NEET Coaching: ನೀಟ್‌ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಅಂಕಿಅಂಶ ಲಭ್ಯವಿಲ್ಲ ಎಂದು ಒಪ್ಪಿಕೊಂಡ ಕೇಂದ್ರ ಸರಕಾರ-education news india neet coaching centres student suicide numbers not maintained central govt informed pcp ,ರಾಷ್ಟ್ರ-ಜಗತ್ತು ಸುದ್ದಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Neet Coaching: ನೀಟ್‌ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಅಂಕಿಅಂಶ ಲಭ್ಯವಿಲ್ಲ ಎಂದು ಒಪ್ಪಿಕೊಂಡ ಕೇಂದ್ರ ಸರಕಾರ

NEET Coaching: ನೀಟ್‌ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಅಂಕಿಅಂಶ ಲಭ್ಯವಿಲ್ಲ ಎಂದು ಒಪ್ಪಿಕೊಂಡ ಕೇಂದ್ರ ಸರಕಾರ

NEET Exam: ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ವಿವಿಧ ಕೋಚಿಂಗ್ ಸೆಂಟರ್‌ಗಳಲ್ಲಿನ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಹಿತಿ ನಿರ್ವಹಣೆಯನ್ನು ಸರಕಾರ ಮಾಡುತ್ತಿಲ್ಲ ಎಂದು ಸುಭಾಸ್‌ ಸರ್ಕಾರ್‌ ಅವರು ಸಂಸತ್‌ನಲ್ಲಿ ತಿಳಿಸಿದ್ದಾರೆ.

NEET Coaching: ನೀಟ್‌ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಅಂಕಿಅಂಶ ಲಭ್ಯವಿಲ್ಲ ಎಂದು ಒಪ್ಪಿಕೊಂಡ ಕೇಂದ್ರ ಸರಕಾರ (ಸಾಂದರ್ಭಿಕ ಚಿತ್ರ)
NEET Coaching: ನೀಟ್‌ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಅಂಕಿಅಂಶ ಲಭ್ಯವಿಲ್ಲ ಎಂದು ಒಪ್ಪಿಕೊಂಡ ಕೇಂದ್ರ ಸರಕಾರ (ಸಾಂದರ್ಭಿಕ ಚಿತ್ರ)

ನವದೆಹಲಿ: ದೇಶಾದ್ಯಂತ ನೀಟ್‌ಗಾಗಿ ಕೋಚಿಂಗ್ ಸೆಂಟರ್‌ಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ವಿವಿಧ ಕೋಚಿಂಗ್ ಸೆಂಟರ್‌ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯನ್ನು ನಿರ್ವಹಿಸಲಾಗಿಲ್ಲ ಎಂದು ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ. ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಸಂಸತ್ತಿನಲ್ಲಿಈ ಕುರಿತು ಹೇಳಿಕೆ ನೀಡಿದ್ದಾರೆ.

ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ವಿವಿಧ ಕೋಚಿಂಗ್ ಸೆಂಟರ್‌ಗಳಲ್ಲಿನ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಹಿತಿ ನಿರ್ವಹಣೆಯನ್ನು ಸರಕಾರ ಮಾಡುತ್ತಿಲ್ಲ ಎಂದು ಸುಭಾಸ್‌ ಸರ್ಕಾರ್‌ ಅವರು ಸಂಸತ್‌ನಲ್ಲಿ ತಿಳಿಸಿದ್ದಾರೆ. ಡಾ ಟಿಆರ್ ಪರಿವೇಂದರ್ ಮತ್ತು ರವನೀತ್ ಸಿಂಗ್ ಬಿಟ್ಟು ಕೇಳಿದ ಪ್ರಶ್ನೆಗಳಿಗೆ ಅವರು ಈ ಉತ್ತರ ನೀಡಿದ್ದಾರೆ. ಇದೇ ಸಮಯದಲ್ಲಿ ನೀಟ್‌ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಅಂಕಿಅಂಶಗಳ ಕುರಿತು ಮತ್ತು ವಿದ್ಯಾರ್ಥಿಗಳನ್ನು ಬಲವಂತದ ಆತ್ಮಹತ್ಯೆಯಿಂದ ರಕ್ಷಿಸಲು ದೇಶಾದ್ಯಂತ ಕೋಚಿಂಗ್‌ ಸೆಂಟರ್‌ಗಳಿಗೆ ಪ್ರಮಾಣಿಕ ಮಾರ್ಗಸೂಚಿ ರೂಪಿಸುವ ಉದ್ದೇಶವನ್ನು ಸರಕಾರ ಹೊಂದಿರುವುದೇ ಎಂದು ಈ ಇಬ್ಬರು ಸಂಸದರು ಸರಕಾರವನ್ನು ಪ್ರಶ್ನಿಸಿದರು. ಅದಕ್ಕೆ ಸುಭಾಸ್‌ ಸರ್ಕಾರ್‌ ಅವರು ಉತ್ತರ ನೀಡಿದ್ದಾರೆ.

