ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ: 80 ಹುದ್ದೆಗಳಿಗೆ ಅರ್ಜಿ ಆಹ್ವಾನ; ಲಿಂಕ್ ಇಲ್ಲಿದೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ: 80 ಹುದ್ದೆಗಳಿಗೆ ಅರ್ಜಿ ಆಹ್ವಾನ; ಲಿಂಕ್ ಇಲ್ಲಿದೆ

ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ: 80 ಹುದ್ದೆಗಳಿಗೆ ಅರ್ಜಿ ಆಹ್ವಾನ; ಲಿಂಕ್ ಇಲ್ಲಿದೆ

SCI Junior Court Attendant Recruitment 2024: ಭಾರತದ ಸುಪ್ರೀಂ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡುತ್ತದೆ. ಅರ್ಹ ಅಭ್ಯರ್ಥಿಗಳು ಸರ್ವೋಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ
ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ

ಭಾರತದ ಸುಪ್ರೀಂ ಕೋರ್ಟ್, (SCI) ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸರ್ವೋಚ್ಛ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಈ ನೇಮಕಾತಿ ಪ್ರಕ್ರಿಯೆ ಮೂಲಕ ಖಾಲಿ ಇರುವ 80 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ನೋಂದಣಿ ಪ್ರಕ್ರಿಯೆಯು ಆಗಸ್ಟ್ 23ರಂದು ಆರಂಭವಾಗಿದ್ದು, ಸೆಪ್ಟೆಂಬರ್ 12ರವರೆಗೂ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಹಾಗಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಅಟೆಂಡೆಂಟ್‌ ಹುದ್ದೆಗೆ ನೇಮಕಗೊಳ್ಳಲು ಬೇಕಾದ ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನು ತಿಳಿಯೋಣ.

ಅರ್ಹತಾ ಮಾನದಂಡಗಳು

18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸುಪ್ರೀಂ ಕೋರ್ಟ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಮಂಡಳಿ / ಶಿಕ್ಷಣ ಸಂಸ್ಥೆ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಅಡುಗೆ / ಪಾಕಶಾಲೆ ಕಲೆಯಲ್ಲಿ ಕನಿಷ್ಠ ಒಂದು ವರ್ಷದ ಪೂರ್ಣಾವಧಿ ಡಿಪ್ಲೊಮಾ ಅಗತ್ಯ. ಅಭ್ಯರ್ಥಿಗಳು ಪ್ರತಿಷ್ಠಿತ ಹೋಟೆಲ್ / ರೆಸ್ಟೋರೆಂಟ್ / ಸರ್ಕಾರಿ ಇಲಾಖೆ ಇತ್ಯಾದಿಗಳಲ್ಲಿ ಮೂರು ವರ್ಷಗಳ ಅಡುಗೆ ಅನುಭವವನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ?

ಆಯ್ಕೆ ಪ್ರಕ್ರಿಯೆಯು ದ್ವಿಭಾಷಾ (ಇಂಗ್ಲಿಷ್ ಮತ್ತು ಹಿಂದಿ) ಆಬ್ಜೆಕ್ಟಿವ್ ಟೈಪ್ ಪ್ರಶ್ನೆ ಪತ್ರಿಕೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ, ಪ್ರಾಯೋಗಿಕ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿರುತ್ತದೆ. ಲಿಖಿತ ಪರೀಕ್ಷೆ 100 ಅಂಕಗಳು, ಪ್ರಾಯೋಗಿಕ ಟ್ರೇಡ್ ಸ್ಕಿಲ್ ಪರೀಕ್ಷೆ 70 ಅಂಕಗಳು ಮತ್ತು ಸಂದರ್ಶನ 30 ಅಂಕಗಳದ್ದಾಗಿರುತ್ತದೆ. ಲಿಖಿತ ಪರೀಕ್ಷೆಯ ಅವಧಿ ಒಂದೂವರೆ ಗಂಟೆಗಳು (90 ನಿಮಿಷಗಳು). ಯಾವುದೇ ನಕಾರಾತ್ಮಕ ಅಂಕ ಇರುವುದಿಲ್ಲ. ಲಿಖಿತ ಪರೀಕ್ಷೆಯನ್ನು 16 ರಾಜ್ಯಗಳ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

