Andhra Pradesh Accident: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಆಂಧ್ರಪ್ರದೇಶ ಸಾರಿಗೆ ಬಸ್; ಮದುವೆಗೆ ಹೊರಟಿದ್ದ 7 ಮಂದಿ ಸಾವು
ಮದುವೆಗೆ ಹೊರಟಿದ್ದ ಆಂಧ್ರ ಪ್ರದೇಶದ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಸಾಗರ ನಾಲೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಪ್ರಕಾಶಂ (ಆಂಧ್ರ ಪ್ರದೇಶ): ಆಂಧ್ರ ಪ್ರದೇಶದ (Andhra Pradesh Accident) ಪ್ರಕಾಶಂ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ (Bus Accident) ಸಂಭವಿಸಿದೆ. ಮದುವೆಗೆ ಹೊರಟ್ಟಿದ್ದ ಎಪಿಎಸ್‌ಆರ್‌ಟಿಸಿ ಬಸ್ ಎದುರುಗಡೆಯಿಂದ ಬರುತ್ತಿದ್ದ ಬಸ್ಸನ್ನು ತಪ್ಪಿಸುವಾಗ ನಿಯಂತ್ರಣ ಕಳೆದುಕೊಂಡು ಸಾಗರ ನಾಲೆಗೆ ಬಿದ್ದ ಪರಿಣಾಮ 7 ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಸೋಮವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯ ಸಹಾಯದಿಂದ ಗಾಯಾಗಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪೊಲೀಸರು ಜೆಸಿಬಿ ಸಹಾಯದಿಂದ ಬಸ್ಸನ್ನು ಮೇಲಕ್ಕೆ ಎತ್ತಿದ್ದಾರೆ.
ಮೃತರನ್ನು ಪೊದಿಲಿಯ ಅಬ್ದುಲ್ ಅಜೀಜ್ (65), ಅಬ್ದುಲ್ ಹನಿ (60), ಶೇಖ್ ರಮೀಜ್ (48), ಮುಲ್ಲಾ ನೂರ್ಜಹಾನ್ (58), ಮುಲ್ಲಾ ಜಾನಿ ಬೇಗಂ (65), ಶೇಖ್ ಶಬೀನಾ (35) ಹಾಗೂ ಶೇಖ್ ಹೀನಾ (6) ಎಂದು ಗುರುತಿಸಲಾಗಿದೆ.
ಮದುವೆ ಸಮರಾಂಭಕ್ಕಾಗಿ ಪೊದಿಲಿಯಿಂದ ಕಾಕಿನಾಡಕ್ಕೆ ಹೋಗುತ್ತಿದ್ದ ಆಂಧ್ರಪ್ರದೇಶದ ಸಾರಿಗೆ ಬಸ್‌ನಲ್ಲಿ ಒಟ್ಟು 45 ಪ್ರಯಾಣಿಕರಿದ್ದರು. ಇಬ್ಬರು ಚಾಲಕರೂ ಇದ್ದರು ಎಂದು ಜಿಲ್ಲಾ ಎಸ್ಪಿ ಮಲ್ಲಿಕಾ ಗರ್ಗ್ ಮಾಹಿತಿ ನೀಡಿದ್ದಾರೆ.
ಕಾಕಿನಾಡದಲ್ಲಿ ಹಮ್ಮಿಕೊಂಡಿದ್ದ ಮದುವೆಯ ಅರತಕ್ಷತೆಗೆ ಹೋಗಲು ಓಡೋಳಿಯ ಕುಟುಂಬ ಎಪಿಆರ್‌ಟಿಸಿ ಬಸ್‌ಅನ್ನು ಬಾಡಿಗೆಗೆ ಪಡೆದಿತ್ತು. ಬಸ್ ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಶಂಕೆಯೂ ಇದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಾಗರ ಕಾಲುವೆ ಸೇತುವೆ ಬಳಿ ಎದುರುಗಡೆಯಿಂದ ಬರುತ್ತಿದ್ದ ಬಸ್ಸನ್ನು ತಪ್ಪಿಸಲು ಹೋಗಿ ಬಸ್ ಮೊದಲು ಸೇತುವೆಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ಕೆಳಗೆ ಬಿದ್ದಿದೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರ ಚಾಲಕರು ಸುರಕ್ಷಿತವಾಗಿ ಹೊರ ಬಂದಿದ್ದು, 100 ಡಯಲ್ ಮಾಡಿ ಅಪಘಾತದ ಮಾಹಿತಿ ನೀಡಿದ್ದಾರೆ.
ಪೊದಲಿಯಿಂದ ಕಾಕಿನಾಡಕ್ಕೆ ತೆರಳತ್ತಿದ್ದಾಗ ಬಸ್ ಅಪಘಾತ ಸಂಭವಿಸಿದೆ. ಸಾಗರ ನಾಲೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಬಳಿಕ ಸುಮಾರು 30 ಅಡಿಯ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತ ಸಂಭವಿಸುತ್ತಿದ್ದಂತೆ ರಸ್ತೆಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಕಾಲುವೆಯಲ್ಲಿ ನೀರಿನಲ್ಲಿದ ಕಾರಣ ಹೆಚ್ಚಿನ ಸಾವು ನೋವು ತಪ್ಪಿದೆ. ಮೃತರೆಲ್ಲರೂ ಬಸ್ಸಿನ ಹಿಂದಿ ಸೀಟಿನಲ್ಲಿ ಕುಳಿಕೊಂಡಿದ್ದವರು ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.