ಐಒಸಿಎಲ್‌ನಲ್ಲಿ ಉದ್ಯೋಗಾವಕಾಶ; 473 ಅಪ್ರೆಂಟೀಸ್ ಹುದ್ದೆಗಳಿಗೆ ಫೆಬ್ರವರಿ 1ರೊಳಗೆ ಅರ್ಜಿ ಸಲ್ಲಿಸಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಐಒಸಿಎಲ್‌ನಲ್ಲಿ ಉದ್ಯೋಗಾವಕಾಶ; 473 ಅಪ್ರೆಂಟೀಸ್ ಹುದ್ದೆಗಳಿಗೆ ಫೆಬ್ರವರಿ 1ರೊಳಗೆ ಅರ್ಜಿ ಸಲ್ಲಿಸಿ

ಐಒಸಿಎಲ್‌ನಲ್ಲಿ ಉದ್ಯೋಗಾವಕಾಶ; 473 ಅಪ್ರೆಂಟೀಸ್ ಹುದ್ದೆಗಳಿಗೆ ಫೆಬ್ರವರಿ 1ರೊಳಗೆ ಅರ್ಜಿ ಸಲ್ಲಿಸಿ

ಐಒಸಿಎಲ್‌ನಲ್ಲಿ 473 ಅಪ್ರೆಂಟೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಅನ್ನೋದರ ವಿವರ ಇಲ್ಲಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ಖಾಲಿ ಇರುವ 473 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ಖಾಲಿ ಇರುವ 473 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. (HT File)

ದೆಹಲಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್-ಐಒಸಿಎಲ್‌ನಲ್ಲಿ (IOCL Job) 473 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಐಒಸಿಎಲ್‌ನ ಅಧಿಕೃತ ವೆಬ್‌ಸೈಟ್ iocl.com ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ, ನೇಮಕಾತಿ ವಿಧಾನ, ಮಾನದಂಡಗಳು ಸೇರಿದಂತೆ ಅಗತ್ಯ ಮಾಹಿತಿ ಇಲ್ಲಿದೆ.

ಐಒಸಿಎಲ್ ನೇಮಕಾತಿ 2024: 473 ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಐಒಸಿಎಲ್ ನೇಮಕಾತಿ 2024

ವಮೋಮಿತಿ: 2024ರ ಜನವರಿ 12ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 24 ವರ್ಷಗಳು.

ಐಒಸಿಎಲ್ ನೇಮಕಾತಿ 2024 ಆಯ್ಕೆ ಪ್ರಕ್ರಿಯೆ: ಪ್ರಮುಖವಾಗಿ ಲಿಖಿತ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಒಂದು ಸರಿಯಾದ ಉತ್ತರಕ್ಕೆ ನಾಲ್ಕು ಆಯ್ಕೆಗಳನ್ನು ಒಳಗೊಂಡಿರುವ ಆಬ್ಜೆಕ್ಟಿವ್ ಟೈಪ್ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳೊಂದಿಗೆ (MCQs) ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ಅರ್ಹತೆ ಪಡೆಯಲು ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ 100ಕ್ಕೆ ಕನಿಷ್ಠ 40 ಅಂಕಗಳನ್ನು ಗಳಿಸಬೇಕು. ತಪ್ಪು ಉತ್ತರಗಳಿಗೆ ಯಾವುದೇ ನಕಾರಾತ್ಮಕ ಅಂಕ ಇರುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಐಒಸಿಎಲ್‌ನ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಬಹುದು.

ಐಒಸಿಎಲ್ ಅಪ್ರೆಂಟಿಸ್ ನೇಮಕಾತಿ 2024: ಅರ್ಜಿ ಸಲ್ಲಿಸುವುದು ಹೇಗೆ

  • ಐಒಸಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ iocl.com ಭೇಟಿ ನೀಡಿ
  • ಮುಖಪುಟದಲ್ಲಿ ಲಭ್ಯವಿರುವ ವೃತ್ತಿಜೀವನ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಅಭ್ಯರ್ಥಿಗಳು ಅಪ್ರೆಂಟೀಸ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು
  • ಮತ್ತೆ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೋಂದಣಿ ಲಿಂಕ್ ಲಭ್ಯವಿರುತ್ತದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಹೆಸರು ಹಾಗೂ ಇತರೆ ಮಾಹಿತಿ ನೋಂದಾಯಿಸಿ
  • ನೋಂದಣಿ ನಂತರ ಖಾತೆಗೆ ಲಾಗ್ ಇನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ
  • ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಮತ್ತು ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿ
  • ಹೆಚ್ಚಿನ ಅಗತ್ಯಕ್ಕಾಗಿ ಹಾರ್ಡ್ ಕಾಪಿಯೊಂದನ್ನು ನಿಮ್ಮ ಬಳಿಯೇ ಇರಿಸಿಕೊಳ್ಳಿ

'ಮನೆ-ಮನದಲ್ಲಿ ಶ್ರೀರಾಮ' ಸರಣಿಗೆ ನೀವೂ ಬರೆಯಿರಿ. ಇಮೇಲ್: ht.kannada@htdigital.in

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.