ಲಿಖಿತ ಪರೀಕ್ಷೆಗಳು, ಪ್ರಾಯೋಗಿಕ ಕೌಶಲ್ಯ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಅರ್ಜಿ ಶುಲ್ಕ

ಅಭ್ಯರ್ಥಿಗಳು 400 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವು ಎಸ್‌ಸಿ/ಎಸ್‌ಟಿ/ಅಂಗವಿಕಲರು/ಮಾಜಿ ಸೈನಿಕರು/ಸ್ವಾತಂತ್ರ್ಯ ಹೋರಾಟಗಾರರ ಅವಲಂಬಿತರು/ವಿಧವೆ/ವಿಚ್ಛೇದಿತ ಮಹಿಳೆಯರು/ ಕಾನೂನು ಪ್ರಕಾರ ಬೇರ್ಪಟ್ಟು ಮರುವಿವಾಹವಾಗದ ಮಹಿಳಾ ಅಭ್ಯರ್ಥಿಗಳಿಗೆ 200 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ. ಶುಲ್ಕವನ್ನು ಆನ್ ಲೈನ್ ಮೂಲಕ ಮಾತ್ರ ಪಾವತಿಸಬೇಕು.

ಹೆಚ್ಚಿನ ವಿವರಗಳಿಗಾಗಿ, ಅಭ್ಯರ್ಥಿಗಳು ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್ಸೈಟ್ sci.gov.in ಅನ್ನು ಪರಿಶೀಲಿಸಬಹುದು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೀಗಿದೆ

  • ಅಪ್ಲಿಕೇಶನ್ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ ಮೂಲಕ ನಡೆಸಬೇಕು. ಅಭ್ಯರ್ಥಿಗಳು SCI ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹಂತಗಳು ಹೀಗಿವೆ.
  • ಆನ್‌ಲೈನ್ ನೋಂದಣಿ: SCI ಅಧಿಕೃತ ವೆಬ್‌ಸೈಟ್ sci.gov.inಗೆ ಲಾಗಿನ್‌ ಆಗಿ. ನೇಮಕಾತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • "ಜೂನಿಯರ್ ಕೋರ್ಟ್ ಅಟೆಂಡೆಂಟ್ (Cooking Knowledge) -2024" ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ವಿವರಗಳನ್ನು ನಮೂದಿಸುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
  • ಅರ್ಜಿ ಭರ್ತಿ: ನೋಂದಣಿಯ ನಂತರ, ನಿಮ್ಮ ಕ್ರೆಡೆನ್ಷಿಯಲ್‌ಗಳ ಜೊತೆಗೆ ಲಾಗ್ ಇನ್ ಆಗಿ. ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆಗಳು ಮತ್ತು ಕೆಲಸದ ಅನುಭವವನ್ನು ಒಳಗೊಂಡಂತೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಡಾಕ್ಯುಮೆಂಟ್ ಅಪ್ಲೋಡ್: ಅಧಿಸೂಚನೆಯಲ್ಲಿ ವಿವರಿಸಿರುವಂತೆ ನಿಮ್ಮ ಛಾಯಾಚಿತ್ರ, ಸಹಿ ಮತ್ತು ಅಗತ್ಯವಿರುವ ಯಾವುದೇ ಇತರ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿ ಪಾವತಿಯನ್ನು ಆನ್‌ಲೈನ್‌ನಲ್ಲಿ ಮಾಡಬೇಕು.
  • ಅಂತಿಮ ಸಲ್ಲಿಕೆ: ಅಂತಿಮ ಸಬ್ಮಿಷನ್‌ಗೆ ಮೊದಲು ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ, ಫಾರ್ಮ್ ಸಬ್ಮಿಟ್‌ ಮಾಡಿ. ನಿಮ್ಮ ದಾಖಲೆಗಳಿಗಾಗಿ ಪ್ರತಿಯ ಪ್ರಿಂಟ್‌ ತೆಗೆಯಿರಿ.
  • ಇನ್ನಷ್ಟು ಉದ್ಯೋಗ ಮಾಹಿತಿಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ | RRB Recruitment: ರೈಲ್ವೆಯಲ್ಲಿ 7951 ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.