯಕ್ಷ ಎರ್ಡೊಗನ್ ಇದನ್ನು ದಶಕದಲ್ಲೇ ಅತಿ ದೊಡ್ಡ ದುರಂತ ಎಂದು ಕರೆದಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಳು ವೇಗವಾಗಿ ನಡೆಯುತ್ತಿದ್ದು, ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಘಟಕಗಳನ್ನು ನೇಮಿಸಲಾಗಿದೆ ಎಂದು ಎರ್ಡೊಗನ್ ಹೇಳಿದ್ದಾರೆ.

IPL_Entry_Point

ವಿಭಾಗ