ನಾನೀಗ ಒಬ್ಬ ಗುರು ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡೆ; ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಗಾಂಧಿ ಭಾವುಕ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ನಾನೀಗ ಒಬ್ಬ ಗುರು ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡೆ; ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಗಾಂಧಿ ಭಾವುಕ

ನಾನೀಗ ಒಬ್ಬ ಗುರು ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡೆ; ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಗಾಂಧಿ ಭಾವುಕ

Manmohan Singh Death: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ. ಸೋಷಿಯಲ್‌ ಮೀಡಿಯಾ Xನಲ್ಲಿ ಪೋಸ್ಟ್‌ ಹಂಚಿಕೊಂಡ ಅವರು, ನಾನೀಗ ಒಬ್ಬ ಗುರು ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡೆ ಎಂದು ಭಾವುಕರಾಗಿದ್ದಾರೆ.

ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಗಾಂಧಿ ಭಾವುಕ
ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಗಾಂಧಿ ಭಾವುಕ

Manmohan Singh Death: ಮಾಜಿ ಪ್ರಧಾನಿ, ಕಾಂಗ್ರೆಸ್‌ ಮುಖಂಡ ಮನಮೋಹನ್‌ ಸಿಂಗ್‌ ನಿಧನರಾಗಿದ್ದಾರೆ. ವಯಸ್ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಗುರುವಾರ (ಡಿ. 26) ರಾತ್ರಿ 9.50ರ ಸುಮಾರಿಗೆ ದೆಹಲಿಯ ಏಮ್ಸ್‌ನಲ್ಲಿ ಇಹಲೋಕ ತ್ಯಜಿಸಿದ್ದಾರೆ. 92 ವರ್ಷ ವಯಸ್ಸಿನ ಮನಮೋಹನ್‌ ಸಿಂಗ್‌ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸಿಂಗ್‌ ಅವರ ಸಾವಿಗೆ ಕಾಂಗ್ರೆಸ್‌ ನಾಯಕ ಸಂತಾಪ ಸೂಚಿಸಿದ್ದಾರೆ.

ರಾಹುಲ್‌ ಗಾಂಧಿ ಭಾವುಕ

ಮನಮೋಹನ್‌ ಸಿಂಗ್‌ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ, ಟ್ವಿಟರ್‌ನಲ್ಲಿ ಅವರ ಜತೆಗಿನ ಫೋಟೋಗಳನ್ನು ಶೇರ್‌ ಮಾಡಿರುವ ರಾಹುಲ್‌ ಗಾಂಧಿ, "ಮನಮೋಹನ್ ಸಿಂಗ್ ಅವರು ಭಾರತವನ್ನು ತಮ್ಮ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದರು. ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ಆಳವಾದ ಜ್ಞಾನ ರಾಷ್ಟ್ರವನ್ನು ಪ್ರೇರೇಪಿಸಿತು. ಶ್ರೀಮತಿ ಕೌರ್ ಮತ್ತು ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ನಾನು ಒಬ್ಬ ಗುರು ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ" ಎಂದಿದ್ದಾರೆ.

ಮಲ್ಲಿಕಾರ್ಜುನ್‌ ಖರ್ಗೆ ಸಂತಾಪ

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. "ಭಾರತದ ಆಕಾಂಕ್ಷೆಗಳನ್ನು ಸಾಕಾರಗೊಳಿಸಿದ, ಅಚಲವಾದ ಸಮರ್ಪಣಾಭಾವದಿಂದ ಉನ್ನತ ಶ್ರೇಣಿಯಲ್ಲಿ ಬೆಳೆದ ಜೀವಮಾನದ ಹಿರಿಯ ಸಹೋದ್ಯೋಗಿ, ಸೌಮ್ಯ ಬುದ್ಧಿಜೀವಿ ಮತ್ತು ವಿನಮ್ರ ಆತ್ಮವನ್ನು ನಾವು ಕಳೆದುಕೊಂಡಿದ್ದೇನೆ. ನಾನು ಕಾರ್ಮಿಕ ಸಚಿವನಾಗಿ, ರೈಲ್ವೆಯ ಸಚಿವನಾಗಿ, ಮತ್ತು ಸಮಾಜ ಕಲ್ಯಾಣ ಸಚಿವನಾಗಿ ಅವರ ಸಂಪುಟದ ಭಾಗವಾಗಿದ್ದಕ್ಕೆ ನಾನು ಧನ್ಯ, ಪದಗಳಿಗಿಂತ ಕ್ರಿಯಾಶೀಲ ವ್ಯಕ್ತಿ, ರಾಷ್ಟ್ರ ನಿರ್ಮಾಣಕ್ಕೆ ಅವರ ಅಪಾರ ಕೊಡುಗೆ ಯಾವಾಗಲೂ ಭಾರತೀಯ ಇತಿಹಾಸದ ಪುಟಗಳಲ್ಲಿ ದಾಖಲಾಗುತ್ತದೆ" ಎಂದಿದ್ದಾರೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.