5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಅಕ್ಟೋಬರ್ 6 ಕೊನೆಯ ದಿನ, ಇಲ್ಲಿದೆ ಲಿಂಕ್
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಅಕ್ಟೋಬರ್ 6 ಕೊನೆಯ ದಿನ, ಇಲ್ಲಿದೆ ಲಿಂಕ್

5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಅಕ್ಟೋಬರ್ 6 ಕೊನೆಯ ದಿನ, ಇಲ್ಲಿದೆ ಲಿಂಕ್

ಭಾರತದ ಶಿಕ್ಷಣ ಸಂಸ್ಥೆಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರತಿಭಾವಂತ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನ ಘೋಷಣೆ ಮಾಡಿದೆ. ಅರ್ಹರು ಅಕ್ಟೋಬರ್‌ 6ರೊಳಗೆ ಅರ್ಜಿ ಸಲ್ಲಿಸಬಹುದು.

5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಅಕ್ಟೋಬರ್ 6 ಕೊನೆಯ ದಿನ
5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಅಕ್ಟೋಬರ್ 6 ಕೊನೆಯ ದಿನ

ರಿಲಯನ್ಸ್ ಫೌಂಡೇಷನ್ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನ ವಿತರಣೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದಾದ್ಯಂತ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಒಟ್ಟು 5100 ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 100 ಅರ್ಹ ವಿದ್ಯಾರ್ಥಿಗಳನ್ನು ಇದಕ್ಕಾಗಿ ಆಯ್ಕೆ ಮಾಡಲಾಗುತ್ತದೆ. ಎಲ್ಲ ವಿದ್ಯಾರ್ಥಿವೇತನಗಳನ್ನು ಆಯಾ ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ನೀಡಲಾಗುತ್ತದೆ. ಸಮಗ್ರ ಬೆಂಬಲ ಹಾಗೂ ಹಣಕಾಸಿನ ನೆರವು ನೀಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ವೃತ್ತಿಪರ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳಲು ಈ ವಿದ್ಯಾರ್ಥಿವೇತನವು ನೆರವಾಗಲಿದೆ.

ಮೊದಲ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈ ವೇತನ ನೀಡಲಾಗುತ್ತದೆ. ಭಾರತದೊಳಗೆ ಇರುವಂಥ ಶಿಕ್ಷಣ ಸಂಸ್ಥೆಯಿಂದ ಪೂರ್ಣಾವಧಿಗೆ ಮತ್ತು ನಿಯಮಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು 2024ರ ಅಕ್ಟೋಬರ್ 6 ಅಂತಿಮ ದಿನವಾಗಿದೆ.

ಅಂಕ ಹಾಗೂ ಆರ್ಥಿಕ ಸ್ಥಿತಿಯ ಮಾನದಂಡ

ಪದವಿ ಶಿಕ್ಷಣ ಪಡೆಯುತ್ತಿರುವವರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳ ಅಂಕ ಹಾಗೂ ಆರ್ಥಿಕ ಸ್ಥಿತಿಯ ಮಾನದಂಡದ ಆಧಾರದ ಮೇಲೆ 5000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಫೌಂಡೇಶನ್‌ ಹೇಳಿದೆ.

ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿ

ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 6 ಲಕ್ಷ ರೂ ನೀಡಲಾಗುತ್ತದೆ. ವಿದ್ಯಾರ್ಥಿಗಳು ಮಾರ್ಗದರ್ಶನ ಪಡೆಯಲು, ವೃತ್ತಿಪರ ಬೆಳವಣಿಗೆ ಜೊತೆಗೆ ವೃತ್ತಿ ಸಲಹೆಗಾಗಿ ಉದ್ಯಮದ ನಾಯಕರು ಮತ್ತು ತಜ್ಞರ ಜೊತೆಗೆ ಸಂವಹನಕ್ಕೆ ಅವಕಾಶ ನೀಡಲಾಗುತ್ತದೆ. ಕೌಶಲಗಳನ್ನು ಹೆಚ್ಚಿಸಲು ಕಾರ್ಯಾಗಾರಗಳು, ಸೆಮಿನಾರ್‌ಗಳು ಮತ್ತು ಕಾರ್ಯಕ್ರಮಗಳ ಮೂಲಕ ನಾಯಕತ್ವದ ಅಭಿವೃದ್ಧಿ ಅವಕಾಶಗಳು, ಜೊತೆಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯೊಂದಿಗೆ ಸೇವೆ ಹಾಗೂ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ.

2022ರಲ್ಲಿ ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು, 50,000 ಸ್ಕಾಲರ್‌ಶಿಪ್‌ಗಳನ್ನು ಘೋಷಿಸಿದರು. ಇದು ಭಾರತದ ಅತಿದೊಡ್ಡ ಖಾಸಗಿ ವಿದ್ಯಾರ್ಥಿವೇತನವಾಗಿದೆ. ಅಂದಿನಿಂದ, ಪ್ರತಿ ವರ್ಷ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಇಲ್ಲಿಯವರೆಗೆ, ರಿಲಯನ್ಸ್ 23,000 ಉನ್ನತ ಶಿಕ್ಷಣ ವಿದ್ಯಾರ್ಥಿವೇತನವನ್ನು ಒದಗಿಸಿದೆ.

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು www.scholarships.reliancefoundation.org ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಪದವಿ ವಿದ್ಯಾರ್ಥಿಗೆ ಅರ್ಹತೆ ಮತ್ತು ಆರ್ಥಿಕ ಹಿನ್ನೆಲೆಯ ಮೌಲ್ಯಮಾಪನವನ್ನು ಒಳಗೊಂಡಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿವೇತನಕ್ಕಾಗಿ, ಶೈಕ್ಷಣಿಕ ಸಾಧನೆಗಳು, ವೈಯಕ್ತಿಕ ಹೇಳಿಕೆಗಳು ಮತ್ತು ಸಂದರ್ಶನಗಳನ್ನು ನಡೆಸಲಾಗುತ್ತದೆ. ಈ ಎಲ್ಲವೂ ಭಾರತದಾದ್ಯಂತದ ಪ್ರತಿಭೆಗಳನ್ನು ಗುರುತಿಸಲು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಭಾಗವಾಗಿದೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.