ಮಧ್ಯಪ್ರದೇಶ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ, ಕಮಲನಾಥ್ ವಿರುದ್ಧ ಯಾರು, 36 ಸ್ಥಾನಗಳ ಪಟ್ಟಿ ಫೈನಲ್ ಎನ್ನುತ್ತಿವೆ ಮೂಲಗಳು
ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಈ ವರ್ಷ ಕೊನೆಯ ಭಾಗದಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಭಾರತೀಯ ಜನತಾಪಾರ್ಟಿ (ಬಿಜೆಪಿ), 36 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನೂ ಅಂತಿಮಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಕಮಲನಾಥ್ ವಿರುದ್ಧವೂ ಬಿಜೆಪಿ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆ 2024ಕ್ಕೆ ಪೂರ್ವಭಾವಿಯಾಗಿ ನಡೆಯಲಿರುವ ಪಂಚರಾಜ್ಯ ಚುನಾವಣೆಗಳ ಪೈಕಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯೂ ಒಂದು. ಭಾರತೀಯ ಜನತಾಪಾರ್ಟಿ (ಬಿಜೆಪಿ) ಇಲ್ಲಿ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈಗ 36 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳ ಹೇಳಿವೆ.
ಟ್ರೆಂಡಿಂಗ್ ಸುದ್ದಿ
ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ 36 ಹೆಸರುಗಳನ್ನು ಅನುಮೋದಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ ಸಂಜೆ ಅಥವಾ ಶುಕ್ರವಾರದೊಳಗೆ ಎರಡನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಬಹುದು ಎಂದು HTಕನ್ನಡ (ಹಿಂದೂಸ್ತಾನ್ ಟೈಮ್ಡ್ ಕನ್ನಡ) ದ ಸೋದರ ತಾಣ ಲೈವ್ ಹಿಂದೂಸ್ತಾನ್ ವರದಿ ಮಾಡಿದೆ.
ಮೂಲಗಳ ಪ್ರಕಾರ, ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಒಟ್ಟು 39 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳ ಬಗ್ಗೆ ಚರ್ಚೆ ನಡೆದಿತ್ತು. ಈ ಪೈಕಿ 36 ಹೆಸರುಗಳಿಗೆ ಅನುಮೋದನೆ ನೀಡಲಾಗಿದೆ. ಉಳಿದ ಮೂರು ಹೆಸರುಗಳನ್ನು ಅಂತಿಮಗೊಳಿಸುವ ಜವಾಬ್ದಾರಿಯನ್ನು ಗೃಹ ಸಚಿವ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಅಮಿತ್ ಶಾ ಅವರಿಗೆ ನೀಡಲಾಗಿದೆ. ಪ್ರಧಾನಿ ಮೋದಿ, ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ಮಾಜಿ ಮುಖ್ಯಮಂತ್ರಿ ಕಮಲನಾಥ್ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು
ಮೂಲಗಳ ಪ್ರಕಾರ, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಸಿಎಂ ಕಮಲ್ ನಾಥ್ ವಿರುದ್ಧ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಮೂಲಗಳ ಮಾಹಿತಿಯನ್ನು ನಂಬುವುದಾದರೆ, ಚಿಂದ್ವಾರಾ ಸೆಕ್ಮಲನಾಥ್ ವಿರುದ್ಧ ವಿವೇಕ್ ಸಾಹು ಅವರಿಗೆ ಟಿಕೆಟ್ ನೀಡಲಾಗಿದೆ. ಮೊರೆನಾದಿಂದ ಸಿಂಧ್ಯಾ ಪಾಳಯ ನಾಯಕ ರಘುರಾಜ್ ಕಂಸಾನ ಅವರಿಗೆ ಟಿಕೆಟ್ ನೀಡುವ ಬಗ್ಗೆ ಮಾಹಿತಿ ಇದೆ.
ಪ್ರತಿಪಕ್ಷದ ನಾಯಕ ಗೋವಿಂದ್ ಸಿಂಗ್ ವಿರುದ್ಧ ಭಿಂಡ್ ಜಿಲ್ಲೆಯ ಲಹಾರ್ ಕ್ಷೇತ್ರದಿಂದ ಅಮರೀಶ್ ಗುದ್ದುಗು ಟಿಕೆಟ್ ಪಡೆಯಬಹುದು. ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಕಟವಾಗಿರುವ ನಾಯಕ ಇಮಾರ್ತಿ ದೇವಿ ಅವರು ಗ್ವಾಲಿಯರ್‌ನ ದಬ್ರಾ ಕ್ಷೇತ್ರದಿಂದ ಅಂತಿಮ ಟಿಕೆಟ್ ಪಡೆದಿದ್ದಾರೆ.
39 ಸ್ಥಾನಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆ
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಕಳೆದ ತಿಂಗಳು ಸಭೆ ನಡೆಸಿ ಮಧ್ಯಪ್ರದೇಶದ 39 ಮತ್ತು ಛತ್ತೀಸ್‌ಗಡದ 21 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಬೇಕಿದ್ದ ಕ್ಷೇತ್ರಗಳಿವು. ಈ ಬಾರಿ ತನ್ನ ಸಂಪ್ರದಾಯಕ್ಕೆ ಚ್ಯುತಿ ತಂದಿರುವ ಬಿಜೆಪಿ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಆರಂಭಿಸಿದೆ.
ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನವೆಂಬರ್-ಡಿಸೆಂಬರ್‌ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ, ಇದು 2024 ರಲ್ಲಿ ಲೋಕಸಭೆ ಚುನಾವಣೆಗೆ ಮೊದಲು ನಡೆಯುವ ಸೆಮಿಫೈನಲ್ ಎಂದು ಪರಿಗಣಿಸಲ್ಪಟ್ಟ ಪಂಚರಾಜ್ಯ ವಿಧಾನಸಭಾ ಚುನಾವಣೆ ಇದಾಗಿದೆ.