ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Punjab Train Accident: ಪಂಜಾಬ್‌ನಲ್ಲಿ 2 ಗೂಡ್ಸ್‌ ರೈಲುಗಳ ನಡುವೆ ಭೀಕರ ಅಪಘಾತ; ಇಬ್ಬರು ಲೋಕೋ ಪೈಲಟ್‌ಗಳಿಗೆ ಗಾಯ, ಬೋಗಿಗಳು ನಜ್ಜು ಗುಜ್ಜು

Punjab Train Accident: ಪಂಜಾಬ್‌ನಲ್ಲಿ 2 ಗೂಡ್ಸ್‌ ರೈಲುಗಳ ನಡುವೆ ಭೀಕರ ಅಪಘಾತ; ಇಬ್ಬರು ಲೋಕೋ ಪೈಲಟ್‌ಗಳಿಗೆ ಗಾಯ, ಬೋಗಿಗಳು ನಜ್ಜು ಗುಜ್ಜು

ಪಂಜಾಬ್‌ನ ಫತೇಘರ್ ಸಾಹೀಬ್‌ನಲ್ಲಿ ಎರಡು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಂಜಾಬ್‌ನಲ್ಲಿ 2 ಗೂಡ್ಸ್‌ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘತಾದಲ್ಲಿ ಸರಕು ರೈಲಿನ ಬೋಗಿಗಳು ನಜ್ಜು ಗುಜ್ಜಾಗಿವೆ.
ಪಂಜಾಬ್‌ನಲ್ಲಿ 2 ಗೂಡ್ಸ್‌ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘತಾದಲ್ಲಿ ಸರಕು ರೈಲಿನ ಬೋಗಿಗಳು ನಜ್ಜು ಗುಜ್ಜಾಗಿವೆ.

ಫತೇಘರ್ ಸಾಹಿಬ್ (ಪಂಜಾಬ್): ದೇಶದಲ್ಲಿ ಮತ್ತೊಂದು ರೈಲು ಭೀಕರ ರೈಲು ದುರಂತ ಸಂಭವಿಸಿದೆ. ಇಂದು (ಜೂನ್ 2, ಭಾನುವಾರ) ಮುಂಜಾನೆ ಸಿರ್ಹಿಂದ್‌ನ ಮಾಧೋಪುರ್ ಬಳಿ ಎರಡು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆದಲ್ಲಿ ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀ ಫತೇಘರ್ ಸಾಹಿಬ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಗೋಡ್ಸ್ ರೈಲಿನ ಬೋಗಿಗಳು ನಜ್ಜು ಗುಜ್ಜಾಗಿವೆ.

ಟ್ರೆಂಡಿಂಗ್​ ಸುದ್ದಿ

ಬೆಳಗ್ಗೆ 3.45 ರ ಸುಮಾರಿಗೆ ಅಪಘಾತ ಸಂಭವಿರುವ ಬಗ್ಗೆ ನಮಗೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ಆಗಮಿಸಿದ್ದೇವೆ. ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಸಿರ್ಹಿಂದ್ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿ ರತನ್ ಲಾಲ್ ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ಮೂಲದ ಇಬ್ಬರು ಲೋಕೋ ಪೈಲಟ್‌ಗಳನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶ್ರೀ ಫತೇಫರ್ ಸಾಹಿಬ್ ಸಿವಿಲ್ ಆಸ್ಪತ್ರೆ ಡಾ ಇವಾನ್ ಪ್ರೀತ್ ಕೌರ್ ವಿವರಿಸಿದ್ದಾರೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024