"ಶಿಕ್ಷಣ ಕೇಂದ್ರಗಳು ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ನಿರ್ವಹಿಸುವ ವಿಷಯವಾಗಿದೆ. ದೇಶದ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ ಸರಕಾರದ ವ್ಯಾಪ್ತಿಗೆ ಬರುತ್ತವೆ. ಈ ಎಲ್ಲಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕಣಗಳ ದತ್ತಾಂಶವನ್ನು ನಿರ್ವಹಿಸಲಾಗಿಲ್ಲ. ಆದರೆ, ಭಾರತದಲ್ಲಿ ಅಪಘಾತದ ಸಾವುಗಳು ಮತ್ತು ಆತ್ಮಹತ್ಯೆಗಳು- 2021ರ ವರದಿ, ನ್ಯಾಷನಲ್‌ ಕ್ರೈಮ್‌ ರೆಕಾರ್ಡ್‌ ಬ್ಯೂರೋದಲ್ಲಿ ವೃತ್ತಿಪರ/ಕೆರಿಯರ್‌ ಸಂಬಂಧಿತ ಆತ್ಮಹತ್ಯೆಗಳು, ನಿಂದನೆ, ಹಿಂಸೆ, ಕೌಟುಂಬಿಕ ಸಮಸ್ಯೆಗಳು, ಮಾನಸಿಕ ಅಸ್ವಸ್ಥತೆಗಳ ಆತ್ಮಹತ್ಯೆಯ ದಾಖಲೆಗಳು ಇವೆ" ಎಂದು ಅವರು ಉತ್ತರ ನೀಡಿದ್ದಾರೆ.

ನೀಟ್‌ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆ ಹೇಗೆ?

ನೀಟ್‌ ವಿದ್ಯಾರ್ಥಿಗಳ ಆತ್ಮಹತ್ಯೆಯಂತಹ ಪ್ರಕರಣಗಳನ್ನು ತಡೆಯಲು ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಸುಭಾಸ್‌ ಸರ್ಕಾರ್‌ ಮಾಹಿತಿ ನೀಡಿದ್ದಾರೆ. ಎನ್‌ಇಪಿ 2020ರ ಪ್ರಕಾರ ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಒತ್ತಡ ನಿಭಾಯಿಸಲು ಸಹಾಯ ಮಾಡುವಂತಹ ಕೌನ್ಸೆಲಿಂಗ್‌ ವ್ಯವಸ್ಥೆ ಇರಬೇಕು. ವಿದ್ಯಾರ್ಥಿಗಳಿಗೆ ಕ್ರಿಡೆ, ಸಂಸ್ಕೃತಿ ಮತ್ತು ಕಲಾ ಕ್ಲಬ್‌ಗಳು, ಪರಿಸರ ಕ್ಲಬ್‌ಗಳು ಇತ್ಯಾದಿಗಳಲ್ಲಿ ಭಾಗವಹಿಸುವ ಅವಕಾಶ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಒತ್ತಡ ತಗ್ಗಿಸಲು ಹಲವು ಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ. ಸಚಿವಾಲಯವು ವಿದ್ಯಾರ್ಥಿಗಳಿಗೆ ಪೀಯರ್‌ ಅಸಿಸ್ಟೆಡ್‌ ಲರ್ನಿಂಗ್‌, ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ಪರಿಚಯ ಇತ್ಯಾದಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ಮತ್ತು ಅದರ ಬಳಿಕ ವಿದ್ಯಾರ್ಥಿಗಳ ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕಾಗಿ ವ್ಯಾಪಕ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿದೆ. ಆತ್ಮಹತ್ಯೆಗೆ ಸಂಭವನೀಯ ಕಾರಣಗಳನ್ನು ಕಂಡುಹಿಡಿದು ಆತ್ಮಹತ್ಯೆ ತಡೆಯಲು ಮತ್ತು ಪರಿಹಾರ ಕ್ರಮಕೈಗೊಳ್ಳಲು ಸೂಕ್ತ ವ್ಯವಸ್ಥೆಯನ್ನು ರೂಪಿಸುವಂತೆ ಸಚಿವಾಲಯವು ಶಿಕ್ಷಣ ಸಂಸ್ಥೆಗಳಿಗೆ ಸಲಹೆ ನೀಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆ ಸಹಾಯವಾಣಿ: ಆತ್ಮಹತ್ಯೆಯಂತಹ ಮಾನಸಿಕ ಯೋಚನೆಗಳು ಬಂದಾಗ ಕರೆ ಮಾಡಿ: Helpline- 9152987821 (icall)

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.