Tamil Nadu Exit Poll: ತಮಿಳುನಾಡಿನಲ್ಲಿ ಡಿಎಂಕೆ ಮೇಲುಗೈ; ಇಂಡಿಯಾ ಟುಡೇ, ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಅಭಿಮತ
ಕನ್ನಡ ಸುದ್ದಿ  /  ಚುನಾವಣೆಗಳು  /  Tamil Nadu Exit Poll: ತಮಿಳುನಾಡಿನಲ್ಲಿ ಡಿಎಂಕೆ ಮೇಲುಗೈ; ಇಂಡಿಯಾ ಟುಡೇ, ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಅಭಿಮತ

Tamil Nadu Exit Poll: ತಮಿಳುನಾಡಿನಲ್ಲಿ ಡಿಎಂಕೆ ಮೇಲುಗೈ; ಇಂಡಿಯಾ ಟುಡೇ, ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಅಭಿಮತ

Tamil Nadu Election Exit poll result 2024: ದಕ್ಷಿಣ ಭಾರತದ ಪ್ರಮುಖ ರಾಜ್ಯವಾಗಿರುವ ತಮಿಳುನಾಡಿನಲ್ಲಿ ಡಿಎಂಕೆ ಮೇಲುಗೈ ಸಾಧಿಸಲಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಭವಿಷ್ಯ ನುಡಿದಿದೆ.

Tamil Nadu Exit Poll: ತಮಿಳುನಾಡಿನಲ್ಲಿ ಡಿಎಂಕೆ ಮೇಲುಗೈ; ಇಂಡಿಯಾ ಟುಡೇ, ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಅಭಿಮತ
Tamil Nadu Exit Poll: ತಮಿಳುನಾಡಿನಲ್ಲಿ ಡಿಎಂಕೆ ಮೇಲುಗೈ; ಇಂಡಿಯಾ ಟುಡೇ, ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಅಭಿಮತ

ಬೆಂಗಳೂರು: ತಮಿಳು ನಾಡು ಲೋಕಸಭಾ ಚುನಾವಣ 2024 ಏಪ್ರಿಲ್‌ 19 ಮೊದಲ ಹಂತದಲ್ಲಿ ನಡೆದಿತ್ತು. ಜೂನ್‌ 4, 2024ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 39 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ದ್ರಾವಿಡ ಮುನ್ನೇತ್ರ ಕಳಗಂ ಎಂಕೆ ಸ್ಟಾಲಿನ್‌ ನೇತ್ವತ್ವದಲ್ಲಿ 21 ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಕೊಂಗುನಾಡು ಮಕ್ಕಳ್ ದೇಶಿಯ ಕಚ್ಚಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ವಿದುತಲೈ ಚಿರುತೈಗಳ್ ಕಚ್ಚಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ ಮುಂತಾದ ಪಕ್ಷಗಳಿಂದ ಒಟ್ಟು 39 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಚುನಾವಣೆಗೆ ನಿಂತಿದ್ದಾರೆ. ಆಕ್ಸಿಸ್‌ ಮೈ ಇಂಡಿಯಾ, ಸಿ ವೋಟರ್‌, ಇಂಡಿಯಾ ಟುಡೇ ಆಕ್ಸಿಸ್‌, ಎಬಿಪಿ ನ್ಯೂಸ್‌-ಸಿವೋಟರ್‌, ಟೈಮ್ಸ್‌ ನೌ, ನ್ಯೂಸ್‌ 18 ಐಬಿಎಸ್‌ಒಎಸ್‌, ರಿಪಬ್ಲಿಕ್‌ ಟಿವಿ ಜನ್‌ ಕೀ ಬಾತ್‌, ಟುಡೇಸ್‌ ಚಾಣಾಕ್ಯ ಚುನಾವಣಾ ಸಮೀಕ್ಷೆ ಹೊರಬಿದ್ದಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಈ ಸಮೀಕ್ಷೆಗಳ ಪ್ರಕಾರ ಯಾರಿಗೆ ಎಷ್ಟು ಸ್ಥಾನ ದೊರಕಲಿದೆ ಎಂಬ ವಿವರ ಇಲ್ಲಿದೆ.

ತಮಿಳುನಾಡಿನಲ್ಲಿ ಡಿಎಂಕೆ ಮೇಲುಗೈ

ದಕ್ಷಿಣ ಭಾರತದ ಪ್ರಮುಖ ರಾಜ್ಯವಾಗಿರುವ ತಮಿಳುನಾಡಿನಲ್ಲಿ ಡಿಎಂಕೆ ಮೇಲುಗೈ ಸಾಧಿಸಲಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಭವಿಷ್ಯ ನುಡಿದಿದೆ. ಡಿಎಂಕೆ 20-22, ಕಾಂಗ್ರೆಸ್ 6-9, ಬಿಜೆಪಿ 1-3, ಇತರರು 0-2 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ. ಡಿಎಂಕೆ-ಕಾಂಗ್ರೆಸ್ ಮೈತ್ರಿಯ ಇಂಡಿಯಾ ಒಕ್ಕೂಟವು 33-37 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಸಮೀಕ್ಷೆಯು ಮುನ್ಸೂಚನೆ ನೀಡಿದೆ.

ಹೆಚ್ಚಿನ ವಿವರ ಅಪ್‌ಡೇಟ್‌ ಆಗುತ್ತಿದೆ.

ಗಮನಿಸಿ: ಚುನಾವಣೆ ಫಲಿತಾಂಶ ಎಕ್ಸಿಟ್‌ ಪೋಲ್ ಸಂಖ್ಯೆಗಳಿಗಿಂತ ಭಿನ್ನವಾಗಿ ಇರಬಹುದು

 

Whats_app_banner