Gold Price Today February 7: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ, ಬೆಳ್ಳಿ ದರದಲ್ಲಿ ಅಲ್ಪ ಇಳಿಕೆ; ಇವತ್ತಿನ ಚಿನಿವಾರ ಪೇಟೆ ಹೇಗಿದೆ ನೋಡಿ
ಚಿನಿವಾರ ಪೇಟೆಯಲ್ಲಿಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ನೀವು ಚಿನ್ನ ಖರೀದಿಸುವ ಪ್ಲಾನ್ ಮಾಡಿದ್ದರೆ ಒಮ್ಮೆ ಬೆಲೆಗಳನ್ನು ಪರಿಶೀಲಿಸಿ ಆ ನಂತರ ಖರೀದಿಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ಚಿನ್ನ, ಬೆಳ್ಳಿ ದರದ ಮಾಹಿತಿ ಹೀಗಿದೆ.
ಬೆಂಗಳೂರು: Today Gold and Silver Price: ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ (Gold and Silver price) ಇಂದು (7, ಮಂಗಳವಾರ, ಫೆಬ್ರವರಿ 2023) ಭಾರಿ ಏರಿಕೆಯಾಗಿದೆ. ನೀವು ಏನಾದರೂ ಇವತ್ತು ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡಿದ್ದರೆ ಚಿನ್ನಾಭರಣಗಳ ಬೆಲೆಗಳನ್ನು ಒಮ್ಮೆ ಪರೀಕ್ಷಿಸಿಕೊಳ್ಳಿ.
ಟ್ರೆಂಡಿಂಗ್ ಸುದ್ದಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 280 ರೂಪಾಯಿ ಏರಿಕೆಯಾಗಿದೆ. ಆ ಬಳಿಕ 57,490 ರೂಪಾಯಿ ಇದೆ. ನಿನ್ನೆ 57,210 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಹೆಚ್ಚಳಗೊಂಡ ನಂತರ 52,700 ರೂಪಾಯಿಗೆ ಬಂದು ನಿಂತಿದೆ. ನಿನ್ನೆ 52,450 ರೂಪಾಯಿ ಇತ್ತು. ಒಂದು ಕೆಜಿ ಬೆಳ್ಳಿ ಬೆಲೆ ಇಂದು 74,000 ರೂಪಾಯಿ ಇದೆ.
ಬೆಳ್ಳಿ ಬೆಲೆಯ ಮೇಲೆ 200 ರೂಪಾಯಿ ಕಡಿಮೆಯಾಗಿದೆ. ನಿನ್ನೆ 74,200 ರೂಪಾಯಿಗೆ ಬಂದು ನಿಂತಿತ್ತು. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.
ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನ, ಬೆಳ್ಳಿ ದರಗಳು:
Gold and silver rate in india: ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 280 ರೂಪಾಯಿ ಹೆಚ್ಚಳದ ನಂತರ 57,440 ರೂಪಾಯಿ ಇದೆ. ನಿನ್ನೆ 57,160 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್ ಚಿನ್ನದ ದರದಲ್ಲಿ 250 ರೂಪಾಯಿ ಏರಿಕೆಯ ನಂತರ 52,650 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಈ ಬೆಲೆ ನಿನ್ನೆ 52,400 ರೂಪಾಯಿ ಇತ್ತು.
ಹೈದರಾಬಾದ್ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಕಡಿಮೆಗೊಂಡಿದ್ದು, ಪ್ರಸ್ತುತ 74,000 ರೂಪಾಯಿಗೆ ವ್ಯಾಪಾರ ಆಗುತ್ತಿದೆ. ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 52,650 ಆಗಿದೆ. 24 ಕ್ಯಾರೆಟ್ ಚಿನ್ನಕ್ಕೆ 57,440 ರೂಪಾಯಿ ಇದೆ. ಇಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 74,000 ರೂಪಾಯಿಗೆ ಇಳಿದಿದೆ. ವಿಶಾಖಪಟ್ಟಣಂ ಮಾರುಕಟ್ಟೆಯಲ್ಲಿ 22ಕ್ಯಾರೆಟ್ ಚಿನ್ನದ ಬೆಲೆ 52,650 ರೂಪಾಯಿ ಆಗಿದ್ದು, 24ಕ್ಯಾರೆಟ್ ಚಿನ್ನದ ಬೆಲೆ 57,440 ರೂಪಾಯಿಗೆ ಹೆಚ್ಚಿದೆ.
ದೇಶದ ಇತರ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿದೆ. ಚೆನ್ನೈನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಏರಿಕೆಯಾಗಿದೆ. 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯಲ್ಲಿ 300 ರೂಪಾಯಿ ಏರಿಕೆಯಾಗಿ 53,650 ರೂಪಾಯಿಗೆ ತಲುಪಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 330 ರೂಪಾಯಿ ಏರಿಕೆಯ ನಂತರ ಬಳಿಕ 58,530 ರೂಪಾಯಿ ಇದೆ, ನಿನ್ನೆ 58,200 ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು. ಚೆನ್ನೈನಲ್ಲೂ ಕೆಜಿ ಬೆಳ್ಳಿ 74,000 ರೂಪಾಯಿ ಇದೆ.
ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 52,650 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 57,440 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಪ್ರಸ್ತುತ ಅಲ್ಲಿ ಕೆಜಿ ಬೆಳ್ಳಿ ಬೆಲೆ 71,200 ರೂಪಾಯಿ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 52,800 ರೂ., 24ಕ್ಯಾರೆಟ್ ಚಿನ್ನದ ಬೆಲೆ 57,590 ರೂಪಾಯಿಯಲ್ಲಿ ವ್ಯಾಪಾರ ಮುಂದುವರೆಯುತ್ತಿದೆ. ಇಲ್ಲಿ ಬೆಳ್ಳಿ ಬೆಲೆ 71,200 ರೂಪಾಯಿಗೆ ವಹಿವಾಟು ನಡೆಸುತ್ತಿದೆ.