ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್ ಅವರಿಗೂ ಭಾರತ ರತ್ನ; ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್ ಅವರಿಗೂ ಭಾರತ ರತ್ನ; ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್ ಅವರಿಗೂ ಭಾರತ ರತ್ನ; ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೂ ಭಾರತ ರತ್ನ ಘೋಷಣೆಯಾಗಿದ್ದು, ಈ ಕುರಿತು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಯಾರು, ಅವರ ಕುರಿತಾದ ಕುತೂಹಲಕರ ಮಾಹಿತಿ ಇಲ್ಲಿದೆ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೂ ಭಾರತ ರತ್ನ ಘೋಷಣೆಯಾಗಿದ್ದು, ಈ ಕುರಿತು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೂ ಭಾರತ ರತ್ನ ಘೋಷಣೆಯಾಗಿದ್ದು, ಈ ಕುರಿತು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೂ ಭಾರತ ರತ್ನ ಘೋಷಣೆಯಾಗಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.

"ದೇಶದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಸೌಭಾಗ್ಯ. ಈ ಗೌರವ ದೇಶಕ್ಕೆ ಅವರು ನೀಡಿದ ಅನುಪಮ ಕೊಡುಗೆಗೆ ಸಮರ್ಪಿಸಲಾಗಿದೆ. ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕು ಮತ್ತು ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು.." ಎಂದು ಪ್ರಧಾನಿ ಮೋದಿ ಗೌರವಪೂರ್ವಕವಾಗಿ ನೆನಪಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಥವಾ ದೇಶದ ಗೃಹ ಸಚಿವರಾಗಿ ಮತ್ತು ಶಾಸಕರಾಗಿ ಅವರು ಯಾವಾಗಲೂ ರಾಷ್ಟ್ರ ನಿರ್ಮಾಣದ ಕಾರ್ಯಗಳಿಗೆ ಉತ್ತೇಜನ ನೀಡುತ್ತಿದ್ದರು. ತುರ್ತುಪರಿಸ್ಥಿತಿಯ ವಿರುದ್ಧವೂ ಅವರು ದೃಢವಾಗಿ ನಿಂತು ಹೋರಾಡಿದ್ದರು. ನಮ್ಮ ರೈತ ಸಹೋದರ ಸಹೋದರಿಯರ ಏಳಿಗೆಗೆ ಅವರ ಸಮರ್ಪಣೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅವರು ತೋರಿದ ಬದ್ಧತೆ ಇಡೀ ದೇಶಕ್ಕೆ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

ದಿಲ್ ಜೀತ್ ಲಿಯಾ ಎಂದ ಜಯಂತ್ ಚೌಧರಿ

ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಜೊತೆಗೆ ಮೈತ್ರಿ ಸಾಧಿಸಿರುವ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ನಾಯಕ ಜಯಂತ್ ಚೌಧರಿ, ದಿಲ್ ಜೀತ್‌ ಲಿಯಾ ಎಂದು ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ ಚೌಧರಿ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಯಾರು

ಜನತಾ ಪಕ್ಷದ ನಾಯಕ, ಚೌಧರಿ ಚರಣ್ ಸಿಂಗ್ ಅವರು ಜುಲೈ 1979 ಮತ್ತು ಜನವರಿ 1980 ರಿಂದ ಭಾರತದ ಐದನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಜಾಟ್‌ ಸಮುದಾಯದರಾದ ಅವರು ರಾಜಕಾರಣಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರು ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅಗ್ರಗಣ್ಯ ರೈತ ನಾಯಕರಾಗಿದ್ದರು.

ಚೌಧರಿ ಚರಣ್‌ ಸಿಂಗ್ ಅವರ ರಾಜಕೀಯ ಜೀವನವು 1937 ರಲ್ಲಿ ಪ್ರಾರಂಭವಾಯಿತು. ಅವರು ಮೊದಲು ಛಪ್ರೌಲಿಯಿಂದ ಯುಪಿ ವಿಧಾನಸಭೆಗೆ ಆಯ್ಕೆಯಾದರು. ನಂತರ 1946, 1952, 1962 ಮತ್ತು 1967 ರಲ್ಲಿ ಅದೇ ಕ್ಷೇತ್ರವನ್ನು ಪ್ರತಿನಿಧಿಸಿದರು. ನಂತರ ಅವರು ಪಂಡಿತ್ ಗೋವಿಂದ್ ಬಲ್ಲಭ್ ಪಂತ್ ಅವರ ಸರ್ಕಾರದಲ್ಲಿ ಸಂಸದೀಯ ಕಾರ್ಯದರ್ಶಿಯಾದರು. ಕಂದಾಯ, ವೈದ್ಯಕೀಯ ಮತ್ತು ಸಾರ್ವಜನಿಕ ಆರೋಗ್ಯ, ನ್ಯಾಯ, ಮತ್ತು ಮಾಹಿತಿ ಸೇರಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದರು.

ಅವರು 1951 ರ ಜೂನ್‌ನಲ್ಲಿ, ಉತ್ತರ ಪ್ರದೇಶದಲ್ಲಿ ಸಚಿವ ಸಂಪುಟ ಸೇರಿದರು. ನ್ಯಾಯ ಮತ್ತು ಮಾಹಿತಿ ಇಲಾಖೆಗಳ ಸಚಿವರಾಗಿದ್ದ ಅವರು ನಂತರ ಅವರು 1952 ರಲ್ಲಿ ಡಾ ಸಂಪೂರ್ಣಾನಂದರ ಸಂಪುಟದಲ್ಲಿ ಕಂದಾಯ ಮತ್ತು ಕೃಷಿ ಸಚಿವರಾಗಿದ್ದರು.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.